SOCIAL MEDIA

Newsletter

PARTNER SITES
Select Language Select State

ಚಿತ್ರರಂಗಕ್ಕೆ ಆಘಾತ..! ಹಿರಿಯ ನಟ ಗಿರಿಬಾಬು ಇನ್ನಿಲ್ಲ, ಕಣ್ಣೀರ ಕಡಲಲ್ಲಿ ಅಭಿಮಾನಿಗಳು

ನಾಯಕನಾಗಿ, ಖಳನಾಯಕನಾಗಿ ಹಾಗೂ ಹತ್ತು ಹಲವು ವಿಭಿನ್ನ ಪಾತ್ರಗಳ ಮೂಲಕ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದ ಖ್ಯಾತ ಹಿರಿಯ ನಟ ಹಾಗೂ ನಿರ್ದೇಶಕ ಗಿರಿಬಾಬು (80) ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ದಕ್ಷಿಣ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

Written By Krishna NK
Published: Nov 14, 2026, 18:28 IST | Updated: Nov 14, 2026, 18:29 IST
Image Credit: actor Giri Babu
Join

Giri Babu passed away : ತೆಲುಗು ಚಲನಚಿತ್ರೋದ್ಯಮದ ಹಿರಿಯ ಮತ್ತು ಪ್ರತಿಭಾವಂತ ನಟ, ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದ ಗಿರಿಬಾಬು (80) ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು (ಶನಿವಾರ) ನಿಧನರಾಗಿದ್ದಾರೆ. ಅವರ ಅಗಲಿಕೆಯು ತೆಲುಗು ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಸಿನಿಮಾರಂಗಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ಬಣ್ಣದ ಲೋಕದ ಹಾದಿ  
ಮೂಲತಃ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರವಿನೂತಲ ಗ್ರಾಮದವರಾದ ಗಿರಿಬಾಬು ಅವರ ನಿಜವಾದ ಹೆಸರು ಯರ್ರ ಶೇಷಗಿರಿ ರಾವ್. 1946ರ ಜೂನ್ 8ರಂದು ಜನಿಸಿದ ಇವರಿಗೆ ಚಿಕ್ಕ ವಯಸ್ಸಿನಿಂದಲೂ ನಾಟಕಗಳ ಮೇಲೆ ತುಂಬಾ ಒಲವಿತ್ತು. ರಂಗಭೂಮಿಯ ಮೂಲಕವೇ ತಮ್ಮ ನಟನಾ ಪಯಣವನ್ನು ಆರಂಭಿಸಿದ ಇವರು, 1973ರಲ್ಲಿ ತೆರೆಕಂಡ 'ಜಗಮೇ ಮಾಯ' ಚಿತ್ರದ ಮೂಲಕ ಅಧಿಕೃತವಾಗಿ ಬೆಳ್ಳಿತೆರೆಗೆ ಕಾಲಿಟ್ಟರು.

ತಮ್ಮ ಸುದೀರ್ಘ ಚಲನಚಿತ್ರ ವೃತ್ತಿಜೀವನದಲ್ಲಿ ಗಿರಿಬಾಬು ಅವರು ಹೀರೋ ಆಗಿ, ಖಳನಾಯಕನಾಗಿ, ಪೋಷಕ ನಟನಾಗಿ ಹಾಗೂ ಹಾಸ್ಯನಟನಾಗಿ ಸುಮಾರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ತೆರೆಮೇಲೆ ಯಾವ ರೀತಿಯ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುವ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದರು. ಪೌರಾಣಿಕ, ಸಾಮಾಜಿಕ ಹಾಗೂ ಕೌಟುಂಬಿಕ ಚಿತ್ರಗಳಲ್ಲಿ ಇವರ ಪಾತ್ರಗಳು ಎಂದೆಂದಿಗೂ ಸ್ಮರಣೀಯ.

ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿ ಸೇವೆ
ಕೇವಲ ನಟನೆಯಷ್ಟೇ ಅಲ್ಲದೆ, ಕೆಲವು ಚಿತ್ರಗಳನ್ನು ನಿರ್ಮಿಸುವುದರ ಜೊತೆಗೆ ಯಶಸ್ವಿ ನಿರ್ದೇಶಕರಾಗಿಯೂ ಕಲಾಸೇವೆ ಸಲ್ಲಿಸಿದ್ದಾರೆ. ಚಿತ್ರರಂಗದ ಏಳುಬೀಳುಗಳನ್ನು ಹತ್ತಿರದಿಂದ ಕಂಡ ಹಿರಿಯ ನಟರಾಗಿ, ಹೊಸಬರ ಹಾಗೂ ಯುವ ಪ್ರತಿಭೆಗಳ ಬೆಳವಣಿಗೆಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದ್ದರು. ಇವರ ಪುತ್ರರಾದ ರಘು ಬಾಬು ಹಾಗೂ ಬೋಸು ಬಾಬು ಕೂಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದು, ರಘು ಬಾಬು ಪ್ರಮುಖ ಹಾಸ್ಯನಟರಾಗಿ ಜನಪ್ರಿಯತೆ ಗಳಿಸಿದ್ದಾರೆ.

ಗಿರಿಬಾಬು ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ವಿಧಿಯಾಟದ ಮುಂದೆ ಅವರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ದಕ್ಷಿಣ ಚಿತ್ರರಂಗದ ನಟರು, ನಿರ್ದೇಶಕರು ಹಾಗೂ ಗಣ್ಯರು ಕಂಬನಿ ಮಿಡಿದಿದ್ದಾರೆ. ಚಿತ್ರರಂಗದ ಸುವರ್ಣಯುಗವನ್ನು ಕಂಡ ಅಪರೂಪದ ಹಿರಿಯ ನಟರೊಬ್ಬರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ..

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ZEENEWS TRENDING STORIES