• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ʼಪವಿತ್ರಾ ಯಾರು ಗೊತ್ತಾ?ʼ; ರೇಣುಕಾಸ್ವಾಮಿ ಎದುರೇ ನಟ ದರ್ಶನ್ ಹೇಳಿದ್ದೇನು?

ʼಪವಿತ್ರಾ ಯಾರು ಗೊತ್ತಾ?ʼ; ರೇಣುಕಾಸ್ವಾಮಿ ಎದುರೇ ನಟ ದರ್ಶನ್ ಹೇಳಿದ್ದೇನು?

ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಶ್ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಘಟನೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾಗಿ ಹಾಗೂ ಪವಿತ್ರಾ ಗೌಡ ಭುಜದ ಮೇಲೆ ಕೈಹಾಕಿ ‘ಇವಳು ನನ್ನ ಹೆಂಡತಿ’ ಎಂದು ಹೇಳಿದ್ದಾಗಿ ಪ್ರದೋಶ್ ತಿಳಿಸಿದ್ದಾರೆಂದು ವರದಿಯಾಗಿದೆ.

Written ByPuttaraj K Alur
Published: Sep 29, 2026, 01:16 PM IST|Updated: Sep 29, 2026, 01:40 PM IST
joinshare
ʼಪವಿತ್ರಾ ಯಾರು ಗೊತ್ತಾ?ʼ; ರೇಣುಕಾಸ್ವಾಮಿ ಎದುರೇ ನಟ ದರ್ಶನ್ ಹೇಳಿದ್ದೇನು?
Image Credit: Renukaswamy Case

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Renukaswamy Murder Case: ಚಿತ್ರುದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆ ಇದೀಗ ಮತ್ತೊಂದು ಮಹತ್ವದ ಹಂತ ತಲುಪಿದೆ. ಪ್ರಕರಣದ 14ನೇ ಆರೋಪಿ ಆಗಿದ್ದ ಪ್ರದೋಷ್‌ ರಾವ್‌ ಇದೀಗ ಮಾಫಿ ಸಾಕ್ಷಿಯಾಗಿದ್ದು, ಬೆಂಗಳೂರಿನ 59ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಸೆಪ್ಟೆಂಬರ್‌ 28ರಂದು ಪ್ರದೋಷ್‌ ಸತತ ಮೂರು ಗಂಟೆಗಳ ಕಾಲ ಹೇಳಿಕೆ ನೀಡಿದ್ದು, ಪ್ರಕರಣದ ಘಟನೆಗಳು, ರೇಣುಕಾಸ್ವಾಮಿಯನ್ನ ಪಟ್ಟಣಗೆರೆ ಶೆಡ್‌ಗೆ ಕರೆತಂದ ಸಂದರ್ಭ ಹಾಗೂ ಅಲ್ಲಿ ನಡೆದ ಘಟನೆಗಳ ಕುರಿತು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಪ್ರದೋಷ್‌ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮಾಡಿದ್ದ ಮನವಿಯನ್ನ ನ್ಯಾಯಾಲಯ ಈ ಹಿಂದೆ ಅಂಗೀಕರಿಸಿತ್ತು. ಆತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಹಾಗೂ ಸತ್ಯವಾದ ಮಾಹಿತಿಯನ್ನ ನೀಡಬೇಕೆಂಬ ಷರತ್ತಿನೊಂದಿಗೆ ಮಾಫಿ ನೀಡಲಾಗಿದೆ. ಕರ್ನಾಟಕ ಹೈಕೋರ್ಟ್‌ ಕೂಡ ಪ್ರದೋಷ್‌ ಮಾಫಿ ಸಾಕ್ಷಿ ಸ್ಥಾನಮಾನವನ್ನ ಎತ್ತಿಹಿಡಿದಿದೆ.

ರೇಣುಕಾಸ್ವಾಮಿಯನ್ನ ಶೆಡ್‌ಗೆ ಕರೆತಂದ ಬಗ್ಗೆ ಹೇಳಿಕೆ

ಪ್ರದೋಷ್‌ ಹೇಳಿಕೆಯ ಪ್ರಕಾರ, ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿಯನ್ನ ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಹೋಗಲಾಗಿತ್ತು. ಈ ವಿಚಾರ ನಟ ದರ್ಶನ್‌ಗೆ ತಿಳಿದ ಬಳಿಕ ಅವರು ಶೆಡ್‌ಗೆ ಬಂದಿದ್ದರು ಎಂದು ಪ್ರದೋಷ್‌ ನ್ಯಾಯಾಲಯದಲ್ಲಿ ವಿವರಿಸಿರುವುದಾಗಿ ವರದಿಯಾಗಿದೆ. ಶೆಡ್‌ನಲ್ಲಿ ರೇಣುಕಾಸ್ವಾಮಿ ಮತ್ತು ದರ್ಶನ್‌ ನಡುವೆ ನಡೆದ ಸಂಭಾಷಣೆ ಹಾಗೂ ನಂತರ ನಡೆದ ಘಟನೆಗಳ ಕುರಿತು ಪ್ರದೋಷ್‌ ವಿವರಿಸಿದ್ದಾರೆಂದು ವರದಿಗಳು ತಿಳಿಸಿವೆ. ಈ ಹೇಳಿಕೆ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆಯುವ ಸಾಧ್ಯತೆ ಇದೆ.

‘ಇವಳು ಯಾರು ಗೊತ್ತಾಯ್ತಾ?’ ಎಂದು ಕೇಳಿದ್ದರಂತೆ

ಪ್ರದೋಷ್‌ ನೀಡಿರುವ ಹೇಳಿಕೆಯ ಪ್ರಕಾರ, ದರ್ಶನ್‌ ಅವರು ರೇಣುಕಾಸ್ವಾಮಿಗೆ ಪವಿತ್ರಾ ಗೌಡ ಬಗ್ಗೆ ಪ್ರಶ್ನೆ ಮಾಡಿದ್ದರು. ರೇಣುಕಾಸ್ವಾಮಿ ಕೈ ಮುಗಿದು ಕ್ಷಮೆ ಕೇಳಿದ್ದರೆಂದು ಪ್ರದೋಷ್‌ ಹೇಳಿದ್ದಾರೆಂದು ವರದಿಯಾಗಿದೆ. ಇದೇ ಸಂದರ್ಭದಲ್ಲಿ ಪವಿತ್ರಾ ಗೌಡ ಭುಜದ ಮೇಲೆ ಕೈ ಇಟ್ಟು, ‘ಇವಳು ನನ್ನ ಹೆಂಡತಿ’ಅಂತಾ ನಟ ದರ್ಶನ್‌ ಹೇಳಿದ್ದರೆಂದು ಪ್ರದೋಷ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ. ಅಲ್ಲದೆ ಪವಿತ್ರಾಗೆ ಸಂದೇಶ ಕಳುಹಿಸುವ ಬಗ್ಗೆ ದರ್ಶನ್‌ ರೇಣುಕಾಸ್ವಾಮಿಯನ್ನ ಪ್ರಶ್ನಿಸಿದ್ದರು ಎಂದು ಪ್ರದೋಷ್‌ ಹೇಳಿದ್ದಾರೆ.

ಹಲ್ಲೆಯ ಬಗ್ಗೆಯೂ ಪ್ರದೋಷ್ ಹೇಳಿಕೆ

ರೇಣುಕಾಸ್ವಾಮಿ ಶೆಡ್‌ಗೆ ಬಂದ ನಂತರ ನಡೆದ ಹಲ್ಲೆಯ ಬಗ್ಗೆಯೂ ಪ್ರದೋಷ್‌ ನ್ಯಾಯಾಲಯದಲ್ಲಿ ಮಾಹಿತಿ ನೀಡಿದ್ದಾನೆಂದು ವರದಿಯಾಗಿದೆ. ನಟ ದರ್ಶನ್‌ ಅವರು ರೇಣುಕಾಸ್ವಾಮಿಗೆ ಹೊಡೆದರು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಪ್ರದೋಷ್‌ ಹೇಳಿರುವುದಾಗಿ ವರದಿಗಳು ತಿಳಿಸಿವೆ. ಇದಲ್ಲದೆ ರೇಣುಕಾಸ್ವಾಮಿ ಮರ್ಮಾಂಗಕ್ಕೆ ದರ್ಶನ್‌ ಒದ್ದರು ಎಂದು ಕೂಡ ಪ್ರದೋಷ್‌ ಹೇಳಿರುವುದಾಗಿ ವರದಿಯಾಗಿದೆ. ಈ ಎಲ್ಲವೂ ಪ್ರಸ್ತುತ ಮಾಫಿ ಸಾಕ್ಷಿ ಪ್ರದೋಷ್‌ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯ ಭಾಗವಾಗಿದ್ದು, ಪ್ರಕರಣದ ವಿಚಾರಣೆ ಇನ್ನೂ ಮುಂದುವರಿಯುತ್ತಿದೆ.

ಮೂರು ಗಂಟೆಗಳ ಕಾಲ ಹೇಳಿಕೆ ದಾಖಲು

ಸೆಪ್ಟೆಂಬರ್‌ 28ರಂದು ಪ್ರದೋಷ್‌ ಹೇಳಿಕೆಯನ್ನ ನ್ಯಾಯಾಲಯದಲ್ಲಿ ಇನ್‌ಕ್ಯಾಮೆರಾ ವಿಚಾರಣೆಯ ಮೂಲಕ ದಾಖಲಿಸಲಾಗಿದೆ. ಸುಮಾರು ಮೂರು ಗಂಟೆಗಳ ಕಾಲ ಹೇಳಿಕೆ ದಾಖಲಿಸಲಾಗಿದ್ದು, ಹೇಳಿಕೆಯ ಪ್ರತಿಯನ್ನ ಸಿದ್ಧಪಡಿಸಿ ಪ್ರದೋಷ್‌ ಸಹಿ ಪಡೆಯಬೇಕಿರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನ ಮುಂದಿನ ದಿನಕ್ಕೆ ಮುಂದೂಡಲಾಗಿತ್ತು ಎಂದು ವರದಿಯಾಗಿದೆ. ಪ್ರದೋಷ್‌ ಹೇಳಿಕೆಯಲ್ಲಿ ದರ್ಶನ್‌ ಜೊತೆಗಿನ ತಮ್ಮ ಸಂಪರ್ಕ, ರೇಣುಕಾಸ್ವಾಮಿಯನ್ನ ಕರೆತಂದ ಸಂದರ್ಭ ಹಾಗೂ ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಘಟನೆಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ ಏನು?

ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ 2024ರ ಜೂನ್‌ನಲ್ಲಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹಲವು ಮಂದಿ ಆರೋಪಿಗಳಾಗಿದ್ದಾರೆ. ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ವಿಚಾರಣೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧದ ಆರೋಪಗಳು ಇನ್ನೂ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿವೆ. ಪ್ರಕರಣದಲ್ಲಿ ಪ್ರದೋಷ್‌ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದು ಇತ್ತೀಚಿನ ಪ್ರಮುಖ ಬೆಳವಣಿಗೆಯಾಗಿದೆ. ಪ್ರದೋಷ್‌ ಪ್ರಕರಣದ ಇತರ ಆರೋಪಿಗಳ ಪಾತ್ರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂಬ ಷರತ್ತು ವಿಧಿಸಲಾಗಿದೆ.

ಪ್ರದೋಷ್‌ ಹೇಳಿಕೆಯ ದಾಖಲಾತಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ವಿಚಾರಣೆಯಲ್ಲಿ ಅವರು ನೀಡುವ ಮಾಹಿತಿಯತ್ತ ಇದೀಗ ಎಲ್ಲರ ಗಮನ ನೆಟ್ಟಿದೆ. ಇದೇ ವೇಳೆ ಆರೋಪಿಗಳ ಪರ ವಕೀಲರಿಗೆ ಪ್ರದೋಷ್‌ ಹೇಳಿಕೆಯನ್ನ ವಿಚಾರಣೆಯ ಸಂದರ್ಭದಲ್ಲಿ ಪ್ರಶ್ನಿಸುವ ಅವಕಾಶವಿದೆ ಎಂಬುದನ್ನೂ ಗಮನಿಸಬೇಕಾಗಿದೆ.

Add Zee News as a Preferred Source
TAGS:
Cinema
Kannada News