• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಕೇವಲ ನಾಲ್ಕು ದಿನಕ್ಕೆ 500ಕೋಟಿ ಗಡಿ ತಲುಪಿದ ರಾಮಾಯಣ! ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ

ಕೇವಲ ನಾಲ್ಕು ದಿನಕ್ಕೆ 500ಕೋಟಿ ಗಡಿ ತಲುಪಿದ ರಾಮಾಯಣ! ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ

Ramayana movie collection: ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಅಕ್ಷರಶಃ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ ಇದೀಗ 500 ಕೋಟಿ ರೂಪಾಯಿ ಗಡಿ ತಲುಪಿದೆ. ಕೇವಲ ನಾಲ್ಕೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 499.20 ಕೋಟಿ ರೂಪಾಯಿ ಗಳಿಕೆ ಮಾಡಿದೆ.

Written ByRamya. R. Gowda
Published: Nov 09, 2026, 17:41 IST|Updated: Nov 09, 2026, 17:49 IST
joinshare
ಕೇವಲ ನಾಲ್ಕು ದಿನಕ್ಕೆ 500ಕೋಟಿ ಗಡಿ ತಲುಪಿದ ರಾಮಾಯಣ! ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಅಕ್ಷರಶಃ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ ಇದೀಗ 500 ಕೋಟಿ ರೂಪಾಯಿ ಗಡಿ ತಲುಪಿದೆ. ಕೇವಲ ನಾಲ್ಕೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 499.20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅದರಲ್ಲೂ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾವಣನ ಪಾತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಾಗಾದ್ರೆ ನಾಲ್ಕು ದಿನಗಳಲ್ಲಿ ರಾಮಾಯಣ ಮಾಡಿದ ಕಲೆಕ್ಷನ್ ಎಷ್ಟು? ಇಲ್ಲಿದೆ ಕಂಪ್ಲೀಟ್ ಬಾಕ್ಸ್ ಆಫೀಸ್ ಲೆಕ್ಕಾಚಾರ.


ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ನವೆಂಬರ್ 5ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ದಿನದಿಂದಲೇ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ನಾಲ್ಕನೇ ದಿನವಾದ ಭಾನುವಾರ ಭಾರತದಲ್ಲಿ 56.15 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಭಾನುವಾರದ ರಜಾದಿನದ ಲಾಭ ಪಡೆದುಕೊಂಡ ಸಿನಿಮಾ, ದೇಶಾದ್ಯಂತ 21,770 ಪ್ರದರ್ಶನಗಳ ಮೂಲಕ ಭರ್ಜರಿ ಗಳಿಕೆ ಮಾಡಿದೆ.

ಭಾಷಾವಾರು ಕಲೆಕ್ಷನ್‌ನಲ್ಲಿ ಹಿಂದಿ ನಂಬರ್ ಒನ್!

ಭಾಷಾವಾರು ಕಲೆಕ್ಷನ್ ಲೆಕ್ಕಾಚಾರದಲ್ಲಿ ಹಿಂದಿ ಆವೃತ್ತಿ ಮೊದಲ ಸ್ಥಾನದಲ್ಲಿದೆ. 17,755 ಪ್ರದರ್ಶನಗಳಿಂದ 36.75 ಕೋಟಿ ರೂಪಾಯಿ ಗಳಿಸಿದೆ. ಕನ್ನಡದ ಆವೃತ್ತಿ 910 ಪ್ರದರ್ಶನಗಳ ಮೂಲಕ 7.25 ಕೋಟಿ ರೂಪಾಯಿ ಸಂಗ್ರಹಿಸಿದೆ. ತೆಲುಗು 6.25 ಕೋಟಿ, ತಮಿಳು 3.15 ಕೋಟಿ ಹಾಗೂ ಮಲಯಾಳಂ ಆವೃತ್ತಿ 2.75 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾನುವಾರ ಚಿತ್ರಕ್ಕೆ ಶೇಕಡಾ 38ರಷ್ಟು ಆಕ್ಯುಪೆನ್ಸಿ ದಾಖಲಾಗಿದೆ.

ನಾಲ್ಕು ದಿನಗಳ ಭಾರತದ ಗಳಿಕೆ ಎಷ್ಟು?
ಇನ್ನು ಮೊದಲ ದಿನ ಗುರುವಾರ 64.85 ಕೋಟಿ ರೂಪಾಯಿ, ಎರಡನೇ ದಿನ ಶುಕ್ರವಾರ 48.05 ಕೋಟಿ ರೂಪಾಯಿ ಹಾಗೂ ಮೂರನೇ ದಿನ ಶನಿವಾರ 69.80 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿತ್ತು. ನಾಲ್ಕನೇ ದಿನ ಭಾನುವಾರ 56.15 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಒಟ್ಟು 238.85 ಕೋಟಿ ರೂಪಾಯಿ ನೆಟ್ ಹಾಗೂ 285.20 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ದಾಖಲಿಸಿದೆ.

ಭಾರತದ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ವಿದೇಶಿ ಮಾರುಕಟ್ಟೆಯಲ್ಲೂ ರಾಮಾಯಣ ಹವಾ ಜೋರಾಗಿದೆ. ನಾಲ್ಕನೇ ದಿನದ ಓವರ್‌ಸೀಸ್ ಕಲೆಕ್ಷನ್ 45 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಈ ಮೂಲಕ ಒಟ್ಟು ವಿದೇಶಿ ಗ್ರಾಸ್ ಕಲೆಕ್ಷನ್ 214 ಕೋಟಿ ರೂಪಾಯಿಗೆ ತಲುಪಿದೆ. ಭಾರತದ ಗ್ರಾಸ್ ಮತ್ತು ವಿದೇಶಿ ಗಳಿಕೆಯನ್ನು ಸೇರಿಸಿದರೆ ಚಿತ್ರದ ಜಾಗತಿಕ ಕಲೆಕ್ಷನ್ ಬರೋಬ್ಬರಿ 499.20 ಕೋಟಿ ರೂಪಾಯಿ. ಅಂದರೆ 500 ಕೋಟಿ ಕ್ಲಬ್ ಸೇರಲು ಬೇಕಿರುವುದು ಕೇವಲ 80 ಲಕ್ಷ ರೂಪಾಯಿ!

ರಾಮನಾಗಿ ರಣಬೀರ್.. ಸೀತೆಯಾಗಿ ಸಾಯಿ ಪಲ್ಲವಿ.. ರಾವಣನಾಗಿ ಯಶ್!
ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದರೆ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡದ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಅಬ್ಬರಿಸಿದ್ದಾರೆ. ಅದ್ದೂರಿ ಸೆಟ್‌ಗಳು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಅದ್ಭುತ ದೃಶ್ಯಗಳ ಮೂಲಕ ಭಾರತೀಯ ಪೌರಾಣಿಕ ಕಥೆಯನ್ನು ತೆರೆಮೇಲೆ ಕಟ್ಟಿಕೊಡಲಾಗಿದೆ.

ಒಟ್ಟಿನಲ್ಲಿ ಬಿಡುಗಡೆಯಾದ ಕೇವಲ ನಾಲ್ಕೇ ದಿನಗಳಲ್ಲಿ ವಿಶ್ವಾದ್ಯಂತ 499.20 ಕೋಟಿ ರೂಪಾಯಿ ಗಳಿಸಿರುವ ರಾಮಾಯಣ ಇದೀಗ 500 ಕೋಟಿ ಕ್ಲಬ್‌ನ ಹೊಸ್ತಿಲಲ್ಲಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಯಾವೆಲ್ಲ ದಾಖಲೆಗಳನ್ನು ಪುಡಿಗಟ್ಟಲಿದೆ ಅನ್ನೋ ಕುತೂಹಲ ಸಿನಿಪ್ರಿಯರಲ್ಲಿ ಮನೆಮಾಡಿದೆ.

 

 

Add Zee News as a Preferred Source
TAGS:
Bigg Boss Kannada Season 13