SOCIAL MEDIA

Newsletter

PARTNER SITES
Select Language Select State

ಕನ್ನಡ ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ.. ಮೂರನೇ ವಾರಕ್ಕೆ ಬಿಗ್‌ ಶಾಕ್‌!!

Bigg Boss Kannada Wildcard Entry: ಬಿಗ್‌ ಬಾಸ್‌ ಕನ್ನಡ ಸೀಸನ್ 13 ರಲ್ಲಿ ಹೊಸ ಸ್ಪರ್ಧಿ ಮನೆ ಸೇರಲಿದ್ದಾರೆ ಎನ್ನಲಾಗಿದೆ. ವೈಲ್ಡ್ ಕಾರ್ಡ್ ಮೂಲಕ ಯಾರು ಬರಲಿದ್ದಾರೆ?

Reported By Chetana Devarmani Written By Chetana Devarmani
Published: Sep 21, 2026, 09:43 PM IST | Updated: Sep 21, 2026, 09:45 PM IST
Join

Bigg Boss Kannada Wildcard Entry : ಬಿಗ್ ಬಾಸ್ ಕನ್ನಡ ಸೀಸನ್ 13 ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ವೀಕ್ಷಕರ ಕುತೂಹಲ ಹೆಚ್ಚಿಸುತ್ತಿದೆ. ಒಂದರ ಹಿಂದೆ ಒಂದರಂತೆ ಟ್ವಿಸ್ಟ್‌ಗಳು ಎದುರಾಗುತ್ತಿರುವ ಬೆನ್ನಲ್ಲೇ, ಇದೀಗ ಬಿಗ್ ಬಾಸ್ ಮನೆಗೆ ಹೊಸ ವೈಲ್ಡ್ ಕಾರ್ಡ್ ಸ್ಪರ್ಧಿಯೊಬ್ಬರ ಎಂಟ್ರಿಯಾಗಲಿದೆ ಎಂಬ ಮಾತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಾದ ‘ಕ್ವಾಟ್ಲೆ ಕಿಚನ್’ ಹಾಗೂ ‘ಗಿಚ್ಚಿ ಗಿಲಿಗಿಲಿ’ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಹಾಸ್ಯ ಕಲಾವಿದ ಪ್ರಶಾಂತ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಲಿದ್ದಾರೆ ಎಂಬ ಗಾಸಿಪ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಪ್ರಶಾಂತ್ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿಗೆ ಈವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಹೀಗಾಗಿ ಈ ಸುದ್ದಿ ನಿಜವೇ ಅಥವಾ ಕೇವಲ ವದಂತಿಯೇ ಎಂಬುದು ಸದ್ಯಕ್ಕೆ ಕುತೂಹಲವಾಗಿಯೇ ಉಳಿದಿದೆ.

ಪ್ರಶಾಂತ್ ಗೌಡ ಅವರು ಇತ್ತೀಚೆಗಷ್ಟೇ ತಮ್ಮ ಪ್ರೀತಿಯ ಹುಡುಗಿ ಕೃತಿ ಗೌಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜುಲೈ ತಿಂಗಳಲ್ಲಿ ಇವರ ವಿವಾಹ ನಡೆದಿತ್ತು. ಇದರ ಜೊತೆಗೆ ‘ಕ್ವಾಟ್ಲೆ ಕಿಚನ್’ ಮೊದಲ ಸೀಸನ್‌ನ ವಿಜೇತರಾಗಿದ್ದ ಪ್ರಶಾಂತ್ ಗೌಡ ಅವರು ಉದ್ಯಮ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಸೆಲೆಬ್ರೇಟ್ ಲೈಫ್’ ಎಂಬ ಐಷಾರಾಮಿ ಸಲೂನ್‌ ಅನ್ನು ಉದ್ಘಾಟಿಸಿದ್ದರು. ವೃತ್ತಿಜೀವನದಲ್ಲಿ ವಿಭಿನ್ನ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುತ್ತಿರುವ ಪ್ರಶಾಂತ್ ಗೌಡ ಇದೀಗ ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಅವರ ಅಭಿಮಾನಿಗಳಲ್ಲೂ ಕುತೂಹಲ ಮೂಡಿಸಿದೆ.

ಒಂದು ವೇಳೆ ಪ್ರಶಾಂತ್ ಗೌಡ ಅವರು ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ನೀಡಿದರೆ, ಈಗಾಗಲೇ ಹಲವು ತಿರುವುಗಳಿಂದ ಕೂಡಿರುವ ಆಟಕ್ಕೆ ಮತ್ತಷ್ಟು ಮನರಂಜನೆ ಸಿಗುವ ಸಾಧ್ಯತೆಯಿದೆ. ಅವರ ಹಾಸ್ಯಮಯ ಮಾತುಗಳು, ಕಾಮಿಡಿ ಟೈಮಿಂಗ್ ಹಾಗೂ ಇತರ ಸ್ಪರ್ಧಿಗಳೊಂದಿಗೆ ನಡೆಯುವ ಸಂಭಾಷಣೆಗಳು ವೀಕ್ಷಕರ ಗಮನ ಸೆಳೆಯಬಹುದು. ಇನ್ನು ಟಾಸ್ಕ್‌ಗಳಲ್ಲಿ ಪ್ರಶಾಂತ್ ಗೌಡ ಅವರ ಆಟ ಹೇಗಿರಲಿದೆ ಎಂಬುದೂ ಕುತೂಹಲ ಮೂಡಿಸಬಹುದು. ಆದರೆ ಈ ಎಲ್ಲವೂ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಆಧಾರದ ಮೇಲಿನ ಚರ್ಚೆಯಾಗಿದ್ದು, ಅಧಿಕೃತವಾಗಿ ಖಚಿತವಾಗಿಲ್ಲ.

ಇದರ ನಡುವೆ ಬಿಗ್ ಬಾಸ್ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ವೀಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಮಧ್ಯರಾತ್ರಿ ಸ್ಪರ್ಧಿಗಳು ನಿದ್ರಿಸುತ್ತಿರುವ ಸಂದರ್ಭದಲ್ಲಿ ಸೈರನ್ ಮೊಳಗಿಸಲಾಗಿದ್ದು, ಈ ವಾರ ಮನೆಯಲ್ಲಿ ‘ಎಮರ್ಜೆನ್ಸಿ ಎಕ್ಸಿಟ್’ ಇರಲಿದೆ ಎಂದು ತಿಳಿಸಲಾಗಿದೆ. ಅಷ್ಟೇ ಅಲ್ಲದೆ, ಕಿಚ್ಚ ಸುದೀಪ್ ಅವರೇ ಪ್ರತಿಯೊಬ್ಬ ಸ್ಪರ್ಧಿಯನ್ನು ನಾಮಿನೇಟ್ ಮಾಡಿರುವುದು ಮನೆಯೊಳಗೆ ಆತಂಕದ ವಾತಾವರಣ ಸೃಷ್ಟಿಸಿದೆ. ಯಾವುದೇ ಕ್ಷಣದಲ್ಲಿ ಸ್ಪರ್ಧಿಯೊಬ್ಬರು ಮನೆಯಿಂದ ಹೊರಹೋಗುವ ಸಾಧ್ಯತೆ ಇದೆ ಎಂಬ ಸುಳಿವನ್ನು ಪ್ರೋಮೋ ನೀಡಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಪ್ರಶಾಂತ್ ಗೌಡ ಅವರ ವೈಲ್ಡ್ ಕಾರ್ಡ್ ಎಂಟ್ರಿ ನಿಜವಾಗಲಿದೆಯೇ? ಅಥವಾ ಇದು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಯೇ? ಎಂಬುದಕ್ಕೆ ಮುಂದಿನ ದಿನಗಳಲ್ಲಿ ಸ್ಪಷ್ಟನೆ ಸಿಗಬೇಕಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES