• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಮೋಷನ್ ಪೋಸ್ಟರ್ ಬಿಡುಗಡೆ.. ಕಮಾಲ್ ಮಾಡಲು ಕೋಮಲ್‌ ರೆಡಿ

ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಮೋಷನ್ ಪೋಸ್ಟರ್ ಬಿಡುಗಡೆ.. ಕಮಾಲ್ ಮಾಡಲು ಕೋಮಲ್‌ ರೆಡಿ

'ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌' ಸಿನಿಮಾದ ಮೊದಲ ಹಂತದ ಪ್ರಚಾರದ ಭಾಗವಾಗಿ '30 ಎಂ. ಎಲ್' 30 ML ಹೆಸರಿನಲ್ಲಿ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ

Written ByBhimappa
Published: Sep 29, 2026, 07:11 PM IST|Updated: Sep 29, 2026, 07:21 PM IST
joinshare
ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಮೋಷನ್ ಪೋಸ್ಟರ್ ಬಿಡುಗಡೆ.. ಕಮಾಲ್ ಮಾಡಲು ಕೋಮಲ್‌ ರೆಡಿ
Image Credit: komal_kumar

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sangeetha Bar and Restaurant Movie motion poster released: 'ಸೆನ್ಸೇಶನಲ್‌ ಸ್ಟಾರ್‌' ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಸಿನಿಮಾದ ಚಿತ್ರೀಕರಣ ಮತ್ತು ಪೋಸ್ಟ್ ಕಾರ್ಯಗಳು ಬಹುತೇಕ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

'ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌' ಸಿನಿಮಾದ ಮೊದಲ ಹಂತದ ಪ್ರಚಾರದ ಭಾಗವಾಗಿ '30 ಎಂ. ಎಲ್' 30 ML ಹೆಸರಿನಲ್ಲಿ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ. ಈ ಮೋಷನ್ ಪೋಸ್ಟರ್‌ನಲ್ಲಿ ನಾಯಕ ನಟ ಕೋಮಲ್ ಆ ಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ, ನಟಿ ಮೇಘನಾ ರಾಜ್ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಹಿಂದೂ-ಮುಸ್ಲಿಂ ಧಾರ್ಮಿಕ ವಿಷಯಗಳೂ ಕೂಡ ಮೋಶನ್ ಪೋಸ್ಟರ್‌ನಲ್ಲಿ ಎದ್ದು ಕಾಣುತ್ತದೆ.

'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಚಿತ್ರಕ್ಕೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಆಕ್ಷನ್‌-ಕಟ್‌ ಹೇಳುತ್ತಿದ್ದು, ವಿಕಾಸ್‌ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಬಿಗ್ ಬಜೆಟ್‌ನಲ್ಲಿ ಮೂಡಿಬಂದಿರುವ ಈ ಸಿನಿಮಾ ಎರಡು ಕಾಲಘಟ್ಟದ ಕಥೆಯನ್ನು ಹೊಂದಿದೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ ಸಂಗೀತಾ ಬಾರ್‌ ಅಂಡ್‌ ರೆಸ್ಟೋರೆಂಟ್‌ ಸಿನಿಮಾದ ಶೂಟಿಂಗ್ ನಡೆಸಲಾಗಿದ್ದು, ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಮಲೆನಾಡು ಭಾಗದಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಇನ್ನು ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಚಿತ್ರೀಕರಣಕ್ಕಾಗಿ ಕುಂದಾಪುರದ ಅಂಪಾರಿನ ವಾಲ್ತೂರು ಗ್ರಾಮದಲ್ಲಿ ಏಳು ವಿಭಿನ್ನ ವಿನ್ಯಾಸದ ಬೃಹತ್‌ ಸೆಟ್‌ಗಳನ್ನು ನಿರ್ಮಿಸಿ, ಅದರಲ್ಲಿ ಚಿತ್ರದ ಬಹುಭಾಗದ ಚಿತ್ರೀಕರಣವನ್ನು ನಡೆಸಲಾಗಿರುವುದು ವಿಶೇಷ. ಕಥೆಯ ಬೇಡಿಕೆಗೆ ತಕ್ಕಂತೆ, ಸುಮಾರು ಎರಡು ಎಕರೆ ವಿಸ್ತೀರ್ಣದ ವಿಶಾಲವಾದ ಜಾಗದಲ್ಲಿ ಏಳು ವೈವಿಧ್ಯಮಯ ಸೆಟ್‌ಗಳನ್ನು ಹಾಕಿ, ಆ ಸೆಟ್‌ನಲ್ಲಿಯೇ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಚಿತ್ರದ ಶೇಕಡಾ 90ರಷ್ಟು ಚಿತ್ರೀಕರಣವನ್ನು ಈ ಸೆಟ್‌ಗಳಲ್ಲಿಯೇ ಚಿತ್ರೀಕರಿಸಲಾಗಿದೆ ಎಂಬುದು ಚಿತ್ರತಂಡದ ಮಾಹಿತಿ‌ ನೀಡಿದೆ.

ಅಂದಹಾಗೆ, ಈ ಸಿನಿಮಾದ ಹೆಸರು ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಅಂತಿದ್ದರೂ, ಈ ಒಂದೇ ಸಿನಿಮಾದಲ್ಲಿ ಎರಡು ಟೈಟಲ್‌ಗಳಿವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ. ಅದಕ್ಕೆ ಕಾರಣ ಈ ಚಿತ್ರದ ಕಥಾಹಂದರ. ಚಿತ್ರದ ಮೊದಲಾರ್ಧ ಬಾರ್‌ನಲ್ಲಿ ಶುರುವಾಗಿ, ಬಾರ್‌ ಸುತ್ತ ಸಾಗಿದರೆ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಹಾಗಾಗಿ ʼಚಿತ್ರದ ಮೊದಲಾರ್ಧ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಆಗಿದ್ದರೆ, ದ್ವಿತೀಯಾರ್ಧ ʼದೇವರ ತಾಣʼ ಅಂತಿದೆ. ಈ ಎರಡೂ ಹೆಸರುಗಳು ಕೂಡ ನಮ್ಮ ಸಿನಿಮಾದ ಟೈಟಲ್ಗಳು. ಆದರೆ ಸೆನ್ಸಾರ್‌ ನಿಯಮದಂತೆ, ಒಂದು ಸಿನಿಮಾಕ್ಕೆ ಒಂದೇ ಹೆಸರು ಇಡಬೇಕಾಗಿರುವುದರಿಂದ, ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಹೆಸರಿನಲ್ಲಿ ಸಿನಿಮಾ ಥಿಯೇಟರಿಗೆ ತರುತ್ತಿದ್ದೇವೆʼ ಎನ್ನುವುದು ಚಿತ್ರದ ಟೈಟಲ್‌ ಬಗ್ಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ನೀಡುವ ವಿವರಣೆ ಆಗಿದೆ.

ಇದೇ ಮೊದಲ ಬಾರಿಗೆ ನಾಯಕ ನಟ ಕೋಮಲ್‌, ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಸಿನಿಮಾದಲ್ಲಿ ಒಂದು ಹಿಂದಿನ ಚಾರಿತ್ರಿಕತೆ ಮತ್ತೊಂದು ಇಂದಿನ ಆಧುನಿಕತೆ ಭಾಗವಾಗಿರುವ ಎರಡು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದರಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ಕೋಮಲ್‌ ʼಡಬಲ್‌ʼ ರೋಲ್‌ ಪ್ಲೇ ಮಾಡುತ್ತಿದ್ದಾರೆ. ಇನ್ನು ಮೇಘನಾ ರಾಜ್‌ ʼದೇವರ ತಾಣʼದಲ್ಲಿ ರಾಣಿಯಾಗಿ ಕಾಣಿಸಿಕೊಂಡರೆ, ‘ಸಂಗೀತ’ ಬಾರ್‌ನಲ್ಲಿ ನಾಯಕಿಯಾಗಿ ಜೊತೆಯಾಗುತ್ತಾರೆ.

ಉಳಿದಂತೆ ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮ್ಮಿನಾಡ್‌, ವಜ್ರಧೀರ್‌ ಜೈನ್‌, ಉತ್ಸವ್‌, ಕಾರ್ತಿಕ್‌ ರಾವ್‌, ರಾಘು ರಾಮನಕೊಪ್ಪ, ಸಿರಿಜಾ, ವರ್ಧನ್,  ಕರಣ್‌, ರಾಧಿಕ ರಾವ್ ದಿವ್ಯಶ್ರೀ, ಅಕ್ಷತಾ, ಅರಸು, ಮಹೇಶ್, ನಾಗರಾಜ್, ಚಿತ್ರಕಲಾ, ಉಮೇಶ್‌ ಕಿನ್ನಾಳ್‌, ಮನೀಶ್‌ ಶೆಟ್ಟಿ, ಎಂ. ಕೆ. ಮಠ, ಪ್ರಶಾಂತ್ ಸಿದ್ದಿ, ರಾಧಾಕೃಷ್ಣ, ಮಹಾಬಲೇಶ್ವರ ಭಟ್ ಹೀಗೆ ದೊಡ್ಡ ಕಲಾವಿದರ ಬೃಹತ್‌ ತಾರಾಗಣವೇ ಚಿತ್ರದಲ್ಲಿದೆ. ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಕೂಡ ಚಿತ್ರದ ಪಾತ್ರವೊಂದಕ್ಕೆ ತೆರೆಮೇಲೆ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ನಾಲ್ಕು ವಿಭಿನ್ನ ಹಾಡುಗಳು, ಫೈಟ್ಸ್‌, ಕಾಮಿಡಿ, ಎಮೋಶನ್‌, ಜೊತೆಗೊಂದು ಸ್ಪಿರೀಚುಯಲ್ ಸ್ಟೋರಿ.. ಹೀಗೆ ಒಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಸಿನಿಮಾಕ್ಕೆ ಏನೇನೂ ಇರಬೇಕೋ, ಅದೆಲ್ಲವೂ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼನಲ್ಲಿ ಸಿಗುತ್ತದೆ ಎಂಬುದು ಚಿತ್ರತಂಡದ ಭರವಸೆಯ ಮಾತು.  

'ಇದೀಗ' ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌' ಸಿನಿಮಾದ ಸಣ್ಣ ಝಲಕ್ ಅನ್ನು 30 ಎಂ. ಎಲ್ ಪ್ರಮಾಣದಲ್ಲಿ ಬಿಡುಗಡೆ ಮಾಡಿದ್ದೇವೆ. ಇಲ್ಲಿಯವರೆಗೆ ನಾನು ಮಾಡಿದ ಸಿನಿಮಾಗಳು ಒಂದು ಥರದ ಅನುಭವ ನೀಡಿದರೆ, ಈ ಸಿನಿಮಾ ಅವೆಲ್ಲಕ್ಕಿಂತ ಮಿಗಿಲಾದ ಬೇರೊಂದು ಅನುಭವ ನೀಡಿದೆ. ಅದಕ್ಕೆ ಕಾರಣ ಈ ಸಿನಿಮಾದ ಕಥಾಹಂದರ, ಕಲಾವಿದರು ಮತ್ತು ತಂತ್ರಜ್ಞರು. ನಮ್ಮ ʼಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಟ್‌ʼ ಸಿನಿಮಾ ನಿದರ್ಶನವಾಗಿ ನಿಲ್ಲುತ್ತದೆ. ಕನ್ನಡದ ಚಿತ್ರರಂಗದ ಮಟ್ಟಿಗೆ ಇದೊಂದು ವಿಭಿನ್ನ ಚಿತ್ರವಾಗಿ ನಿಲ್ಲುತ್ತದೆ ಎಂಬ ಅಚಲ ವಿಶ್ವಾಸ ನಮ್ಮ ಇಡೀ ಚಿತ್ರತಂಡಕ್ಕಿದೆ ಎಂದು ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. 

Add Zee News as a Preferred Source
TAGS:
Cinema