• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ನಟ ಧನ್ವೀರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ ದರ್ಶನ್‌

ನಟ ಧನ್ವೀರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ ದರ್ಶನ್‌

ವಿಜಯಲಕ್ಷ್ಮಿ ದರ್ಶನ್‌ ಹಾಗೂ ನಟ ಧನ್ವೀರ್ ನಡುವೆ ನಡೆಯುತ್ತಿದ್ದ ಜಟಾಪಟಿ ಇದೀಗ ಕೋರ್ಟ್‌ ಮೆಟ್ಟಿಲೇರಿದೆ. ಧನ್ವೀರ್‌ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Written ByYashaswini V
Published: Nov 02, 2026, 11:59 AM IST|Updated: Nov 02, 2026, 12:01 PM IST
joinshare
ನಟ ಧನ್ವೀರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ ದರ್ಶನ್‌

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಕರೆಂಟ್ ವಾಟರ್ ಹೀಟರ್ ಅವಘಡಕ್ಕೆ 8 ವರ್ಷದ ಬಾಲಕ ಬಲಿ!

ಕರೆಂಟ್ ವಾಟರ್ ಹೀಟರ್ ಅವಘಡಕ್ಕೆ 8 ವರ್ಷದ ಬಾಲಕ ಬಲಿ!

2

ಹಾಲಿನ ಬೆಲೆ ಹೆಚ್ಚಳ, ಬಸ್‌ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್!

3

ಐಡಿಬಿಐ ಖರೀದಿಗೆ ಐಡಿಬಿಐ ಹಣವೇ ಬಳಕೆಯಾಗುತ್ತಾ? ಫೇರ್‌ಫ್ಯಾಕ್ಸ್ ಡೀಲ್‌ನಲ್ಲಿ ಹೊಸ ವಿವಾದ!

4

ನಟ ಧನ್ವೀರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ ದರ್ಶನ್‌

5

ದರ್ಶನ್‌ಗೆ ಮತ್ತೆ ಸಂಕಷ್ಟ? ಇಂದು ಪುನೀತ್‌ಗೆ ಎಸ್‌ಪಿಪಿ ಪ್ರಶ್ನೆಗಳ ಸುರಿಮಳೆ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ದರ್ಶನ್ ಕುಟುಂಬದ ವಿಚಾರವಾಗಿ ನಡೆಯುತ್ತಿದ್ದ ಸೋಷಿಯಲ್ ಮೀಡಿಯಾ ಸಮರ ಈಗ ನ್ಯಾಯಾಲಯದ ಅಂಗಳಕ್ಕೆ ತಲುಪಿದ್ದು, ನಟ ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್‌ ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿದ ಖಾಸಗಿ ದೂರು ದಾಖಲಿಸಿದ್ದಾರೆ.

ಹೌದು, ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ CCH-37 ದೂರು ದಾಖಲು ಮಾಡಿರುವ ವಿಜಯಲಕ್ಷ್ಮಿ ದರ್ಶನ್‌, ನಟ ಧನ್ವೀರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

31 ಅಕ್ಟೋಬರ್ 2026ರಂದು ಧನ್ವೀರ್ ವಿರುದ್ಧ ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿದ ಕೋರ್ಟ್‌ ಮೆಟ್ಟಿಲೇರಿರುವ ವಿಜಯಲಕ್ಷ್ಮಿ ದರ್ಶನ್ ರಿಂದ BNSS ಸೆಕ್ಷನ್ 222 ಮತ್ತು 210ರ ಅಡಿಯಲ್ಲಿ ಖಾಸಗಿ ಅಪರಾಧ ದೂರು ಸಲ್ಲಿಕೆ ಮಾಡಿದ್ದಾರೆ.

ಧನ್ವೀರ್ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಆರೋಪ, ಧ್ವನಿಮುದ್ರಿಕೆಗಳು, ದಾಖಲೆಗಳ ಪ್ರತಿಗಳು ಹಾಗೂ ಪ್ರಸಾರಗಳ ಮೂಲಕ ಮಾನಹಾನಿ ಆರೋಪದ ಬಗ್ಗೆ ಖಾಸಗಿ ದೂರಿನಲ್ಲಿ ಪ್ರಸ್ತಾಪಿಸಿರುವ ವಿಜಯಲಕ್ಷ್ಮಿ ದರ್ಶನ್‌, ಧನ್ವೀರ್ ಅವರ ಹೇಳಿಕೆಗಳಿಂದ ತನಗೆ ಮಾನಹಾನಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 356(2)ರ ಅಡಿಯಲ್ಲಿ ಧನ್ವೀರ್‌ ಅವರನ್ನು ಶಿಕ್ಷೆಗೆ ಒಳಪಡಿಸುವಂತೆ ಮನವಿ ಮಾಡಿರುವ ವಿಜಯಲಕ್ಷ್ಮಿ ಪ್ರಮಾಣವಚನದ ಹೇಳಿಕೆ ನೀಡಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಧನ್ವೀರ್‌ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ದಾಖಲೆಗಳು, ಆಡಿಯೋ ರೆಕಾರ್ಡಿಂಗ್ ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿರುವ ವಿಜಯಲಕ್ಷ್ಮಿ ದರ್ಶನ್‌, ತಮ್ಮ ದೂರನ್ನು BNSS ಸೆಕ್ಷನ್ 222(1)ರ ಅಡಿಯಲ್ಲಿ ನೊಂದ ವ್ಯಕ್ತಿಯ ಖಾಸಗಿ ದೂರಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

BNSS ಸೆಕ್ಷನ್ 223 ಹಾಗೂ ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ಮುಂದಿನ ಕ್ರಮಕ್ಕೆ ಕೋರಿಕೆ ಮಾಡಲಾಗಿದ್ದು, ಆರೋಪದ ವಿಚಾರಣೆಗೆ ಸಾಕಷ್ಟು ಆಧಾರಗಳಿವೆ ಎಂದು ಕಂಡುಬಂದರೆ BNSS ಸೆಕ್ಷನ್ 227ರ ಅಡಿಯಲ್ಲಿ ಧನ್ವೀರ್‌ಗೆ ಸಮನ್ಸ್ ಅಥವಾ ಪ್ರೊಸೆಸ್ ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಧನ್ವೀರ್ ವಿರುದ್ಧ ಕಾನೂನು ಪ್ರಕಾರ ವಿಚಾರಣೆ ನಡೆಸಿ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ವಿಜಯಲಕ್ಷ್ಮಿ ದರ್ಶನ್‌ ಪ್ರಾರ್ಥನೆ ಸಲ್ಲಿಸಿದ್ದಾರೆ. ದೂರಿನ ದಾಖಲೆಗಳಲ್ಲಿ ವಿಜಯಲಕ್ಷ್ಮಿ ಪರವಾಗಿ ವಕೀಲರಾದ ವನಿತು ಆರ್. ಅವರ ಹೆಸರಿನ ಉಲ್ಲೇಖವಿದೆ. ಮತ್ತೊಂದೆಡೆ, ವಕೀಲರಾದ ರಂಗನಾಥ್ ರೆಡ್ಡಿ ಅವರ ಮೂಲಕ ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಿರುವುದಾಗಿ ಮಾಹಿತಿ ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲೆ ಮೇರೆಗೆ ನ್ಯಾಯಾಲಯ ನವೆಂಬರ್ 30, 2026ಕ್ಕೆ ವಿಚಾರಣೆ ನಿಗದಿಪಡಿಸಿದೆ ಎಂದು ತಿಳಿದುಬಂದಿದೆ. 
 

Add Zee News as a Preferred Source
TAGS:
Sandalwood
Cinema