• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಆ ಒಂದು ಕಾರಣಕ್ಕೆ ಶ್ರದ್ಧಾ ಕಪೂರ್‌ಗೆ ಕ್ಷಮೆಯಾಚಿಸಿದ ಸಲ್ಮಾನ್ ಖಾನ್

ಆ ಒಂದು ಕಾರಣಕ್ಕೆ ಶ್ರದ್ಧಾ ಕಪೂರ್‌ಗೆ ಕ್ಷಮೆಯಾಚಿಸಿದ ಸಲ್ಮಾನ್ ಖಾನ್

salman khan shraddha kapoor to apologize:salman khan shraddha kapoor to apologize: ಬಾಲಿವುಡ್‌ನ ಸಲ್ಮಾನ್ ಖಾನ್ ಶ್ರದ್ಧಾ ಕಪೂರ್‌ಗೆ ಫೋನ್‌ ಮಾಡಿ ಕ್ಷಮೆಯಾಚಿಸಿದ್ದಾರೆ

Written ByRamya. R. Gowda
Published: Nov 22, 2026, 13:34 IST|Updated: Nov 22, 2026, 14:09 IST
joinshare
ಆ ಒಂದು ಕಾರಣಕ್ಕೆ ಶ್ರದ್ಧಾ ಕಪೂರ್‌ಗೆ ಕ್ಷಮೆಯಾಚಿಸಿದ ಸಲ್ಮಾನ್ ಖಾನ್

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

salman khan shraddha kapoor to apologize: ಬಾಲಿವುಡ್‌ನ ಸಲ್ಮಾನ್ ಖಾನ್ ಶ್ರದ್ಧಾ ಕಪೂರ್‌ಗೆ ಫೋನ್‌ ಮಾಡಿ ಕ್ಷಮೆಯಾಚಿಸಿದ್ದಾರೆ 
ಬಾಲಿವುಡ್‌ನಲ್ಲಿ ಬಾಕ್ಸ್ ಆಫೀಸ್ ಕ್ಲ್ಯಾಶ್ ಸಾಮಾನ್ಯ. ಆದರೆ ಸಲ್ಮಾನ್ ಖಾನ್ ಮಾತ್ರ ಪೈಪೋಟಿಯ ನಡುವೆಯೂ ದೊಡ್ಡತನ ಮೆರೆದಿದ್ದಾರೆ. ತಮ್ಮ ಸಿನಿಮಾ ಬಿಡುಗಡೆಯ ದಿನವೇ ನಟಿ ಶ್ರದ್ಧಾ ಕಪೂರ್ ಅಭಿನಯದ ಚಿತ್ರವೂ ತೆರೆಗೆ ಬರುತ್ತಿರುವ ವಿಚಾರ ತಿಳಿದು, ನೇರವಾಗಿ ಶ್ರದ್ಧಾಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ. ಅಷ್ಟೇ ಅಲ್ಲ, ಅವರ ಸಿನಿಮಾಗೂ ಶುಭ ಹಾರೈಸಿ ಗಮನ ಸೆಳೆದಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ 'ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್' ಸಿನಿಮಾ ಡಿಸೆಂಬರ್ 4ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೇ ದಿನ ಶ್ರದ್ಧಾ ಕಪೂರ್ ಅಭಿನಯದ 'ಈಠಾ' ಸಿನಿಮಾ ಕೂಡ ತೆರೆಗೆ ಬರಲು ಸಜ್ಜಾಗಿದೆ. ಹೀಗಾಗಿ ಒಂದೇ ದಿನ ಎರಡು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಮುಖಾಮುಖಿಯಾಗಲಿವೆ. ತಮ್ಮ ಸಿನಿಮಾದ ಬಿಡುಗಡೆಯ ದಿನಾಂಕ ನಿಗದಿಪಡಿಸುವಾಗ ಶ್ರದ್ಧಾ ಕಪೂರ್ ಅವರ ಸಿನಿಮಾ ಕೂಡ ಅದೇ ದಿನ ಬಿಡುಗಡೆಯಾಗುತ್ತಿರುವ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಸಲ್ಮಾನ್ ಹೇಳಿದ್ದಾರೆ. 

ಈ ವಿಚಾರ ಮೊದಲೇ ಗೊತ್ತಿದ್ದರೆ ಖಂಡಿತವಾಗಿಯೂ ಬೇರೆ ದಿನಾಂಕ ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದು ತಿಳಿಸಿದ್ದಾರೆ. ಬಳಿಕ ಶ್ರದ್ಧಾಗೆ ಕರೆ ಮಾಡಿ ಕ್ಷಮೆ ಕೇಳಿದ್ದು, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಸಲ್ಮಾನ್ ಖಾನ್ ಅವರ ಸೌಜನ್ಯದ ನಡೆಗೆ ಶ್ರದ್ಧಾ ಕಪೂರ್ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಸಿನಿಮಾಗಳ ಬಿಡುಗಡೆಗೆ ಸಾಕಷ್ಟು ಅವಕಾಶಗಳಿವೆ. ಹೀಗಾಗಿ ಈ ವಿಚಾರವನ್ನು ದೊಡ್ಡ ಸಮಸ್ಯೆಯಾಗಿ ನೋಡುವ ಅಗತ್ಯವಿಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ.

ಈಠಾ ಸಿನಿಮಾಕ್ಕೂ ಭಾಯ್‌ಜಾನ್ ಪ್ರಮೋಷನ್!

ಇಲ್ಲೊಂದು ವಿಶೇಷ ಸಂಗತಿಯೂ ಇದೆ. ತಮ್ಮ ಸಿನಿಮಾ ಬಿಡುಗಡೆಯಾಗುತ್ತಿದ್ದರೂ ಸಲ್ಮಾನ್ ಖಾನ್ ಶ್ರದ್ಧಾ ಕಪೂರ್ ಅವರ 'ಈಠಾ' ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ. ಚಿತ್ರದ ಪೋಸ್ಟರ್ ಅನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡು ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರೇಕ್ಷಕರು ಈ ಸಿನಿಮಾವನ್ನೂ ಚಿತ್ರಮಂದಿರಗಳಲ್ಲಿ ವೀಕ್ಷಿಸುವಂತೆ ಪ್ರೋತ್ಸಾಹಿಸಿದ್ದಾರೆ.

ಖ್ಯಾತ ಲಾವಣಿ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನದಿಂದ ಪ್ರೇರಣೆ ಪಡೆದಿರುವ 'ಈಠಾ' ಸಿನಿಮಾವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಿದ್ದಾರೆ. ಸಂಗೀತ, ನೃತ್ಯ ಮತ್ತು ಕಲಾವಿದೆಯ ಬದುಕಿನ ಹೋರಾಟ ಈ ಚಿತ್ರದ ಪ್ರಮುಖ ಆಕರ್ಷಣೆಗಳಾಗಿವೆ.

ಒಂದೆಡೆ ಸಲ್ಮಾನ್ ಖಾನ್ ಅವರ 'ಮಾತೃಭೂಮಿ', ಮತ್ತೊಂದೆಡೆ ಶ್ರದ್ಧಾ ಕಪೂರ್ ಅವರ 'ಈಠಾ'. ಡಿಸೆಂಬರ್ 4ರಂದು ಈ ಎರಡು ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಪೈಪೋಟಿ ನಡೆಯಲಿದೆ. ಆದರೆ ಪೈಪೋಟಿಯ ನಡುವೆಯೂ ಮತ್ತೊಬ್ಬ ಕಲಾವಿದೆಯ ಸಿನಿಮಾಗೆ ಬೆಂಬಲ ನೀಡಿರುವ ಸಲ್ಮಾನ್ ಖಾನ್ ನಡೆ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಪ್ರೇಕ್ಷಕರು ಯಾವ ಚಿತ್ರಕ್ಕೆ ಹೆಚ್ಚು ಮನ್ನಣೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇತ್ತ ಮಾತೃಭೂಮಿ

ಬಾಲಿವುಡ್‌ನ ಭಾಯ್‌ಜಾನ್ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ 'ಮಾತೃಭೂಮಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟ್ರೇಲರ್ ನೋಡಿದ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಟೀಕೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಈ ಟೀಕೆಗಳಿಗೆ ಇದೀಗ ಸಲ್ಮಾನ್ ಖಾನ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಟೀಕೆಗಳಿಗೆ ಸಲ್ಮಾನ್ ಉತ್ತರ:
'ಮಾತೃಭೂಮಿ' ಟ್ರೇಲರ್‌ನಲ್ಲಿ ಕಾಣಿಸಿಕೊಂಡಿರುವ ಕಥಾಹಂದರ, ದೃಶ್ಯಗಳು ಹಾಗೂ ಸಿನಿಮಾ ನಿರೂಪಣೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ಚಿತ್ರದ ಕಂಟೆಂಟ್ ಬಗ್ಗೆ ಪ್ರಶ್ನೆ ಎತ್ತಿದರೆ, ಮತ್ತೆ ಕೆಲವರು ಟ್ರೇಲರ್ ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಟೀಕಿಸಿದ್ದಾರೆ.

ಈ ಎಲ್ಲಾ ಟೀಕೆಗಳ ನಡುವೆ ಸಲ್ಮಾನ್ ಖಾನ್ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದ ಬಗ್ಗೆ ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳಿಗೆ ತಲೆಕೆಡಿಸಿಕೊಳ್ಳದೆ ತಮ್ಮ ಸಿನಿಮಾದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರೀ ನಿರೀಕ್ಷೆಯ ಮಾತೃಭೂಮಿ:
ಸಲ್ಮಾನ್ ಖಾನ್ ಅವರ ಈ ಸಿನಿಮಾ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಪರ-ವಿರೋಧದ ಚರ್ಚೆ ಜೋರಾಗಿದೆ. ಇದೀಗ ಸಲ್ಮಾನ್ ಅವರ ಪ್ರತಿಕ್ರಿಯೆ ಕೂಡ ಸಿನಿಮಾ ಮೇಲಿನ ಚರ್ಚೆಯನ್ನು ಮತ್ತಷ್ಟು ಹೆಚ್ಚಿಸಿದೆ.

 

Add Zee News as a Preferred Source
TAGS:
Cinema