• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /​ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಚಿತ್ರಕ್ಕೆ ವಸಿಷ್ಠ ಸಿಂಹ ಹಿನ್ನೆಲೆ ಧ್ವನಿ

​ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಚಿತ್ರಕ್ಕೆ ವಸಿಷ್ಠ ಸಿಂಹ ಹಿನ್ನೆಲೆ ಧ್ವನಿ

​ಸ್ಯಾಂಡಲ್‌ವುಡ್‌ನ ಖ್ಯಾತ ನಟ, ಗಂಭೀರ ಕಂಠದ ಒಡೆಯ ವಸಿಷ್ಠ ಸಿಂಹ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಅಷ್ಟೇ ಅಲ್ಲ, ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರತಂಡ ಅವರಿಗೊಂದು ವಿಶೇಷ ಉಡುಗೊರೆಯನ್ನು ನೀಡಿ ಗೌರವಿಸಿದೆ. ಈ ಕುರಿತ ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ...

Written ByChetana Devarmani
Published: Oct 19, 2026, 10:47 AM IST|Updated: Oct 19, 2026, 10:48 AM IST
joinshare
​ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಚಿತ್ರಕ್ಕೆ ವಸಿಷ್ಠ ಸಿಂಹ ಹಿನ್ನೆಲೆ ಧ್ವನಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
EPFO PM-VBRY ಯೋಜನೆಯಲ್ಲಿ ಇಂತಹ ಉದ್ಯೋಗಿಗಳಿಗೆ ಸಿಗುತ್ತೆ ₹15,000... ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ

EPFO PM-VBRY ಯೋಜನೆಯಲ್ಲಿ ಇಂತಹ ಉದ್ಯೋಗಿಗಳಿಗೆ ಸಿಗುತ್ತೆ ₹15,000... ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ

2

​ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಚಿತ್ರಕ್ಕೆ ವಸಿಷ್ಠ ಸಿಂಹ ಹಿನ್ನೆಲೆ ಧ್ವನಿ

3

ದಿನ ಭವಿಷ್ಯ 19-10-2026: ಸೋಮವಾರದಂದು ಧೃತಿ ಯೋಗ.. ಇಂದಿನ ನಿಮ್ಮ ಭವಿಷ್ಯ ಹೇಗಿದೆ

4

ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸಾಧ್ಯತೆ.. ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!

5

Ration Card e-KYC: ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್; ಇ-ಕೆವೈಸಿ ಗಡುವು ವಿಸ್ತರಣೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವಿಭಿನ್ನ ಶೀರ್ಷಿಕೆಯ ಮೂಲಕ ಈಗಾಗಲೇ ಗಾಂಧಿನಗರದಲ್ಲಿ ಭಾರಿ ಕುತೂಹಲ ಹುಟ್ಟುಹಾಕಿರುವ ಸಿನಿಮಾ 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ - ಇದು ದೇವರ ತಾಣ'. ಜ್ಯೋತಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ವಿಕಾಸ್ ಎಸ್. ಶೆಟ್ಟಿ ಅವರ ನಿರ್ಮಾಣ ಹಾಗೂ ಸಂದೇಶ್ ಶೆಟ್ಟಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ಇದೀಗ ಮತ್ತೊಂದು ರೋಮಾಂಚಕ ಸುದ್ದಿ ಹೊರಬಿದ್ದಿದೆ. ​ಸ್ಯಾಂಡಲ್‌ವುಡ್‌ನ ಖ್ಯಾತ ನಟ, ಗಂಭೀರ ಕಂಠದ ಒಡೆಯ ವಸಿಷ್ಠ ಸಿಂಹ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಅಷ್ಟೇ ಅಲ್ಲ, ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರತಂಡ ಅವರಿಗೊಂದು ವಿಶೇಷ ಉಡುಗೊರೆಯನ್ನು ನೀಡಿ ಗೌರವಿಸಿದೆ. ಈ ಕುರಿತ ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ...

​ಸ್ಯಾಂಡಲ್‌ವುಡ್‌ನಲ್ಲಿ ಸದಾ ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೇಶ್ ಶೆಟ್ಟಿ   ನಟ ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ದೊಡ್ಡ ಸರ್ಪ್ರೈಸ್ ಒಂದನ್ನು ನೀಡಿದೆ. ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿ ಸಾಥ್ ಕೊಟ್ಟಿರುವ ವಸಿಷ್ಠ ಸಿಂಹ ಅವರಿಗೆ, ಚಿತ್ರತಂಡ ನೆನಪಿನ ಕಾಣಿಕೆಯಾಗಿ 'ಯುನಿವರ್ಸಲ್ ಸ್ಟಾರ್ ಪಚ್ಚಿ ಗಣಪ'ನ ಮೂರ್ತಿಯನ್ನು ನೀಡಿ ಶುಭಕೋರಿದೆ.

​ವಿಶೇಷವೆಂದರೆ, ನವರಾತ್ರಿ ಹಬ್ಬದ ಶುಭ ದಿನದಂದೇ ಮನೆಗೆ ಗಣಪತಿ ಬಂದಿರುವ ಸಂಭ್ರಮವನ್ನು ನಟ ವಸಿಷ್ಠ ಸಿಂಹ ಅವರು ಚಿತ್ರತಂಡದೊಂದಿಗೆ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ​ಟೈಟಲ್‌ನಿಂದ ಹಿಡಿದು ಪ್ರತಿಯೊಂದು ಹಂತದಲ್ಲೂ ಒಂದಿಲ್ಲೊಂದು ಹೊಸತನವನ್ನು ಹೊತ್ತು ಬರುತ್ತಿರುವ ನಿರ್ದೇಶಕ ಸಂದೇಶ್ ಶೆಟ್ಟಿ, ಈಗಾಗಲೇ ಮೋಷನ್ ಪೋಸ್ಟರ್ ಮೂಲಕ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದಾರೆ. ಇದೀಗ ವಸಿಷ್ಠ ಸಿಂಹ ಅವರ ಖಡಕ್ ವಾಯ್ಸ್ ಚಿತ್ರಕ್ಕೆ ಇನ್ನಷ್ಟು ತೂಕ ತಂದುಕೊಟ್ಟಿದೆ.

​ಇನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಸಿನಿಮಾದ ಅಧಿಕೃತ ಟೀಸರ್ ಇದೇ ತಿಂಗಳು 29ರಂದು ಬಿಡುಗಡೆಯಾಗಲಿದೆ. ಮೋಷನ್ ಪೋಸ್ಟರ್ ಮೂಲಕ ವಿಭಿನ್ನ ಕಥೆಯ ಎಳೆಯ ಮುನ್ಸೂಚನೆ ಕೊಟ್ಟಿರುವ ಚಿತ್ರತಂಡ, ಅಕ್ಟೋಬರ್ 29ರಂದು ಬರಲಿರುವ ಟೀಸರ್‌ನಲ್ಲಿ ಇನ್ನಾವ ಮಟ್ಟದ ಕೌತುಕವನ್ನು ಕಟ್ಟಿಕೊಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Add Zee News as a Preferred Source
TAGS:
Cinema