• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /20 ವರ್ಷಗಳ ಹಿಂದೆಯೇ ‘ರಾಮಾಯಣ’ ಸಿನಿಮಾ ಮಾಡಲು ಮುಂದಾಗಿದ್ದ ಸಲ್ಮಾನ್ ಖಾನ್; ಕೊನೆ ಕ್ಷಣದಲ್ಲಿ ಯೋಜನೆ ಕೈಬಿಟ್ಟಿದ್ದೇಕೆ?

20 ವರ್ಷಗಳ ಹಿಂದೆಯೇ ‘ರಾಮಾಯಣ’ ಸಿನಿಮಾ ಮಾಡಲು ಮುಂದಾಗಿದ್ದ ಸಲ್ಮಾನ್ ಖಾನ್; ಕೊನೆ ಕ್ಷಣದಲ್ಲಿ ಯೋಜನೆ ಕೈಬಿಟ್ಟಿದ್ದೇಕೆ?

ಪ್ರಚಾರದ ಸಂದರ್ಭದಲ್ಲಿ ನಡೆದ ಸಂವಾದದಲ್ಲಿ ಪತ್ರಕರ್ತರು ಸಲ್ಮಾನ್ ಖಾನ್ ಅವರಿಗೆ ‘ರಾಮಾಯಣ’ ಸಿನಿಮಾದಲ್ಲಿ ನಟಿಸುವ ಆಸಕ್ತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಒಂದು ವೇಳೆ ಅವಕಾಶ ದೊರೆತರೆ ಭಗವಾನ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲು ಇಷ್ಟಪಡುತ್ತೀರಾ ಎಂಬ ಪ್ರಶ್ನೆಯೂ ಎದುರಾಗಿದೆ.

Written ByChetana Devarmani
Published: Nov 09, 2026, 23:56 IST|Updated: Nov 09, 2026, 23:57 IST
joinshare
20 ವರ್ಷಗಳ ಹಿಂದೆಯೇ ‘ರಾಮಾಯಣ’ ಸಿನಿಮಾ ಮಾಡಲು ಮುಂದಾಗಿದ್ದ ಸಲ್ಮಾನ್ ಖಾನ್; ಕೊನೆ ಕ್ಷಣದಲ್ಲಿ ಯೋಜನೆ ಕೈಬಿಟ್ಟಿದ್ದೇಕೆ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ರಣ್‌ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ’ ಸಿನಿಮಾ ಇದೀಗ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಅದ್ಧೂರಿ ತಯಾರಿ, ಭವ್ಯ ದೃಶ್ಯಗಳು ಹಾಗೂ ದೊಡ್ಡ ತಾರಾಗಣದಿಂದಾಗಿ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಕಲಾವಿದರ ಆಯ್ಕೆ ಮತ್ತು ನಿರ್ಮಾಣದ ವೈಭವದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹಳೆಯ ಹೇಳಿಕೆಯೊಂದು ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು ಎರಡು ದಶಕಗಳ ಹಿಂದೆಯೇ ಅವರು ಕೂಡ ‘ರಾಮಾಯಣ’ ಸಿನಿಮಾ ನಿರ್ಮಿಸುವ ಆಲೋಚನೆ ಹೊಂದಿದ್ದರಂತೆ. ಆದರೆ ಆ ಯೋಜನೆ ಆರಂಭವಾಗುವ ಮೊದಲೇ ಸ್ಥಗಿತಗೊಂಡಿತ್ತು.

ಸದ್ಯ ಸಲ್ಮಾನ್ ಖಾನ್ ತಮ್ಮ ಮುಂಬರುವ ‘ಮಾತೃಭೂಮಿ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ‘ಬ್ಯಾಟಲ್ ಆಫ್ ಗಲ್ವಾನ್’ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದ ಈ ಚಿತ್ರಕ್ಕೆ ಬಳಿಕ ಹೊಸ ಶೀರ್ಷಿಕೆ ನೀಡಲಾಗಿದೆ. ಪ್ರಚಾರದ ಸಂದರ್ಭದಲ್ಲಿ ನಡೆದ ಸಂವಾದದಲ್ಲಿ ಪತ್ರಕರ್ತರು ಸಲ್ಮಾನ್ ಖಾನ್ ಅವರಿಗೆ ‘ರಾಮಾಯಣ’ ಸಿನಿಮಾದಲ್ಲಿ ನಟಿಸುವ ಆಸಕ್ತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಒಂದು ವೇಳೆ ಅವಕಾಶ ದೊರೆತರೆ ಭಗವಾನ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲು ಇಷ್ಟಪಡುತ್ತೀರಾ ಎಂಬ ಪ್ರಶ್ನೆಯೂ ಎದುರಾಗಿದೆ.

ಈ ಪ್ರಶ್ನೆಗೆ ಉತ್ತರಿಸಿದ ಸಲ್ಮಾನ್ ಖಾನ್, ಸುಮಾರು 20 ವರ್ಷಗಳ ಹಿಂದೆ ತಾವು ಕೂಡ ‘ರಾಮಾಯಣ’ ಸಿನಿಮಾ ಮಾಡುವ ಯೋಜನೆ ರೂಪಿಸಿದ್ದ ಸಂಗತಿಯನ್ನು ನೆನಪಿಸಿಕೊಂಡಿದ್ದಾರೆ. ತಮ್ಮ ಸಹೋದರ ಸೊಹೈಲ್ ಖಾನ್ ಅವರೊಂದಿಗೆ ಸೇರಿ ಈ ಚಿತ್ರದ ಬಗ್ಗೆ ಘೋಷಣೆ ಮಾಡಿದ್ದೆವು ಎಂದು ಅವರು ಹೇಳಿದ್ದಾರೆ.

ಆದರೆ ಈ ಘೋಷಣೆಯ ಬೆನ್ನಲ್ಲೇ ಮಾಧ್ಯಮಗಳಲ್ಲಿ ಬಂದ ವ್ಯಂಗ್ಯಭರಿತ ವರದಿಗಳು ತಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರಿದ್ದವು ಎಂಬುದನ್ನು ಸಲ್ಮಾನ್ ವಿವರಿಸಿದ್ದಾರೆ. ಮರುದಿನ ಕೆಲವು ಪತ್ರಿಕೆಗಳಲ್ಲಿ ತಮ್ಮ ಮತ್ತು ಸೊಹೈಲ್ ಖಾನ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿತ್ತು. ಇಬ್ಬರ ತಲೆಯ ಮೇಲೂ ಕಿರೀಟಗಳನ್ನು ಅಳವಡಿಸಿ, ಒಬ್ಬರನ್ನು ರಾಮ ಹಾಗೂ ಮತ್ತೊಬ್ಬರನ್ನು ಲಕ್ಷ್ಮಣ ಎಂದು ಹೋಲಿಕೆ ಮಾಡಲಾಗಿತ್ತು. ಈ ರೀತಿಯ ಪ್ರತಿಕ್ರಿಯೆ ಕಂಡ ಬಳಿಕ ಸಿನಿಮಾ ಮಾಡುವ ಆಲೋಚನೆಯನ್ನೇ ಕೈಬಿಟ್ಟಿದ್ದಾಗಿ ಅವರು ತಿಳಿಸಿದ್ದಾರೆ.

ಹೀಗೆ ಆರಂಭಿಕ ಹಂತದಲ್ಲೇ ನಿಂತುಹೋದ ‘ರಾಮಾಯಣ’ ಯೋಜನೆಯ ಹಿಂದಿನ ಕಾರಣವನ್ನು ಸಲ್ಮಾನ್ ಖಾನ್ ಈಗ ಬಹಿರಂಗಪಡಿಸಿದ್ದಾರೆ. ಪೌರಾಣಿಕ ಕಥೆಯನ್ನು ತೆರೆಗೆ ತರುವ ಆಸಕ್ತಿ ಇದ್ದರೂ, ಅಂದಿನ ಮಾಧ್ಯಮ ಪ್ರತಿಕ್ರಿಯೆ ತಮ್ಮ ಯೋಜನೆಗೆ ಅಡ್ಡಿಯಾಯಿತು ಎಂಬುದು ಅವರ ಮಾತಿನ ಸಾರಾಂಶ.

ಇದೀಗ ಮತ್ತೆ ‘ರಾಮಾಯಣ’ ಸಿನಿಮಾ ಕುರಿತು ಸಲ್ಮಾನ್ ಖಾನ್ ಅವರ ಹಳೆಯ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪ್ರಸ್ತುತ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿರುವುದೂ ಗಮನ ಸೆಳೆದಿದೆ. ಅದರಲ್ಲೂ ಯಶ್ ನಿರ್ವಹಿಸುತ್ತಿರುವ ರಾವಣನ ಪಾತ್ರದ ಬಗ್ಗೆ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲವಿದೆ.

ಇದೇ ಸಂದರ್ಶನದಲ್ಲಿ ತಮ್ಮ ಜೀವನದ ಆಧಾರದ ಮೇಲೆ ಸಿನಿಮಾ ನಿರ್ಮಾಣವಾಗುವ ಸಾಧ್ಯತೆಯ ಬಗ್ಗೆಯೂ ಸಲ್ಮಾನ್ ಖಾನ್ ಅವರನ್ನು ಪ್ರಶ್ನಿಸಲಾಯಿತು. ಇದಕ್ಕೆ ಅವರು ಹಾಸ್ಯಮಯವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಜೀವನದ ಕಥೆಯನ್ನು ಸಿನಿಮಾ ಮಾಡಿದರೆ ಅದರಿಂದ ಹಲವರ ಬದುಕು ಸಂಕಷ್ಟಕ್ಕೆ ಸಿಲುಕಬಹುದು ಎಂಬ ಅರ್ಥದಲ್ಲಿ ತಮಾಷೆಯ ಮಾತುಗಳನ್ನಾಡಿದ್ದಾರೆ.

 

Add Zee News as a Preferred Source
TAGS:
Cinema