SOCIAL MEDIA

Newsletter

PARTNER SITES
Select Language Select State

ಬಿಗ್‌ ಬಾಸ್‌ ಕನ್ನಡ ಶೋ ಗೆ ಶೀಘ್ರದಲ್ಲೇ ಕಾದಿದೆ ಭಾರೀ ಕಂಟಕ!

Bigg Boss Kannada Show Trouble: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ಮತ್ತೆ ಸುದ್ದಿಯಲ್ಲಿದೆ.

Written By Chetana Devarmani
Published: Nov 04, 2026, 09:42 PM IST | Updated: Nov 04, 2026, 09:43 PM IST
Join

Bigg Boss Kannada Show Trouble: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ಮತ್ತೆ ಸುದ್ದಿಯಲ್ಲಿದೆ. ಪ್ರತಿ ಸೀಸನ್‌ನಲ್ಲೂ ಸ್ಪರ್ಧಿಗಳ ನಡುವಿನ ಜಗಳ, ಮನಸ್ತಾಪ, ಆರೋಪ-ಪ್ರತ್ಯಾರೋಪ ಹಾಗೂ ಅನಿರೀಕ್ಷಿತ ಘಟನೆಗಳು ವೀಕ್ಷಕರ ಗಮನ ಸೆಳೆಯುತ್ತವೆ. ಇದೀಗ ಪ್ರಸಕ್ತ ಬಿಗ್‌ಬಾಸ್ ಸೀಸನ್ ಬಗ್ಗೆಯೂ ಮತ್ತೊಂದು ಭವಿಷ್ಯವಾಣಿ ಚರ್ಚೆಗೆ ಗ್ರಾಸವಾಗಿದೆ. ಸಂಖ್ಯಾಶಾಸ್ತ್ರಜ್ಞ ಯೋಗೇಶ್ ಅವರು ಈ ಸೀಸನ್ ಮುಕ್ತಾಯವಾಗುವ ಮುನ್ನ ಮತ್ತೊಂದು ಕೆಟ್ಟ ಸುದ್ದಿ ಎದುರಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಸಂಖ್ಯಾಶಾಸ್ತ್ರಜ್ಞ ಯೋಗೇಶ್, ಬಿಗ್‌ಬಾಸ್ ಕಾರ್ಯಕ್ರಮದ ಜನಪ್ರಿಯತೆ, ನಿರೂಪಕ ಕಿಚ್ಚ ಸುದೀಪ್ ಅವರ ಪಾತ್ರ ಹಾಗೂ ಪ್ರಸಕ್ತ ಸೀಸನ್‌ನಲ್ಲಿನ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಹೇಳಿಕೆ ಇದೀಗ ಬಿಗ್‌ಬಾಸ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಬಿಗ್‌ಬಾಸ್ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಯೋಗೇಶ್, ತಮಗೂ ಈ ಕಾರ್ಯಕ್ರಮ ಇಷ್ಟ ಎಂದು ಹೇಳಿದ್ದಾರೆ. ಅದರಲ್ಲೂ ಕಾರ್ಯಕ್ರಮದ ಜನಪ್ರಿಯತೆಗೆ ನಟ ಕಿಚ್ಚ ಸುದೀಪ್ ಅವರೇ ಪ್ರಮುಖ ಕಾರಣ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಗ್‌ಬಾಸ್ ವೇದಿಕೆಯಲ್ಲಿ ಸುದೀಪ್ ಅವರ ನಿರೂಪಣಾ ಶೈಲಿ, ಸ್ಪರ್ಧಿಗಳ ತಪ್ಪುಗಳನ್ನು ಅವರಿಗೆ ಅರ್ಥವಾಗುವಂತೆ ವಿವರಿಸುವ ರೀತಿ ಹಾಗೂ ವಾರಾಂತ್ಯದ ಸಂಚಿಕೆಗಳಲ್ಲಿ ಅವರು ಮಾತನಾಡುವ ವಿಧಾನ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ. ಸುದೀಪ್ ಇಲ್ಲದಿದ್ದರೆ ತಾವು ಬಿಗ್‌ಬಾಸ್ ನೋಡುವ ಆಸಕ್ತಿ ತೋರುತ್ತಿರಲಿಲ್ಲ ಎಂಬ ಅಭಿಪ್ರಾಯವನ್ನೂ ಹಂಚಿಕೊಂಡಿದ್ದಾರೆ. ಪ್ರಸಕ್ತ ಬಿಗ್‌ಬಾಸ್ ಸೀಸನ್ ಬಗ್ಗೆ ಸಂಖ್ಯಾಶಾಸ್ತ್ರದ ಆಧಾರದಲ್ಲಿ ವಿಶ್ಲೇಷಣೆ ಮಾಡಿರುವ ಯೋಗೇಶ್, ಈ ಬಾರಿ ಕಾರ್ಯಕ್ರಮದ ಮೇಲೆ ರಾಹುವಿನ ಪ್ರಭಾವವಿದೆ ಎಂದು ಹೇಳಿದ್ದಾರೆ. ಹಿಂದಿನ ಸೀಸನ್‌ಗಳಲ್ಲಿ ಗುರು ಗ್ರಹದ ಪ್ರಭಾವವಿದ್ದ ಕಾರಣ ಮನರಂಜನೆ ಉತ್ತಮವಾಗಿತ್ತು ಎಂಬುದು ಅವರ ಅಭಿಪ್ರಾಯ.

ಕಳೆದ ಸೀಸನ್‌ನಲ್ಲಿ ಗಿಲ್ಲಿ ನಟ ಅವರ ಉಪಸ್ಥಿತಿಯಿಂದ ಕಾರ್ಯಕ್ರಮದಲ್ಲಿ ಸಾಕಷ್ಟು ಮನರಂಜನೆ ಇತ್ತು. ವೀಕ್ಷಕರಿಗೆ ಪ್ರತಿ ಸಂಚಿಕೆಯಲ್ಲೂ ಹೊಸ ಕಿಕ್ ಸಿಗುತ್ತಿತ್ತು. ಆದರೆ ಪ್ರಸಕ್ತ ಸೀಸನ್‌ನಲ್ಲಿ ಅಂಥ ಮನರಂಜನೆ ಕಾಣಿಸುತ್ತಿಲ್ಲ. ಕಾರ್ಯಕ್ರಮ ವೀಕ್ಷಿಸಲು ಬೋರ್ ಆಗುತ್ತಿದೆ ಎಂದು ಯೋಗೇಶ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯೋಗೇಶ್ ಅವರ ಹೇಳಿಕೆಯಲ್ಲಿ ಹೆಚ್ಚು ಗಮನ ಸೆಳೆದಿರುವುದು ಪ್ರಸಕ್ತ ಸೀಸನ್‌ನ ಅಂತ್ಯದ ಕುರಿತ ಭವಿಷ್ಯವಾಣಿ. ಬಿಗ್‌ಬಾಸ್ ಕಾರ್ಯಕ್ರಮ ಮುಕ್ತಾಯವಾಗುವ ಮುನ್ನ ಮತ್ತೊಂದು ಕೆಟ್ಟ ಸುದ್ದಿ ಎದುರಾಗಬಹುದು ಎಂದು ಅವರು ಹೇಳಿದ್ದಾರೆ. ರಾಹುವಿನ ಪ್ರಭಾವದಿಂದಾಗಿ ಅನಿರೀಕ್ಷಿತ ಘಟನೆಗಳು ಹಾಗೂ ಗೊಂದಲಗಳು ಉಂಟಾಗುವ ಸಾಧ್ಯತೆಯಿದೆ ಎಂಬುದು ಅವರ ಸಂಖ್ಯಾಶಾಸ್ತ್ರದ ಲೆಕ್ಕಾಚಾರ. ಆದರೆ ಯಾವ ರೀತಿಯ ಘಟನೆ ನಡೆಯಬಹುದು ಅಥವಾ ಯಾವ ಸ್ಪರ್ಧಿಗೆ ಸಂಬಂಧಿಸಿದಂತೆ ಸಮಸ್ಯೆ ಎದುರಾಗಬಹುದು ಎಂಬುದನ್ನು ಅವರು ಸ್ಪಷ್ಟವಾಗಿ ತಿಳಿಸಿಲ್ಲ.

ಈಗಾಗಲೇ ಬಿಗ್‌ಬಾಸ್ ಮನೆಯಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳು ವೀಕ್ಷಕರಲ್ಲಿ ಚರ್ಚೆ ಹುಟ್ಟುಹಾಕಿವೆ. ಈ ಹಿನ್ನೆಲೆಯಲ್ಲಿ ಯೋಗೇಶ್ ಅವರ ಭವಿಷ್ಯವಾಣಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬಿಗ್‌ಬಾಸ್ ಕನ್ನಡದ ಈ ಸೀಸನ್ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ ಸಂಖ್ಯಾಶಾಸ್ತ್ರಜ್ಞ ಯೋಗೇಶ್ ಅವರ ಈ ಹೇಳಿಕೆಗಳು ವೈಯಕ್ತಿಕ ನಂಬಿಕೆ ಮತ್ತು ಭವಿಷ್ಯವಾಣಿಗೆ ಸಂಬಂಧಿಸಿದ್ದಾಗಿದ್ದು, ಅವರು ಹೇಳಿರುವ ಘಟನೆಗಳು ನಿಜವಾಗುತ್ತವೆಯೇ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ.

 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES