• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಂಚಲನ : ಸೈನ್ಸ್ ಫಿಕ್ಷನ್ 'ಲಂಬೋದರ 2.0' ಬಿಡುಗಡೆಗೆ ಡೇಟ್ ಫಿಕ್ಸ್!

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಂಚಲನ : ಸೈನ್ಸ್ ಫಿಕ್ಷನ್ 'ಲಂಬೋದರ 2.0' ಬಿಡುಗಡೆಗೆ ಡೇಟ್ ಫಿಕ್ಸ್!

ಕನ್ನಡ ಚಿತ್ರರಂಗದಲ್ಲಿ ಹೊಸತನದ ಪ್ರಯೋಗಗಳಿಗೆ ಸದಾ ಮುಂಚೂಣಿಯಲ್ಲಿರುವ ನಿರ್ದೇಶಕ ಸಿಂಪಲ್ ಸುನಿ ಅವರ ಬಹುನಿರೀಕ್ಷಿತ ವೈಜ್ಞಾನಿಕ ಕಾಲ್ಪನಿಕ ಸಾಮಾಜಿಕ ಥ್ರಿಲ್ಲರ್ ‘ಲಂಬೋದರ 2.0’ ಚಿತ್ರದ ವಿತರಣಾ ಹಕ್ಕುಗಳನ್ನು ದೇಶದ ಪ್ರತಿಷ್ಠಿತ ‘ಪಿವಿಆರ್ ಐನಾಕ್ಸ್ ಪಿಚ್ಚರ್ಸ್’ ಸಂಸ್ಥೆ ಪಡೆದುಕೊಂಡಿದೆ. ಈ ಚಿತ್ರವು ಕನ್ನಡ ಮತ್ತು ಹಿಂದಿ ಭಷೆಗಳಲ್ಲಿ ಏಕಕಾಲಕ್ಕೆ ನವೆಂಬರ್ 13, 2026ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

Written ByKrishna NK
Published: Nov 07, 2026, 21:40 IST|Updated: Nov 07, 2026, 21:42 IST
joinshare
ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಂಚಲನ : ಸೈನ್ಸ್ ಫಿಕ್ಷನ್ 'ಲಂಬೋದರ 2.0' ಬಿಡುಗಡೆಗೆ ಡೇಟ್ ಫಿಕ್ಸ್!
Image Credit: Lambodara 2.0

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೈಲಿಯ ಕಥೆಗಳ ಮೂಲಕವೇ ಹೊಸ ಹಾದಿ ತುಳಿಯುವ ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಮತ್ತೊಂದು ವಿಭಿನ್ನ ಮತ್ತು ಕುತೂಹಲಕಾರಿ ಪ್ರಯೋಗದೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. ಹೌದು, ಸ್ಯಾಂಡಲ್‌ವುಡ್‌ನ ಸ್ಟಾರ್‌ ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರುವ, ಕನ್ನಡ ಹಾಗೂ ಹಿಂದಿ ಭಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ವೈಜ್ಞಾನಿಕ ಕಾಲ್ಪನಿಕ ಸಾಮಾಜಿಕ ಥ್ರಿಲ್ಲರ್ ಸಿನಿಮಾ ‘ಲಂಬೋದರ 2.0’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತಾದ ಮತ್ತೊಂದು ಬಿಗ್ ಅಪ್‌ಡೇಟ್ ಹೊರಬಿದ್ದಿದ್ದು, ಚಿತ್ರದ ವಿತರಣಾ ಹಕ್ಕುಗಳನ್ನು ದೇಶದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಸಂಸ್ಥೆಯಾದ 'ಪಿವಿಆರ್ ಐನಾಕ್ಸ್ ಪಿಕ್ಚರ್ಸ್' ಪಡೆದುಕೊಂಡಿದೆ.

ಮಹಾವೀರ್ ಜೈನ್ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ಹಾಗೂ ‘ಮಾಸ್ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ಅತ್ಯಂತ ಅ್ಧೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರವು ಇದೇ ಬರುವ ನವೆಂಬರ್ 13, 2026ರಂದು ರಾಜ್ಯಾದ್ಯಂತ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ತೆರೆಕಾಣಲಿದೆ. ಬಿಡುಗಡೆಗೂ ಮುನ್ನವೇ ಪಿವಿಆರ್ ಐನಾಕ್ಸ್ ಸಂಸ್ಥೆ ಈ ಸಿನಿಮಾದ ಹಕ್ಕುಗಳನ್ನು ಭಾರಿ ಮೊತ್ತಕ್ಕೆ ಖರೀದಿಸಿರುವುದು ಚಿತ್ರತಂಡದ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ತಾರಾಗಣದ ವಿಶೇಷತೆ ಮತ್ತು ಬಾಲಿವುಡ್ ನಟನ ಎಂಟ್ರಿ
ಈ ಸಿನಿಮಾದಲ್ಲಿ ನಾಯಕ ನಟನಾಗಿ ಅನಿಲ್ ಶೆಟ್ಟಿ ಅಭಿನಯಿಸುತ್ತಿದ್ದರೆ, ಅವರೊಂದಿಗೆ ಬಾಲಿವುಡ್‌ನ ಚಾಕೋಲೆಟ್ ಬಾಯ್ ಖ್ಯಾತಿಯ ನಟ ಕುನಾಲ್ ಕಪೂರ್ ಮತ್ತು ಪ್ರತಿಭಾವಂತೆ ಸಾಚಿ ಬಿಂದ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷವೆಂದರೆ, ಬಾಲಿವುಡ್‌ನಲ್ಲಿ ತಮ್ಮದೇ ಆದ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ನಟ ಕುನಾಲ್ ಕಪೂರ್ ಈ ಚಿತ್ರದ ಮೂಲಕ ಅಧಿಕೃತವಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದ ಮಣ್ಣಿನಲ್ಲಿ ತಯಾರಾಗುತ್ತಿರುವ ಈ ಹೈ-ಟೆಕ್ ಸೈನ್ಸ್ ಫಿಕ್ಷನ್ ಚಿತ್ರದಲ್ಲಿ ಬಾಲಿವುಡ್ ನಟ ನಟಿಸುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಚ್ಚಿಸಿದೆ.

ಕಥೆಯ ಹಂದರ ಏನು?
ಇಂದಿನ ಡಿಜಿಟಲ್ ಜುಗದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಮತ್ತು ಅಲ್ಗಾರಿದಮ್‌ಗಳು ನಮ್ಮ ಬದುಕನ್ನು ಹೇಗೆಲ್ಲಾ ನಿಯಂತ್ರಿಸುತ್ತಿವೆ ಎನ್ನುವುದನ್ನು ಕಣ್ಣಿಗೆ ಕಟ್ಟಿದಂತೆ ತೋರಿಸುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ತಂತ್ರಜ್ಞಾನ ಮನುಷ್ಯನ ಸ್ವಾತಂತ್ರ್ಯ ಮತ್ತು ಭಾವನೆಗಳ ಮೇಲೆ ಬೀರುತ್ತಿರುವ ಗಂಭೀರ ಪರಿಣಾಮಗಳು, ಮನುಷ್ಯ ತನ್ನ ದೈನಂದಿನ ಬದುಕಿನಲ್ಲಿ ನೆಮ್ಮದಿ ಹಾಗೂ ಸಂತೋಷಕ್ಕಾಗಿ ನಡೆಸುವ ನಿರಂತರ ಹುಡುಕಾಟದ ಕಥೆಯನ್ನು ಈ ಚಿತ್ರ ಹೊಂದಿದೆ. ಕೇವಲ ತಾಂತ್ರಿಕ ವಿಚಾರಗಳಷ್ಟೇ ಅಲ್ಲದೆ, ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವಂತಹ ಸಸ್ಪೆನ್ಸ್, ಮನಮುಟ್ಟುವ ಕೌಟುಂಬಿಕ ಭಾವನೆಗಳು, ಪ್ರೀತಿ ಮತ್ತು ಭರಪೂರ ಹಾಸ್ಯವನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ.

ಚಿತ್ರದ ಅತಿ ದೊಡ್ಡ ಆಕರ್ಷಣೆ ‘JIA’ ರೋಬೋಟ್
ಈ ಸಿನಿಮಾದ ಪ್ಲಸ್ ಪಾಯಿಂಟ್ ಏನೆಂದರೆ, ಇದರಲ್ಲಿ ಕೇವಲ ಗ್ರಾಫಿಕ್ಸ್ ರೋಬೋಟ್ ಅಲ್ಲದೆ, ಒಂದು ನೈಜ ಹ್ಯೂಮನಾಯ್ಡ್ ರೋಬೋಟ್ ‘JIA’ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದೆ! ಸಿನಿರಂಗದ ಇತಿಹಾಸದಲ್ಲೇ ಇದೊಂದು ವಿನೂತನ ಪ್ರಯೋಗವಾಗಿದ್ದು, ತೆರೆಯ ಮೇಲೆ ರೋಬೋಟ್ ಮತ್ತು ಮಾನವರ ನಡುವಿನ ಬಾಂಧವ್ಯ ಹಾಗೂ ಸಂಘರ್ಷವನ್ನು ನೋಡಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಮಹಾವೀರ್ ಜೈನ್ ಫಿಲ್ಮ್ಸ್ ಹಾಗೂ ಮಾಸ್ ಪ್ರೊಡಕ್ಷನ್ ಜುಗಲ್ ಬಂದಿಯಲ್ಲಿ ಮೂಡಿಬಂದಿರುವ ಈ ಚಿತ್ರವು ಕೇವಲ ಮನರಂಜನೆ ನೀಡುವುದಷ್ಟೇ ಅಲ್ಲದೆ, ಪ್ರೇಕ್ಷಕರನ್ನು ಆಳವಾದ ಆಲೋಚನೆಗೆ ಹಚ್ಚುವಂತಹ ಸಾಮಾಜಿಕ ಸಂದೇಶವನ್ನೂ ನೀಡಲಿದೆ. ಭಾರತದ ಪ್ರಮುಖ ವಿತರಣಾ ಜಾಲವನ್ನು ಹೊಂದಿರುವ ಪಿವಿಆರ್ ಐನಾಕ್ಸ್ ಸಂಸ್ಥೆಯ ಸಾಥ್ ಸಿಕ್ಕಿರುವುದರಿಂದ ‘ಲಂಬೋದರ 2.0’ ಸಿನಿಮಾವು ದೇಶಾದ್ಯಂತ ಲಕ್ಷಾಂತರ ವೀಕ್ಷಕರನ್ನು ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ.

ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲಾ ವರ್ಗದ ಪ್ರಕೇಕ್ಷಕರಿಗೂ ಒಪ್ಪುವಂತಹ ಕಥಾಹಂದರವನ್ನು ಹೊಂದಿರುವ ಈ ಚಿತ್ರವು ನವೆಂಬರ್ 13ರ ಶುಕ್ರವಾರದಂದು ರಾಜ್ಯದ ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಲು ಬರುತ್ತಿದೆ. ಸಿನಿರಸಿಕರೇ ಸಜ್ಜಾಗಿ, ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಹ್ಯಾಪಿನೆಸ್ ಲೋಡಿಂಗ್ ಆಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ.

Add Zee News as a Preferred Source
TAGS:
Cinema