• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಸಮಂತಾ ಅವಳಿ ಮಕ್ಕಳಿಗೆ ತಾಯಿಯಾಗ್ತಿದ್ದಾರಾ? ಈ ಹೊಸ ಚರ್ಚೆ ಶುರುವಾಗಿದ್ದೇಕೆ!

ಸಮಂತಾ ಅವಳಿ ಮಕ್ಕಳಿಗೆ ತಾಯಿಯಾಗ್ತಿದ್ದಾರಾ? ಈ ಹೊಸ ಚರ್ಚೆ ಶುರುವಾಗಿದ್ದೇಕೆ!

ಸಮಂತಾ ತಮ್ಮ ಫಿಟ್‌ನೆಸ್ ಮತ್ತು ಆರೋಗ್ಯದ ಬಗ್ಗೆ ಸದಾ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವ್ಯಾಯಾಮ, ಯೋಗ ಮತ್ತು ಆರೋಗ್ಯಕರ ಜೀವನಶೈಲಿಗೆ ಸಮಯ ಮೀಸಲಿಡುತ್ತಾರೆ.

Written ByChetana Devarmani
Published: Nov 05, 2026, 21:54 IST|Updated: Nov 05, 2026, 21:55 IST
joinshare
ಸಮಂತಾ ಅವಳಿ ಮಕ್ಕಳಿಗೆ ತಾಯಿಯಾಗ್ತಿದ್ದಾರಾ? ಈ ಹೊಸ ಚರ್ಚೆ ಶುರುವಾಗಿದ್ದೇಕೆ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಟಾಲಿವುಡ್‌ನ ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಇದೀಗ ಅವರು ಹಂಚಿಕೊಂಡಿರುವ ಒಂದು ವಿಡಿಯೋ ಮತ್ತು ಅದಕ್ಕೆ ಬಂದಿರುವ ನಟಿ ಕೃತಿ ಖರಬಂದ ಅವರ ಕಾಮೆಂಟ್ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಸಮಂತಾ ಅವಳಿ ಮಕ್ಕಳಿಗೆ ತಾಯಿಯಾಗುತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಅಭಿಮಾನಿಗಳಲ್ಲಿ ಮೂಡಿದೆ.

ಸಮಂತಾ ತಮ್ಮ ಫಿಟ್‌ನೆಸ್ ಮತ್ತು ಆರೋಗ್ಯದ ಬಗ್ಗೆ ಸದಾ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವ್ಯಾಯಾಮ, ಯೋಗ ಮತ್ತು ಆರೋಗ್ಯಕರ ಜೀವನಶೈಲಿಗೆ ಸಮಯ ಮೀಸಲಿಡುತ್ತಾರೆ. ಇದೀಗ ಅವರು ತಮ್ಮ ಗರ್ಭಾವಸ್ಥೆಯ ಮೊದಲ ತಿಂಗಳಿನಿಂದ ಒಂಬತ್ತನೇ ತಿಂಗಳವರೆಗಿನ ವರ್ಕೌಟ್‌ಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋಗೆ ‘ದಿ ಫೈನಲ್ ಲ್ಯಾಪ್’ (The Final Lap) ಎಂದು ಶೀರ್ಷಿಕೆ ನೀಡಿದ್ದಾರೆ.

ಸಮಂತಾ ಹಂಚಿಕೊಂಡಿರುವ ಈ ವಿಡಿಯೋಗೆ ಹಲವು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಕನ್ನಡದ ‘ಗೂಗ್ಲಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಕೃತಿ ಖರಬಂದ ಅವರ ಕಾಮೆಂಟ್ ಮಾತ್ರ ಎಲ್ಲರ ಗಮನ ಸೆಳೆದಿದೆ. ಕೃತಿ ಖರಬಂದ ಅವರು ಸಮಂತಾ ಅವರ ಪೋಸ್ಟ್‌ಗೆ, “ನಿಮ್ಮ ಮೂವರಿಗೂ ತುಂಬು ಪ್ರೀತಿ” (Sending all 3 of you so much love) ಎಂದು ಕಾಮೆಂಟ್ ಮಾಡಿದ್ದಾರೆ. ಈ ಒಂದು ಸಾಲು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸಾಮಾನ್ಯವಾಗಿ ಗರ್ಭಿಣಿ ಮಹಿಳೆ, ಅವರ ಪತಿ ಮತ್ತು ಹೊಟ್ಟೆಯಲ್ಲಿರುವ ಮಗುವನ್ನು ಸೇರಿಸಿ ಮೂವರು ಎಂದು ಹೇಳುವುದು ಸಹಜ. ಆದರೆ ಕೃತಿ ಅವರು ‘ಮೂವರಿಗೂ’ ಎಂದು ಹೇಳಿರುವುದನ್ನು ಗಮನಿಸಿದ ನೆಟ್ಟಿಗರು ಇದಕ್ಕೆ ಬೇರೆ ಅರ್ಥ ಕಲ್ಪಿಸುತ್ತಿದ್ದಾರೆ.

ಕೃತಿ ಖರಬಂದ ಅವರ ಕಾಮೆಂಟ್ ನೋಡಿದ ಕೆಲವರು ಸಮಂತಾ ಅವರ ಹೊಟ್ಟೆಯಲ್ಲಿ ಇಬ್ಬರು ಮಕ್ಕಳಿದ್ದಾರೆಯೇ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅಂದರೆ ಸಮಂತಾ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ವಿಡಿಯೋದಲ್ಲಿ ಸಮಂತಾ ಅವರ ಫಿಟ್‌ನೆಸ್ ಜರ್ನಿ ಮಾತ್ರ ಕಾಣಿಸಿಕೊಂಡಿದ್ದರೂ, ಕಾಮೆಂಟ್‌ನಲ್ಲಿರುವ ‘ಆಲ್ 3’ ಪದಗಳು ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿವೆ. ಇನ್ನು ಕೆಲವರು ಕೃತಿ ಖರಬಂದ ಅವರು ಸಮಂತಾ, ಅವರ ಪತಿ ಮತ್ತು ಮಗುವನ್ನು ಉದ್ದೇಶಿಸಿ ಈ ಕಾಮೆಂಟ್ ಮಾಡಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಕೃತಿ ಖರಬಂದ ಅವರ ಈ ಕಾಮೆಂಟ್ ಹೊರತುಪಡಿಸಿ ಸಮಂತಾಗೆ ಅವಳಿ ಮಕ್ಕಳು ಜನಿಸಲಿದ್ದಾರೆ ಎಂಬುದನ್ನು ದೃಢಪಡಿಸುವ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಕೇವಲ ಒಂದು ಕಾಮೆಂಟ್ ಆಧರಿಸಿ ಅವಳಿ ಮಕ್ಕಳ ಬಗ್ಗೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಈ ಕುರಿತು ಸಮಂತಾ ಅವರಾಗಲಿ, ಅವರ ಆಪ್ತರಾಗಲಿ ಯಾವುದೇ ಸ್ಪಷ್ಟನೆ ನೀಡಿದ್ದಾರೆಯೇ ಎಂಬುದೂ ಖಚಿತವಾಗಿಲ್ಲ. ಹೀಗಾಗಿ ಸಮಂತಾ ಅವಳಿ ಮಕ್ಕಳಿಗೆ ತಾಯಿಯಾಗುತ್ತಿದ್ದಾರಾ ಎಂಬುದು ಸದ್ಯಕ್ಕೆ ಅಭಿಮಾನಿಗಳ ಕುತೂಹಲ ಮತ್ತು ಸಾಮಾಜಿಕ ಜಾಲತಾಣಗಳ ಚರ್ಚೆಯಷ್ಟೇ. ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಈ ವದಂತಿಯ ಹಿಂದಿನ ಅಸಲಿಯತ್ತು ತಿಳಿಯಲಿದೆ. 
 

Add Zee News as a Preferred Source
TAGS:
Cinema