SOCIAL MEDIA

Newsletter

PARTNER SITES
Select Language Select State

ಟೈಗರ್ ಶ್ರಾಫ್‌ ಮೇಲೆ ಗುಂಡಿನ ದಾಳಿ : ಎದೆ ಝಲ್ ಎನ್ನುವ ವಿಡಿಯೋ ವೈರಲ್

ಮುಂಬೈನ ಜುಹುವಿನ ಪುಷ್ಪಾ ಪಾರ್ಕ್ ಮೈದಾನದಲ್ಲಿ ಟೈಗರ್ ಶ್ರಾಫ್ ಫುಟ್‌ಬಾಲ್ ಆಡಲು ತೆರಳಿದ್ದರು ಎನ್ನಲಾಗಿದೆ.

Written By Chetana Devarmani
Published: Oct 18, 2026, 10:28 PM IST | Updated: Oct 18, 2026, 10:30 PM IST
Join

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಮುನ್ನೆಲೆಗೆ ಬಂದಿವೆ. ಘಟನೆಯ ಭೀಕರ ಕ್ಷಣಗಳನ್ನು ಸೆರೆಹಿಡಿದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈ ದಾಳಿಯಲ್ಲಿ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದಾರೆ ಎನ್ನಲಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂಬೈನ ಜುಹುವಿನ ಪುಷ್ಪಾ ಪಾರ್ಕ್ ಮೈದಾನದಲ್ಲಿ ಟೈಗರ್ ಶ್ರಾಫ್ ಫುಟ್‌ಬಾಲ್ ಆಡಲು ತೆರಳಿದ್ದರು ಎನ್ನಲಾಗಿದೆ. ಆಟ ಮುಗಿಸಿ ಅವರು ಕಾರಿನಲ್ಲಿ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ವೇಳೆ ಸತತ ಐದು ಸುತ್ತು ಗುಂಡು ಹಾರಿಸಿದ ಶಬ್ದ ಕೇಳಿಬಂದಿದೆ ಎನ್ನಲಾಗಿದ್ದು, ಘಟನೆಯ ವಿಡಿಯೋ ರೆಡ್ಡಿಟ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿದ್ದವರು ಆತಂಕದಿಂದ ಓಡಿಹೋಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ ಎನ್ನಲಾಗಿದೆ. ಆದರೆ, ವೈರಲ್ ವಿಡಿಯೋದ ಸತ್ಯಾಸತ್ಯತೆ ಕುರಿತು ಅಧಿಕೃತ ದೃಢೀಕರಣ ಅಗತ್ಯವಿದೆ.

ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಟೈಗರ್ ಶ್ರಾಫ್ ಅವರ ಕಾರಿನತ್ತ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಕುರಿತು ಜುಹು ಪೊಲೀಸರು ತನಿಖೆ ನಡೆಸುತ್ತಿದ್ದು, ದಾಳಿಯ ಹಿಂದಿನ ಉದ್ದೇಶವೇನು ಮತ್ತು ಘಟನೆಯಲ್ಲಿ ಭಾಗಿಯಾಗಿರುವವರು ಯಾರು ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಇನ್ನೊಂದೆಡೆ, ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗ್ಯಾಂಗ್‌ಸ್ಟರ್ ಅನಿಲ್ ಪಂಡಿತ್ ಎಂಬಾತ ಈ ಸಂಬಂಧ ಪೋಸ್ಟ್ ಹಂಚಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಈ ಪೋಸ್ಟ್‌ನ ಸತ್ಯಾಸತ್ಯತೆ ಹಾಗೂ ದಾಳಿಗೂ ಗ್ಯಾಂಗ್‌ಗೂ ಇರುವ ಸಂಬಂಧ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈ ನಿಟ್ಟಿನಲ್ಲಿ ಮುಂಬೈ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಘಟನೆಯಲ್ಲಿ ಟೈಗರ್ ಶ್ರಾಫ್ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ಅವರ ಕಾರಿನ ಚಾಲಕ ಮತ್ತು ಸಮೀಪದಲ್ಲಿದ್ದ ಆಟೋ ಚಾಲಕ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ವೈರಲ್ ವಿಡಿಯೋ, ದಾಳಿಯ ಹಿಂದಿನ ಕಾರಣ ಮತ್ತು ಹೊಣೆ ಹೊತ್ತಿರುವುದಾಗಿ ಹೇಳಿಕೊಂಡ ಪೋಸ್ಟ್‌ನ ಕುರಿತು ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವೇ ಘಟನೆಯ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES