Nana Patekar death mystery: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (Nana Patekar) ಅವರ ನಿಧನದ ಸುದ್ದಿ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ. ತಮ್ಮ ಅದ್ಭುತ ಅಭಿನಯ, ವಿಭಿನ್ನ ಪಾತ್ರಗಳು ಮತ್ತು ದೇಶಭಕ್ತಿಯ ಮೂಲಕ ಗುರುತಿಸಿಕೊಂಡಿದ್ದ ಈ ಹಿರಿಯ ಕಲಾವಿದ, ತೆರೆಮೇಲೆ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದ 75 ವರ್ಷದ ನಟನ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ.
ನಾನಾ ಪಾಟೇಕರ್ ಅವರ ನಿಧನದ ಬಳಿಕ ಮರಣೋತ್ತರ ಪರೀಕ್ಷೆಯ ವರದಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಂದಿದೆ ಎನ್ನಲಾಗಿದೆ. ಗೋವಾದ ಬಾಂಬೋಲಿಯಲ್ಲಿರುವ ಗೋವಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ತಜ್ಞರ ಸಮಿತಿ ನಡೆಸಿದ ಪರೀಕ್ಷೆಯಲ್ಲಿ, ಅವರ ಸಾವು ಸಹಜವಾಗಿದ್ದು, ತೀವ್ರ ಹೃದಯಾಘಾತದಿಂದ ಸಂಭವಿಸಿದೆ ಎಂದು ವರದಿಯಾಗಿದೆ.
ಪೊಲೀಸರಿಗೆ ಲಭ್ಯವಾದ ವೈದ್ಯಕೀಯ ಮಾಹಿತಿಯ ಪ್ರಕಾರ, ನಾನಾ ಪಾಟೇಕರ್ ಅವರು ಕೊರೊನರಿ ಆರ್ಟರಿ ಡಿಸೀಸ್ (CAD) ಎಂಬ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಮಸ್ಯೆಯಿಂದ ಹೃದಯಕ್ಕೆ ರಕ್ತ ಪೂರೈಸುವ ರಕ್ತನಾಳಗಳಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ರಕ್ತದ ಹರಿವು ಮತ್ತು ಆಮ್ಲಜನಕದ ಪೂರೈಕೆ ತೀವ್ರವಾಗಿ ಕಡಿಮೆಯಾದರೆ ಹೃದಯಾಘಾತ ಸಂಭವಿಸಬಹುದು. ನಿಧನದ ಬಳಿಕ ಅವರ ಮೃತದೇಹವನ್ನು ಗೋವಾ ಮೆಡಿಕಲ್ ಕಾಲೇಜಿಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ವೈದ್ಯಕೀಯ ತಜ್ಞರ ಸಮಿತಿ ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಪೊಲೀಸರಿಗೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ನಾನಾ ಪಾಟೇಕರ್ ಅವರ ಸಾವಿಗೂ ಮುನ್ನ ನಡೆದ ಘಟನೆಗಳ ಬಗ್ಗೆಯೂ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ. ರಾತ್ರಿ ಸುಮಾರು 2.30ರ ವೇಳೆಗೆ ಅವರಿಗೆ ಎದೆನೋವು ಮತ್ತು ಆತಂಕ ಕಾಣಿಸಿಕೊಂಡಿತ್ತು. ಈ ವೇಳೆ ಅವರು ತಮ್ಮ ಆಪ್ತ ಸ್ನೇಹಿತ ಅಮೇಯ್ ನಾಯ್ಕ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ, ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದರು ಎನ್ನಲಾಗಿದೆ. ಆದರೆ, ತಡರಾತ್ರಿಯಾಗಿದ್ದರಿಂದ ಅಮೇಯ್ ನಾಯ್ಕ್ ಅವರಿಗೆ ಸಂದೇಶ ತಕ್ಷಣ ಗಮನಕ್ಕೆ ಬಂದಿರಲಿಲ್ಲ. ಸುಮಾರು ಒಂದು ಗಂಟೆಯ ಬಳಿಕ ಸಂದೇಶವನ್ನು ನೋಡಿದ ಅವರು, ಕೂಡಲೇ ಡೋನಾ ಪೌಲಾದಲ್ಲಿರುವ ನಾನಾ ಪಾಟೇಕರ್ ಅವರ ಫ್ಲಾಟ್‌ಗೆ ತೆರಳಿದರು.
ಅಲ್ಲಿಗೆ ತಲುಪಿ ಬಾಗಿಲು ತೆರೆದು ನೋಡಿದಾಗ ನಾನಾ ಪಾಟೇಕರ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಬಳಿಕ ಕೇರ್‌ಟೇಕರ್ ಸಹಾಯದಿಂದ ಅವರನ್ನು ಮುಂಜಾನೆ ಸುಮಾರು 4.30ರ ವೇಳೆಗೆ ಸಮೀಪದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ವರದಿಯಾಗಿದೆ.
ಬೆಳಿಗ್ಗೆ ಸುಮಾರು 5.30ರ ವೇಳೆಗೆ ಆಸ್ಪತ್ರೆಯ ಆಡಳಿತ ಮಂಡಳಿ ಪಣಜಿ ಪೊಲೀಸರಿಗೆ ಅವರ ನಿಧನದ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ. ನಾನಾ ಪಾಟೇಕರ್ ಅವರ ಸಾವಿನ ಸುದ್ದಿ ಚಿತ್ರರಂಗದ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ. ತಮ್ಮ ವಿಶಿಷ್ಟ ಅಭಿನಯ ಶೈಲಿ, ಗಂಭೀರ ಪಾತ್ರಗಳ ನಿರ್ವಹಣೆ ಮತ್ತು ದಶಕಗಳ ಕಾಲದ ಕಲಾಸೇವೆಯಿಂದ ಗುರುತಿಸಿಕೊಂಡಿದ್ದ ನಾನಾ ಪಾಟೇಕರ್ ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ನಷ್ಟವೆಂದು ಪರಿಗಣಿಸಲಾಗಿದೆ.
ಗಮನಿಸಿ: ನಾನಾ ಪಾಟೇಕರ್ ಅವರ ನಿಧನಕ್ಕೆ ಸಂಬಂಧಿಸಿದ ಈ ಸುದ್ದಿಯನ್ನು ವಿವಿಧ ವರದಿಗಳನ್ನು ಮತ್ತು ವೈರಲ್ ಸಂಗತಿಗಳನ್ನು ಆಧರಿಸಿ ಬರೆಯಲಾಗಿದೆ. ಪೊಲೀಸ್ ತನಿಖೆಯ ಬಳಿಕವೇ ಅಸಲಿ ಸತ್ಯ ತಿಳಿಯಬೇಕಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಯಾವ ರೀತಿಯಲ್ಲೂ ದೃಢೀಕರಿಸುವುದಿಲ್ಲ. ಇದು ಕೇವಲ ಮಾಹಿತಿ ಮಾತ್ರವಾಗಿದ್ದು, ಯಾವ ರೀತಿಯಲ್ಲೂ ದೃಢೀಕರಣವಲ್ಲ.