• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ವಿಜಯಲಕ್ಷ್ಮಿ ದರ್ಶನ್‌ ಮ್ಯಾನೇಜರ್‌ಗೆ ಬೆದರಿಕೆ ಆರೋಪ : ನಟ ಧನ್ವೀರ್ ವಿರುದ್ಧ ದೂರು ದಾಖಲು

ವಿಜಯಲಕ್ಷ್ಮಿ ದರ್ಶನ್‌ ಮ್ಯಾನೇಜರ್‌ಗೆ ಬೆದರಿಕೆ ಆರೋಪ : ನಟ ಧನ್ವೀರ್ ವಿರುದ್ಧ ದೂರು ದಾಖಲು

ಸ್ಯಾಂಡ್‌ವುಡ್‌ನಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪದ ಮೇಲೆ ನಟ ಧನ್ವೀರ್ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.. ಅಸಲಿಗೆ ಆಗಿದ್ದೇನು..?

Written ByKrishna NK
Published: Oct 23, 2026, 05:16 PM IST|Updated: Oct 23, 2026, 05:20 PM IST
joinshare
ವಿಜಯಲಕ್ಷ್ಮಿ ದರ್ಶನ್‌ ಮ್ಯಾನೇಜರ್‌ಗೆ ಬೆದರಿಕೆ ಆರೋಪ : ನಟ ಧನ್ವೀರ್ ವಿರುದ್ಧ ದೂರು ದಾಖಲು
Image Credit: FIR on Actor Dhanveer Gowda

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಇನ್ನೊಂದು ವಾರದಲ್ಲಿ ಸ್ಟಿಂಗ್ ಆಪರೇಷನ್ ಅಸಲಿ ಸತ್ಯ ಹೊರಕ್ಕೆ : ಸಚಿವ ಪ್ರಿಯಾಂಕ್ ಖರ್ಗೆ

ಇನ್ನೊಂದು ವಾರದಲ್ಲಿ ಸ್ಟಿಂಗ್ ಆಪರೇಷನ್ ಅಸಲಿ ಸತ್ಯ ಹೊರಕ್ಕೆ : ಸಚಿವ ಪ್ರಿಯಾಂಕ್ ಖರ್ಗೆ

2

Kwala Intel: ದಲಾಲ್ ಸ್ಟ್ರೀಟ್‌ನಲ್ಲಿ AI ಕ್ರಾಂತಿ; ಷೇರು ಮಾರುಕಟ್ಟೆ ರಿಸರ್ಚ್‌ ಈಗ ಇನ್ನಷ್ಟು ಸುಲಭ!

3

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

4

ವಿಜಯಲಕ್ಷ್ಮಿ ದರ್ಶನ್‌ ಮ್ಯಾನೇಜರ್‌ಗೆ ಬೆದರಿಕೆ ಆರೋಪ : ನಟ ಧನ್ವೀರ್ ವಿರುದ್ಧ ದೂರು ದಾಖಲು

5

ಪಶ್ಚಿಮ ಪದವೀಧರ ಕ್ಷೇತ್ರದ ಮತಗಟ್ಟೆಯಲ್ಲಿ ಅವ್ಯವಸ್ಥೆ ಆರೋಪ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ವಿಜಯಲಕ್ಷ್ಮಿ ದರ್ಶನ್‌ ಅವರ ಮ್ಯಾನೇಜರ್ ನಾಗರಾಜ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಸ್ಯಾಂಡ್‌ವುಡ್ ನಟ ಧನ್ವೀರ್ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಾಗಿದೆ.

ಕೆಲವು ಪ್ರಮುಖ ವಿಚಾರಗಳ ಕುರಿತು ಮಾತನಾಡಲು ವಿಜಯಲಕ್ಷ್ಮಿ ಹಾಗೂ ಅವರ ಮ್ಯಾನೇಜರ್ ನಾಗರಾಜ್ ನಟ ಧನ್ವೀರ್ ಅವರ ಮನೆಗೆ ತೆರಳಿದ್ದರು. ಆದರೆ, ಆ ಸಂದರ್ಭದಲ್ಲಿ ನಟ ಧನ್ವೀರ್ ಮನೆಯಲ್ಲಿ ಇರಲಿಲ್ಲವಾದ್ದರಿಂದ ಇಬ್ಬರೂ ಅಲ್ಲಿಂದ ವಾಪಸ್ ಬಂದಿದ್ದರು. ನಂತರ ನಾಗರಾಜ್ ಅವರಿಗೆ ಫೋನ್ ಕರೆ ಮಾಡಿದ್ದ ನಟ ಧನ್ವೀರ್, ಫೋನ್ ಸಂಭಾಷಣೆಯಲ್ಲಿ ತೀವ್ರವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಧನ್ವೀರ್ ಮಾತಿನಿಂದ ನೊಂದ ಮ್ಯಾನೇಜರ್ ನಾಗರಾಜ್, ಕೂಡಲೇ ಆರ್.ಆರ್. ನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.

Add Zee News as a Preferred Source
TAGS:
Cinema