• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿ 100 ಕೋಟಿ ಕ್ಲಬ್ ಸೇರಿದ ಕನ್ನಡ ಸಿನಿಮಾಗಳು ಇವೇ ನೋಡಿ..!

ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿ 100 ಕೋಟಿ ಕ್ಲಬ್ ಸೇರಿದ ಕನ್ನಡ ಸಿನಿಮಾಗಳು ಇವೇ ನೋಡಿ..!

ಸ್ಯಾಂಡಲ್‌ವುಡ್ ತನ್ನ ಕಂಟೆಂಟ್ ಮತ್ತು ತಾಂತ್ರಿಕ ಮೌಲ್ಯದಿಂದಾಗಿ ಇಂದು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ ₹100 ಕೋಟಿ ಪಟ್ಟಿ ಸೇರಿದ ಪ್ರಮುಖ ಸಿನಿಮಾಗಳ ವಿವರ ಇಲ್ಲಿದೆ..

Reported ByKrishna NKEdited ByKrishna NK
Published: Sep 12, 2026, 09:21 PM IST|Updated: Sep 12, 2026, 09:35 PM IST
joinshare
ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿ 100 ಕೋಟಿ ಕ್ಲಬ್ ಸೇರಿದ ಕನ್ನಡ ಸಿನಿಮಾಗಳು ಇವೇ ನೋಡಿ..!
Image Credit: Sandalwood 100 crore movies list

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

100 Crore Club Kannada Movie : ಒಂದು ಕಾಲದಲ್ಲಿ ಕೇವಲ ಕರ್ನಾಟಕದ ಗಡಿಗಷ್ಟೇ ಸೀಮಿತವಾಗಿದ್ದ ಕನ್ನಡ ಚಿತ್ರರಂಗ, ಇಂದು ಜಾಗತಿಕ ಮಟ್ಟದಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಚಿತ್ರದ ಕಂಟೆಂಟ್, ಮೇಕಿಂಗ್‌ನಲ್ಲಿನ ಮಹತ್ತರ ಬದಲಾವಣೆಯ ಜೊತೆಗೆ ಕನ್ನಡ ಸಿನಿಮಾಗಳು, ಭಾರತೀಯ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಪ್ರಾದೇಶಿಕ ಗಡಿಗಳನ್ನು ಮೀರಿ ಪ್ಯಾನ್-ಇಂಡಿಯಾ (Pan-India) ಮಟ್ಟದಲ್ಲಿ ಬೃಹತ್ ಮಾರುಕಟ್ಟೆಯನ್ನು ಕಂಡುಕೊಳ್ಳುವಲ್ಲಿ ಕನ್ನಡಿಗರು ಯಶಸ್ವಿಯಾಗಿದ್ದಾರೆ... ಹಾಗಿದ್ರೆ 100 ಕೋಟಿ ಕ್ಲಬ್‌ ಸೇರಿದ ಕನ್ನಡದ ಚಿತ್ರಗಳಾವುವು? ಬನ್ನಿ ನೋಡೋಣ..

ಹೌದು.. ಸಿನಿಮಾವೊಂದರ ಯಶಸ್ಸನ್ನು ಅಳೆಯುವ ಅತ್ಯಂತ ಪ್ರಮುಖ ಮೈಲಿಗಲ್ಲಾದ ‘₹100 ಕೋಟಿ ಗಳಿಕೆ ಕ್ಲಬ್’ (100 Crore Club) ಪ್ರವೇಶಿಸಿ, ಭಾರತೀಯ ಚಿತ್ರರಂಗವೇ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತೆ ಮಾಡಿದ ಪ್ರಮುಖ ಸಿನಿಮಾಗಳ ವಿವರವಾದ ಮಾಹಿತಿ ಇಲ್ಲಿದೆ.

ಕೆ.ಜಿ.ಎಫ್: ಚಾಪ್ಟರ್ 1 (K.G.F: Chapter 1 - 2018): ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ 'ರಾಕಿಂಗ್ ಸ್ಟಾರ್' ಯಶ್ ಅಭಿನಯದ 'ಕೆ.ಜಿ.ಎಫ್: ಚಾಪ್ಟರ್ 1' ಸಿನಿಮಾ ಕನ್ನಡ ಚಿತ್ರರಂಗದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸಿತು. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಿಸಿದ್ದ ಈ ಸಿನಿಮಾ, ಕನ್ನಡ ಸಿನಿಮಾ ರಂಗದಲ್ಲಿ ಮೊದಲ ಬಾರಿಗೆ ಬಾಕ್ಸ್ ಆಫೀಸ್‌ನಲ್ಲಿ ₹100 ಕೋಟಿಯ ಗಡಿಯನ್ನು ದಾಟಿ, ಒಟ್ಟಾರೆಯಾಗಿ ಸುಮಾರು ₹250 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಕನ್ನಡಿಗರ ಶಕ್ತಿ ತೋರಿತು. ಪ್ರಪಂಚದಾದ್ಯಂತ ಬಹುಭಾಷೆಗಳಲ್ಲಿ (ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ) ಬಿಡುಗಡೆಯಾದ ಈ ಚಿತ್ರವು, ಸ್ಯಾಂಡಲ್‌ವುಡ್‌ಗೂ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬೃಹತ್ ಮಾರುಕಟ್ಟೆ ಇದೆ ಎಂಬುದನ್ನು ಸಾಬೀತುಪಡಿಸಿತು.

ಕೆ.ಜಿ.ಎಫ್: ಚಾಪ್ಟರ್ 2 (K.G.F: Chapter 2 - 2022): ಮೊದಲ ಭಾಗದ ಅಭೂತಪೂರ್ವ ಯಶಸ್ಸಿನ ನಂತರ ಬಂದ 'ಕೆ.ಜಿ.ಎಫ್: ಚಾಪ್ಟರ್ 2' ಕನ್ನಡ ಚಿತ್ರರಂಗದ ಸಾರ್ವಕಾಲಿಕ ದೊಡ್ಡ ದಾಖಲೆಯನ್ನು ನಿರ್ಮಿಸಿತು. ರಿಲೀಸ್ ಆದ ಮೊದಲ ದಿನದಿಂದಲೇ ಪ್ರಪಂಚದಾದ್ಯಂತ ಬಾಕ್ಸ್ ಆಫೀಸ್ ದೋಚಿದ ಈ ಸಿನಿಮಾ ವಿಶ್ವಾದ್ಯಂತ ₹1,200 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲೇ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾಗಳಲ್ಲಿ ಒಂದಾಗಿ ಇತಿಹಾಸ ಸೃಷ್ಟಿಸಿತು. ಬಾಲಿವುಡ್ ಸೇರಿದಂತೆ ಪ್ರಾದೇಶಿಕ ಭಾಷೆಗಳ ಪ್ರಮುಖ ದಾಖಲೆಗಳನ್ನು ಪುಡಿಪುಡಿ ಮಾಡಿದ ಈ ಸಿನಿಮಾ, ಕನ್ನಡ ಚಿತ್ರರಂಗದ ನಿರ್ಮಾಣ ಮೌಲ್ಯವನ್ನು ಜಾಗತಿಕ ಎತ್ತರಕ್ಕೆ ಕೊಂಡೊಯ್ದಿತು.

ಕಾಂತಾರ (Kantara - 2022): ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ 'ಕಾಂತಾರ' ಸಿನಿಮಾ ಭಾರತೀಯ ಚಿತ್ರರಂಗ ಕಂಡ ಅತ್ಯಂತ ವಿಸ್ಮಯಕಾರಿ ಯಶಸ್ಸುಗಳಲ್ಲಿ ಒಂದಾಗಿದೆ. ತುಳುನಾಡಿನ ದೈವಾರಾಧನೆ, ಕರಾವಳಿಯ ವಿಶಿಷ್ಟ ಸಂಸ್ಕೃತಿ ಮತ್ತು ಮಣ್ಣಿನ ವಾಸನೆಯ ಕಥೆಯನ್ನು ಜಾಗತಿಕ ಮಟ್ಟಕ್ಕೆ ತಲುಪಿಸಿದ ಈ ಚಿತ್ರ ಅತ್ಯಂತ ಕಡಿಮೆ ಬಜೆಟ್‌ನಲ್ಲಿ ನಿರ್ಮಾಣಗೊಂಡು, ವಿಶ್ವದಾದ್ಯಂತ ₹400 ಕೋಟಿಗೂ ಹೆಚ್ಚು ಬಾಕ್ಸ್ ಆಫೀಸ್ ಗಳಿಕೆ ಮಾಡಿತು. ಆರಂಭದಲ್ಲಿ ಕೇವಲ ಕನ್ನಡದಲ್ಲಷ್ಟೇ ಬಿಡುಗಡೆಯಾಗಿದ್ದ ಈ ಸಿನಿಮಾ, ಪ್ರೇಕ್ಷಕರ ಅಭೂತಪೂರ್ವ ಒಲವಿನಿಂದಾಗಿ ನಂತರ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಆಗಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತು.

ವಿಕ್ರಾಂತ್ ರೋಣ (Vikrant Rona - 2022): 'ಕಿಚ್ಚ' ಸುದೀಪ್ ಅಭಿನಯದ ಮತ್ತು ಅನೂಪ್ ಭಂಡಾರಿ ನಿರ್ದೇಶನದ 'ವಿಕ್ರಾಂತ್ ರೋಣ' ಸಿನಿಮಾ ಕನ್ನಡದ ಮತ್ತೊಂದು ಹೆಮ್ಮೆಯ ನಿರ್ಮಾಣ. ವಿಶಿಷ್ಟ ಕಥಾಹಂದರ ಹಾಗೂ 3D ತಾಂತ್ರಿಕತೆಯ ಸಸ್ಪೆನ್ಸ್-ಸಾಹಸಮಯ ಈ ಸಿನಿಮಾ ಜಾಗತಿಕ ಮಟ್ಟದಲ್ಲಿ ₹150 ಕೋಟಿಗೂ ಅಧಿಕ ಗಳಿಕೆ ಕಂಡು 100 ಕೋಟಿ ಕ್ಲಬ್ ಸೇರಿತು. ಚಿತ್ರದ ಮೇಕಿಂಗ್, ವಿಶುವಲ್ ಎಫೆಕ್ಟ್ಸ್ ಹಾಗೂ ಸುದೀಪ್ ಅವರ ಅಭಿನಯ ಪ್ರೇಕ್ಷಕರನ್ನು ಆಕರ್ಷಿಸಿತು.  

ಜೇಮ್ಸ್ (James - 2022): 'ಪವರ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರವಾದ 'ಜೇಮ್ಸ್' ಕನ್ನಡ ಚಿತ್ರರಂಗದಲ್ಲಿ ಭಾವನಾತ್ಮಕ ಅಲೆಯನ್ನೇ ಎಬ್ಬಿಸಿತು. ಚೇತನ್ ಕುಮಾರ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ ₹150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯಿತು. ಈ ಸಿನಿಮಾ ಅತಿ ವೇಗವಾಗಿ ₹100 ಕೋಟಿ ಗಳಿಸಿದ ಪ್ರಮುಖ ಸಿನಿಮಾಗಳ ಸಾಲಿಗೆ ಸೇರ್ಪಡೆಯಾಯಿತು.

777 ಚಾರ್ಲಿ (777 Charlie - 2022): ಕಿರಣ್ ರಾಜ್ ನಿರ್ದೇಶನದಲ್ಲಿ ಮೂಡಿಬಂದ, ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಸಿನಿಮಾ ಮನುಷ್ಯ ಮತ್ತು ನಾಯಿಯ ನಡುವಿನ ಅಪೂರ್ವ ಪ್ರೀತಿ ಹಾಗೂ ಭಾವನಾತ್ಮಕ ಬಾಂಧವ್ಯದ ಕಥೆಯನ್ನು ಹೊಂದಿತ್ತು. ಭಾರತದಾದ್ಯಂತ ಪ್ರೇಕ್ಷಕರ ಹೃದಯ ಗೆದ್ದ ಈ ಸಿನಿಮಾ ವಿಶ್ವಾದ್ಯಂತ ₹100 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ವಿಯಾಯಿತು. ಯಾವುದೇ ಭಾಷೆಯ ಗಡಿಯಿಲ್ಲದೆ ಕೇವಲ ಶುದ್ಧ ಭಾವನೆಗಳ ಆಧಾರದ ಮೇಲೆಯೂ ಭಾರತೀಯ ಮಟ್ಟದಲ್ಲಿ ದೊಡ್ಡ ಯಶಸ್ಸು ಗಳಿಸಬಹುದು ಎಂಬುದನ್ನು ಈ ಸಿನಿಮಾ ಸಾಬೀತುಪಡಿಸಿತು.

ಒಟ್ಟಾರೆಯಾಗಿ, ಈ ₹100 ಕೋಟಿ ಗಳಿಸಿದ ಪ್ರಮುಖ ಸಿನಿಮಾಗಳು ಕನ್ನಡ ಚಿತ್ರರಂಗದ ವಾಣಿಜ್ಯಿಕ ಮೌಲ್ಯವನ್ನು ಮತ್ತು ಮಾರುಕಟ್ಟೆ ವ್ಯಾಪ್ತಿಯನ್ನು ಸಂಪೂರ್ಣವಾಗಿ ವಿಸ್ತರಿಸಿವೆ. ಕೇವಲ ಕರ್ನಾಟಕಕ್ಕೆ ಸೀಮಿತವಾಗಿದ್ದ ಚಿತ್ರರಂಗಕ್ಕೆ ಇಂದು ಇಡೀ ದೇಶ ಹಾಗೂ ವಿದೇಶಗಳಲ್ಲೂ ವಿಶಾಲ ಮಾರುಕಟ್ಟೆ ನಿರ್ಮಾಣವಾಗಿದೆ. ಕಂಟೆಂಟ್ ಆಧಾರಿತ ಕಥೆಗಳು, ಅತ್ಯುತ್ತಮ ತಾಂತ್ರಿಕ ಮೌಲ್ಯಗಳು ಹಾಗೂ ಧೈರ್ಯಶಾಲಿ ನಿರ್ಮಾಣ ಸಂಸ್ಥೆಗಳ ಆಗಮನದಿಂದಾಗಿ ಕನ್ನಡ ಚಿತ್ರರಂಗವು ಭಾರತೀಯ ಪ್ರಾದೇಶಿಕ ಸಿನಿಮಾಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡಿದೆ.

Add Zee News as a Preferred Source