SOCIAL MEDIA

Newsletter

PARTNER SITES
Select Language Select State

ಐಶ್ವರ್ಯಾ ಪಿಸ್ಸೆ ಡಿವೋರ್ಸ್ ಘೋಷಣೆ : ಟ್ರೋಲರ್ಸ್‌, ವದಂತಿ ಹಬ್ಬಿಸುವವರಿಗೆ ನಟಿ ಖಡಕ್‌ ಎಚ್ಚರಿಕೆ

ಕಿರುತೆರೆಯ ಜನಪ್ರಿಯ ನಟಿ ಐಶ್ವರ್ಯಾ ಪಿಸ್ಸೆ ತಮ್ಮ ವೈವಾಹಿಕ ಜೀವನದ ಬಗ್ಗೆ ದೊಡ್ಡ ಸುದ್ದಿಯೊಂದನ್ನು ಹೊರಹಾಕಿದ್ದಾರೆ. ಪತಿಯಿಂದ ದೂರವಾಗಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಘೋಷಿಸಿರುವ ಅವರು, ವದಂತಿಗಳನ್ನು ಹಬ್ಬಿಸುವವರಿಗೆ ಕಠಿಣ ಎಚ್ಚರಿಕೆಯನ್ನೂ ನೀಡಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Written By Krishna NK
Published: Oct 12, 2026, 09:22 PM IST | Updated: Oct 12, 2026, 09:26 PM IST
Image Credit: aishwarya pisse Divorce news
Join

Aishwarya Pisse Divorce : ಕನ್ನಡ ಹಾಗೂ ತೆಲುಗು ಕಿರುತೆರೆಯ ಖ್ಯಾತ ನಟಿ ಐಶ್ವರ್ಯಾ ಪಿಸ್ಸೆ ತಮ್ಮ ವೈವಾಹಿಕ ಜೀವನದ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ. ತಾವು ಪತಿಯಿಂದ ವಿಚ್ಛೇದನ ಪಡೆದಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅಲ್ಲದೆ, ತಮ್ಮ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್‌ಗಳನ್ನು ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ..

ಒಂದೂವರೆ ವರ್ಷದಿಂದ ಪ್ರತ್ಯೇಕ ವಾಸ
ನಟಿ ಐಶ್ವರ್ಯಾ ಪಿಸ್ಸೆ ಮತ್ತು ಅವರ ಪತಿ ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪರಸ್ಪರ ಒಪ್ಪಿಗೆ ಮತ್ತು ಸಾಕಷ್ಟು ಆಲೋಚನೆಯ ಬಳಿಕ ಇಬ್ಬರೂ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿದ್ದಾರೆ. ಇದು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ನಿರ್ಧಾರವಾಗಿದ್ದು, ಈ ಸಮಯದಲ್ಲಿ ತಮ್ಮ ಖಾಸಗಿತನ ಮತ್ತು ನೆಮ್ಮದಿಯನ್ನು ಎಲ್ಲರೂ ಗೌರವಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವದಂತಿಗಳಿಗೆ ಎಚ್ಚರಿಕೆ
ವ್ಯೂವ್ಸ್, ಲೈಕ್ಸ್ ಅಥವಾ ಎಂಗೇಜ್‌ಮೆಂಟ್ ಹೆಚ್ಚಿಸಿಕೊಳ್ಳುವ ಸಲುವಾಗಿ ಕೆಲವರು ಸುಳ್ಳು ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ದಾರಿ ತಪ್ಪಿಸುವ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ನಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರಾವಾಹಿಯ ದೃಶ್ಯಗಳನ್ನು ಸಂದರ್ಭಕ್ಕೆ ಸಂಬಂಧವಿಲ್ಲದಂತೆ ಬಳಸುವುದು ಅಥವಾ ವೈಯಕ್ತಿಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನುಬದ್ಧವಾಗಿ ತಪ್ಪು ಎಂದು ಎಚ್ಚರಿಸಿದ್ದಾರೆ. ಇಂತಹ ಕೃತ್ಯಗಳು ಮುಂದುವರೆದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ನಟನಾ ಲೋಕದ ಹಿನ್ನೆಲೆ
ಐಶ್ವರ್ಯಾ ಪಿಸ್ಸೆ ಅವರು 2019ರಲ್ಲಿ ಹರಿವಿನಯ್ ಎಂಬುವರನ್ನು ವಿವಾಹವಾಗಿದ್ದರು. 'ಅನುರೂಪ', 'ಸರ್ವ ಮಂಗಳ ಮಾಂಗಲ್ಯೇ', 'ಸುಂದರಿ', 'ಮಾಂಗಲ್ಯ' ಮತ್ತು 'ಪುನರ್ ವಿವಾಹ' ಮುಂತಾದ ಜನಪ್ರಿಯ ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹಾಗೆಯೇ 'ಸಂತು ಸ್ಟ್ರೇಟ್ ಫಾರ್ವರ್ಡ್' ಸಿನಿಮಾದಲ್ಲೂ ಅಭಿನಯಿಸಿದ್ದು, ತೆಲುಗಿನ ಹಲವು ಸೀರಿಯಲ್‌ಗಳ ಮೂಲಕವೂ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES