• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

ದಕ್ಷಿಣ ಭಾರತದ ಸಿನಿಮಾಗಳಲ್ಲಿ ಉತ್ತರ ಭಾರತದ ನಟಿಯರನ್ನು ಆಯ್ಕೆ ಮಾಡುವ ಪ್ರವೃತ್ತಿಯ ಬಗ್ಗೆ ರಾಧಿಕಾ ಆಪ್ಟೆ ಪ್ರಶ್ನೆ ಎತ್ತಿದ್ದಾರೆ.

Written ByChetana Devarmani
Published: Oct 29, 2026, 10:02 PM IST|Updated: Oct 29, 2026, 10:03 PM IST
joinshare
'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

2

ಹಣ ಉಳಿತಾಯ ಹಾಗೂ ನಿವೃತ್ತಿ ಯೋಜನೆಯ ಹೊಸ ದಾರಿ: ಕೇವಲ ರೂ. 1,000ಕ್ಕೆ ಭವಿಷ್ಯ ರೂಪಿಸಿ

3

ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

4

ಅಂದು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದ ಈತ ಇಂದು ಬಿಗ್ ಬಾಸ್ ಕನ್ನಡ ಸೀಸನ್ 13 ರ ಸ್ಪರ್ಧಿ!

5

'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರಾಧಿಕಾ ಆಪ್ಟೆ, ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಟಿಯರ ಆಯ್ಕೆಯ ಕುರಿತು ನೀಡಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಚರ್ಮದ ಬಣ್ಣದ ಆಧಾರದ ಮೇಲೆ ಉತ್ತರ ಭಾರತದ ನಟಿಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದು, ಸ್ಥಳೀಯ ನಟಿಯರಿಗೂ ಹೆಚ್ಚಿನ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಧಿಕಾ ಆಪ್ಟೆ ಅವರು ಇತ್ತೀಚೆಗೆ ಕೀರ್ತಿ ಸುರೇಶ್ ಜೊತೆ ನಟಿಸಿರುವ ‘ಅಕ್ಕಾ’ ವೆಬ್ ಸರಣಿಯ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ, 2019ರ ನಂತರ ತಮಿಳು ಚಿತ್ರರಂಗದಲ್ಲಿ ಹೆಚ್ಚು ಕಾಣಿಸಿಕೊಳ್ಳದಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸುವಾಗ ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಟಿಯರ ಆಯ್ಕೆ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳಲ್ಲಿ ಉತ್ತರ ಭಾರತದ ನಟಿಯರನ್ನು ಆಯ್ಕೆ ಮಾಡುವ ಪ್ರವೃತ್ತಿಯ ಬಗ್ಗೆ ರಾಧಿಕಾ ಆಪ್ಟೆ ಪ್ರಶ್ನೆ ಎತ್ತಿದ್ದಾರೆ. ಉತ್ತರ ಭಾರತದ ನಟಿಯರು ಹೆಚ್ಚು ಬಿಳಿ ಚರ್ಮ ಹೊಂದಿರುವ ಕಾರಣಕ್ಕೆ ಅವರಿಗೆ ಅವಕಾಶ ನೀಡಲಾಗುತ್ತಿದೆಯೇ ಎಂಬ ಅರ್ಥದಲ್ಲಿ ಮಾತನಾಡಿರುವ ಅವರು, ತಾವು ಅಷ್ಟೊಂದು ಬಿಳಿಯಲ್ಲ ಎಂಬುದನ್ನೂ ಪ್ರಸ್ತಾಪಿಸಿದ್ದಾರೆ. ದಕ್ಷಿಣ ಭಾರತದಲ್ಲಿಯೇ ಸುಂದರವಾದ, ಪ್ರತಿಭಾವಂತ ಹಾಗೂ ಉತ್ತಮವಾಗಿ ನಟಿಸಬಲ್ಲ ಅನೇಕ ಕಲಾವಿದೆಯರಿದ್ದಾರೆ. ಹೀಗಿರುವಾಗ ಸ್ಥಳೀಯ ನಟಿಯರಿಗೆ ಹೆಚ್ಚಿನ ಅವಕಾಶ ನೀಡಬಹುದಲ್ಲವೇ ಎಂಬುದು ಅವರ ಅಭಿಪ್ರಾಯವಾಗಿದೆ.

ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಟಿಯರ ಆಯ್ಕೆಯ ವಿಚಾರವಾಗಿ ಮಾತನಾಡಿದ ರಾಧಿಕಾ ಆಪ್ಟೆ, ಉತ್ತರ ಭಾರತದಿಂದ ನಟಿಯರನ್ನು ಕರೆತಂದು ಚಿತ್ರಗಳಲ್ಲಿ ನಟಿಸುವಂತೆ ಮಾಡುವ ಪ್ರವೃತ್ತಿಯನ್ನು ತಾವು ಪ್ರೋತ್ಸಾಹಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮುಂಬೈನಿಂದ ನಟಿಯರನ್ನು ಕರೆತಂದು ನಟಿಸುವಂತೆ ಮಾಡುವುದರ ಜೊತೆಗೆ, ಕೆಲವೊಮ್ಮೆ ಅವರ ಪಾತ್ರಗಳಿಗೆ ಮತ್ತೊಬ್ಬರಿಂದ ಡಬ್ಬಿಂಗ್ ಮಾಡಿಸುವ ಅಗತ್ಯವೇನು ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಪ್ರತಿಭೆಗೆ ಆದ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ನಟಿಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂಬ ಸಂದೇಶವನ್ನು ಅವರ ಮಾತುಗಳು ನೀಡಿವೆ.

ರಾಧಿಕಾ ಆಪ್ಟೆ ಈ ಹಿಂದೆ ‘ಆಲ್ ಇನ್ ಆಲ್ ಅಳಗು ರಾಜಾ’ ಹಾಗೂ ‘ಕಬಾಲಿ’ ಸೇರಿದಂತೆ ಕೆಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗು ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿರುವ ಅವರು, ನಂತರ ಹಿಂದಿ ಹಾಗೂ ಅಂತರರಾಷ್ಟ್ರೀಯ ಚಿತ್ರಗಳತ್ತ ಗಮನ ಹರಿಸಿದ್ದರು. ಇದೀಗ ಕೀರ್ತಿ ಸುರೇಶ್ ಜೊತೆಗಿನ ‘ಅಕ್ಕಾ’ ವೆಬ್ ಸರಣಿಯ ಪ್ರಚಾರದ ವೇಳೆ ಅವರು ಹಂಚಿಕೊಂಡಿರುವ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ. ಚಿತ್ರರಂಗದಲ್ಲಿ ಚರ್ಮದ ಬಣ್ಣಕ್ಕಿಂತ ಪ್ರತಿಭೆ, ಅಭಿನಯ ಸಾಮರ್ಥ್ಯ ಮತ್ತು ಭಾಷೆಯ ತಿಳುವಳಿಕೆಗೆ ಆದ್ಯತೆ ನೀಡಬೇಕೇ ಎಂಬ ಚರ್ಚೆಗೆ ಈ ಹೇಳಿಕೆ ಮತ್ತೊಮ್ಮೆ ಕಾರಣವಾಗಿದೆ.
 

Add Zee News as a Preferred Source
TAGS:
Sandalwood