SOCIAL MEDIA

Newsletter

PARTNER SITES
Select Language Select State

ನಾನಾ ಪಾಟೇಕರ್ ಸಾವಿಗೆ ಇದೇ ಅಸಲಿ ಕಾರಣ! ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬಿಗ್‌ ಸೀಕ್ರೇಟ್‌ ರಿವೀಲ್‌

Nana Patekar death mystery: ನಾನಾ ಪಾಟೇಕರ್ ಅವರ ಸಾವಿನ ಸುದ್ದಿ ಹಾಗೂ ಮರಣೋತ್ತರ ಪರೀಕ್ಷಾ ವರದಿಗೆ ಸಂಬಂಧಿಸಿದ ಮಾಹಿತಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

Written By Chetana Devarmani
Published: Oct 10, 2026, 10:54 PM IST | Updated: Oct 10, 2026, 10:57 PM IST
Join

Nana Patekar death mystery: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (Nana Patekar) ಅವರ ನಿಧನದ ಸುದ್ದಿ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ. ತಮ್ಮ ಅದ್ಭುತ ಅಭಿನಯ, ವಿಭಿನ್ನ ಪಾತ್ರಗಳು ಮತ್ತು ದೇಶಭಕ್ತಿಯ ಮೂಲಕ ಗುರುತಿಸಿಕೊಂಡಿದ್ದ ಈ ಹಿರಿಯ ಕಲಾವಿದ, ತೆರೆಮೇಲೆ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದ 75 ವರ್ಷದ ನಟನ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ.

ನಾನಾ ಪಾಟೇಕರ್ ಅವರ ನಿಧನದ ಬಳಿಕ ಮರಣೋತ್ತರ ಪರೀಕ್ಷೆಯ ವರದಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಂದಿದೆ ಎನ್ನಲಾಗಿದೆ. ಗೋವಾದ ಬಾಂಬೋಲಿಯಲ್ಲಿರುವ ಗೋವಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ತಜ್ಞರ ಸಮಿತಿ ನಡೆಸಿದ ಪರೀಕ್ಷೆಯಲ್ಲಿ, ಅವರ ಸಾವು ಸಹಜವಾಗಿದ್ದು, ತೀವ್ರ ಹೃದಯಾಘಾತದಿಂದ ಸಂಭವಿಸಿದೆ ಎಂದು ವರದಿಯಾಗಿದೆ.

ಪೊಲೀಸರಿಗೆ ಲಭ್ಯವಾದ ವೈದ್ಯಕೀಯ ಮಾಹಿತಿಯ ಪ್ರಕಾರ, ನಾನಾ ಪಾಟೇಕರ್ ಅವರು ಕೊರೊನರಿ ಆರ್ಟರಿ ಡಿಸೀಸ್ (CAD) ಎಂಬ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಮಸ್ಯೆಯಿಂದ ಹೃದಯಕ್ಕೆ ರಕ್ತ ಪೂರೈಸುವ ರಕ್ತನಾಳಗಳಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ರಕ್ತದ ಹರಿವು ಮತ್ತು ಆಮ್ಲಜನಕದ ಪೂರೈಕೆ ತೀವ್ರವಾಗಿ ಕಡಿಮೆಯಾದರೆ ಹೃದಯಾಘಾತ ಸಂಭವಿಸಬಹುದು. ನಿಧನದ ಬಳಿಕ ಅವರ ಮೃತದೇಹವನ್ನು ಗೋವಾ ಮೆಡಿಕಲ್ ಕಾಲೇಜಿಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ವೈದ್ಯಕೀಯ ತಜ್ಞರ ಸಮಿತಿ ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಪೊಲೀಸರಿಗೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ನಾನಾ ಪಾಟೇಕರ್ ಅವರ ಸಾವಿಗೂ ಮುನ್ನ ನಡೆದ ಘಟನೆಗಳ ಬಗ್ಗೆಯೂ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ. ರಾತ್ರಿ ಸುಮಾರು 2.30ರ ವೇಳೆಗೆ ಅವರಿಗೆ ಎದೆನೋವು ಮತ್ತು ಆತಂಕ ಕಾಣಿಸಿಕೊಂಡಿತ್ತು. ಈ ವೇಳೆ ಅವರು ತಮ್ಮ ಆಪ್ತ ಸ್ನೇಹಿತ ಅಮೇಯ್ ನಾಯ್ಕ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ, ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದರು ಎನ್ನಲಾಗಿದೆ. ಆದರೆ, ತಡರಾತ್ರಿಯಾಗಿದ್ದರಿಂದ ಅಮೇಯ್ ನಾಯ್ಕ್ ಅವರಿಗೆ ಸಂದೇಶ ತಕ್ಷಣ ಗಮನಕ್ಕೆ ಬಂದಿರಲಿಲ್ಲ. ಸುಮಾರು ಒಂದು ಗಂಟೆಯ ಬಳಿಕ ಸಂದೇಶವನ್ನು ನೋಡಿದ ಅವರು, ಕೂಡಲೇ ಡೋನಾ ಪೌಲಾದಲ್ಲಿರುವ ನಾನಾ ಪಾಟೇಕರ್ ಅವರ ಫ್ಲಾಟ್‌ಗೆ ತೆರಳಿದರು.

ಅಲ್ಲಿಗೆ ತಲುಪಿ ಬಾಗಿಲು ತೆರೆದು ನೋಡಿದಾಗ ನಾನಾ ಪಾಟೇಕರ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಬಳಿಕ ಕೇರ್‌ಟೇಕರ್ ಸಹಾಯದಿಂದ ಅವರನ್ನು ಮುಂಜಾನೆ ಸುಮಾರು 4.30ರ ವೇಳೆಗೆ ಸಮೀಪದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ವರದಿಯಾಗಿದೆ.

ಬೆಳಿಗ್ಗೆ ಸುಮಾರು 5.30ರ ವೇಳೆಗೆ ಆಸ್ಪತ್ರೆಯ ಆಡಳಿತ ಮಂಡಳಿ ಪಣಜಿ ಪೊಲೀಸರಿಗೆ ಅವರ ನಿಧನದ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ. ನಾನಾ ಪಾಟೇಕರ್ ಅವರ ಸಾವಿನ ಸುದ್ದಿ ಚಿತ್ರರಂಗದ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ. ತಮ್ಮ ವಿಶಿಷ್ಟ ಅಭಿನಯ ಶೈಲಿ, ಗಂಭೀರ ಪಾತ್ರಗಳ ನಿರ್ವಹಣೆ ಮತ್ತು ದಶಕಗಳ ಕಾಲದ ಕಲಾಸೇವೆಯಿಂದ ಗುರುತಿಸಿಕೊಂಡಿದ್ದ ನಾನಾ ಪಾಟೇಕರ್ ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ನಷ್ಟವೆಂದು ಪರಿಗಣಿಸಲಾಗಿದೆ.

ಗಮನಿಸಿ: ನಾನಾ ಪಾಟೇಕರ್ ಅವರ ನಿಧನಕ್ಕೆ ಸಂಬಂಧಿಸಿದ ಈ ಸುದ್ದಿಯನ್ನು ವಿವಿಧ ವರದಿಗಳನ್ನು ಮತ್ತು ವೈರಲ್‌ ಸಂಗತಿಗಳನ್ನು ಆಧರಿಸಿ ಬರೆಯಲಾಗಿದೆ. ಪೊಲೀಸ್‌ ತನಿಖೆಯ ಬಳಿಕವೇ ಅಸಲಿ ಸತ್ಯ ತಿಳಿಯಬೇಕಿದೆ. ಜೀ ಕನ್ನಡ ನ್ಯೂಸ್‌ ಈ ಮಾಹಿತಿಯನ್ನು ಯಾವ ರೀತಿಯಲ್ಲೂ ದೃಢೀಕರಿಸುವುದಿಲ್ಲ. ಇದು ಕೇವಲ ಮಾಹಿತಿ ಮಾತ್ರವಾಗಿದ್ದು, ಯಾವ ರೀತಿಯಲ್ಲೂ ದೃಢೀಕರಣವಲ್ಲ. 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES