SOCIAL MEDIA

Newsletter

PARTNER SITES
Select Language Select State

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಒಂದು ಕಾಲದಲ್ಲಿ ವಿದೇಶದಲ್ಲಿ ಜೀವನ ನಿರ್ವಹಣೆಗಾಗಿ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಈ ನಟಿ, ಮನೆ ಸ್ವಚ್ಛಗೊಳಿಸುವುದರಿಂದ ಹಿಡಿದು ಟಾಯ್ಲೆಟ್ ಕ್ಲೀನ್ ಮಾಡುವವರೆಗೂ ಕೆಲಸ ಮಾಡಿದ್ದರು ಎನ್ನಲಾಗಿದೆ. ಆದರೆ ಇಂದು ಅವರು ಸುಮಾರು 170 ಕೋಟಿ ರೂಪಾಯಿ ಆಸ್ತಿಯ ಒಡತಿ ಎಂಬ ವರದಿಗಳಿವೆ.

Written By Chetana Devarmani
Published: Nov 29, 2026, 14:46 IST | Updated: Nov 29, 2026, 14:47 IST
Join

ಚಿತ್ರರಂಗದಲ್ಲಿ ಯಶಸ್ಸು ಸಿಕ್ಕ ಬಳಿಕ ಕಲಾವಿದರ ಜೀವನವೇ ಬದಲಾಗುತ್ತದೆ. ಆದರೆ ಇಂದು ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಸೆಲೆಬ್ರಿಟಿಗಳ ಹಿಂದೆಯೂ ಸಾಕಷ್ಟು ಕಷ್ಟದ ದಿನಗಳಿರುತ್ತವೆ. ಅಂತಹವರ ಸಾಲಿನಲ್ಲಿ ಪಾಕಿಸ್ತಾನದ ಖ್ಯಾತ ನಟಿ ಮಹಿರಾ ಖಾನ್ ಕೂಡ ಒಬ್ಬರು. ಒಂದು ಕಾಲದಲ್ಲಿ ವಿದೇಶದಲ್ಲಿ ಜೀವನ ನಿರ್ವಹಣೆಗಾಗಿ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಈ ನಟಿ, ಮನೆ ಸ್ವಚ್ಛಗೊಳಿಸುವುದರಿಂದ ಹಿಡಿದು ಟಾಯ್ಲೆಟ್ ಕ್ಲೀನ್ ಮಾಡುವವರೆಗೂ ಕೆಲಸ ಮಾಡಿದ್ದರು ಎನ್ನಲಾಗಿದೆ. ಆದರೆ ಇಂದು ಅವರು ಸುಮಾರು 170 ಕೋಟಿ ರೂಪಾಯಿ ಆಸ್ತಿಯ ಒಡತಿ ಎಂಬ ವರದಿಗಳಿವೆ.

ಮಹಿರಾ ಖಾನ್ ಪಾಕಿಸ್ತಾನದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಬಾಲಿವುಡ್‌ನ ಕಿಂಗ್ ಖಾನ್ ಶಾರುಖ್ ಖಾನ್ ಅವರೊಂದಿಗೆ ತೆರೆ ಹಂಚಿಕೊಂಡ ಬಳಿಕ ಭಾರತೀಯ ಪ್ರೇಕ್ಷಕರಿಗೂ ಪರಿಚಿತರಾದರು. 2017ರಲ್ಲಿ ಬಿಡುಗಡೆಯಾದ ‘ರಯೀಸ್’ ಸಿನಿಮಾ ಮೂಲಕ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ಶಾರುಖ್ ಖಾನ್‌ಗೆ ನಾಯಕಿಯಾಗಿ ನಟಿಸುವ ಅವಕಾಶ ಮಹಿರಾ ಅವರಿಗೆ ಸಿಕ್ಕಿತ್ತು. ಈ ಸಿನಿಮಾದಲ್ಲಿ ಆಸಿಯಾ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದರು.

ಆದರೆ ಮಹಿರಾ ಅವರ ಸಿನಿಮಾ ಪಯಣ ಅಷ್ಟು ಸುಲಭವಾಗಿರಲಿಲ್ಲ. ಬಾಲಿವುಡ್‌ಗೆ ಬರುವುದಕ್ಕೂ ಮುನ್ನವೇ ಅವರು ಪಾಕಿಸ್ತಾನದ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅದರಲ್ಲೂ ಅವರ ಅಭಿನಯದ ‘ಹಮ್ಸಫರ್’ ಧಾರಾವಾಹಿ ದೊಡ್ಡ ಮಟ್ಟದ ಜನಪ್ರಿಯತೆ ತಂದುಕೊಟ್ಟಿತ್ತು.

ಮಹಿರಾ ಖಾನ್ ತಮ್ಮ ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಕ್ಕೆ ತೆರಳಿದ್ದರು. ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ಹಲವು ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುವುದರ ಜೊತೆಗೆ ಅಂಗಡಿಯಲ್ಲಿ ಕ್ಯಾಷಿಯರ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮನೆ ಸ್ವಚ್ಛಗೊಳಿಸುವುದು ಮತ್ತು ನೆಲ ಒರೆಸುವ ಕೆಲಸವನ್ನೂ ಮಾಡಿದ್ದರು ಎನ್ನಲಾಗಿದೆ. ಕೆಲವು ವರದಿಗಳ ಪ್ರಕಾರ, ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನೂ ಅವರು ಮಾಡಿದ್ದರು.

ನಂತರ ಪಾಕಿಸ್ತಾನಕ್ಕೆ ಮರಳಿದ ಮಹಿರಾ, ನಿರೂಪಕಿಯಾಗಿ ವೃತ್ತಿಜೀವನ ಆರಂಭಿಸಿದರು. ಬಳಿಕ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಒಂದೊಂದೇ ಅವಕಾಶಗಳನ್ನು ಬಳಸಿಕೊಂಡು ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಗಿಟ್ಟಿಸಿಕೊಂಡರು.

ಒಂದು ಕಾಲದಲ್ಲಿ ಜೀವನ ನಿರ್ವಹಣೆಗಾಗಿ ಕಷ್ಟಪಟ್ಟು ದುಡಿಯುತ್ತಿದ್ದ ಮಹಿರಾ ಖಾನ್ ಇಂದು ಪಾಕಿಸ್ತಾನದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು. ವಿವಿಧ ವರದಿಗಳ ಪ್ರಕಾರ, ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 170 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆದರೆ ಈ ಆಸ್ತಿ ಮೌಲ್ಯಕ್ಕೆ ಸಂಬಂಧಿಸಿದ ಅಧಿಕೃತ ದೃಢೀಕರಣ ಲಭ್ಯವಿಲ್ಲ.

ನಟನೆ ಮಾತ್ರವಲ್ಲದೆ ಉದ್ಯಮ ಕ್ಷೇತ್ರದಲ್ಲಿಯೂ ಮಹಿರಾ ಆಸಕ್ತಿ ಹೊಂದಿದ್ದಾರೆ. ತಮ್ಮದೇ ಆದ ಬಟ್ಟೆ ಬ್ರ್ಯಾಂಡ್ ಮೂಲಕವೂ ಅವರು ಗುರುತಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ, ಟಿವಿ ಕಾರ್ಯಕ್ರಮಗಳು ಮತ್ತು ಇತರ ವೃತ್ತಿಪರ ಕೆಲಸಗಳ ಮೂಲಕವೂ ಆದಾಯ ಗಳಿಸುತ್ತಿದ್ದಾರೆ.

ಮಹಿರಾ ಖಾನ್‌ಗೆ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಎಂದರೆ ಬಹಳ ಇಷ್ಟವಂತೆ. ಮಾಧುರಿ ಅವರ ನಟನೆ ಮತ್ತು ನೃತ್ಯದಿಂದ ಸ್ಫೂರ್ತಿ ಪಡೆದು ತಾನೂ ನಟಿಯಾಗಬೇಕೆಂಬ ಆಸೆ ಬೆಳೆಸಿಕೊಂಡಿದ್ದಾಗಿ ಮಹಿರಾ ಈ ಹಿಂದೆ ಹೇಳಿಕೊಂಡಿದ್ದರು. ಇಂದು ಪಾಕಿಸ್ತಾನ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಅಭಿಮಾನಿಗಳನ್ನು ಹೊಂದಿರುವ ಮಹಿರಾ ಖಾನ್ ಅವರ ಯಶಸ್ಸಿನ ಹಿಂದೆ ಹಲವು ವರ್ಷಗಳ ಪರಿಶ್ರಮವಿದೆ. ಕಷ್ಟದ ದಿನಗಳಿಂದ ಆರಂಭವಾದ ಅವರ ಪಯಣ ಇಂದು ಐಷಾರಾಮಿ ಜೀವನದವರೆಗೆ ತಲುಪಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES