High-Speed Trains accident: ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಒಂದು ಅತಿ ವೇಗದ ರೈಲು ಮತ್ತೊಂದು ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ಅಪಘಾತದಲ್ಲಿ ಕನಿಷ್ಠ 40ಕ್ಕೂ ಹೆಚ್ಚು
ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಎದುರಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ರಕ್ಷಿಸಿ, ಆಸ್ಪತ್ರೆಗಳಿಗೆ ದಾಖಲಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ.
ಅಪಘಾತಕ್ಕೆ ಬೆಚ್ಚಿಬಿದ್ದ ಸ್ಪೇನ್
ಮಧ್ಯ ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಈ ಭೀಕರ ರೈಲು ಅಪಘಾತ ಸಂಭವಿಸಿದೆ. ಉರ್ಡಾ ಮತ್ತು ಲಾಸ್ ಯೆಬೆನೆಸ್ ಪಟ್ಟಣಗಳ ನಡುವಿನ ರೈಲ್ವೆ ಮಾರ್ಗದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿಯಾಗಿದೆ. ಒಂದು ರೈಲು ಮತ್ತೊಂದು ರೈಲಿನ ಹಿಂಭಾಗಕ್ಕೆ ಅಪ್ಪಳಿಸಿದ ಪರಿಣಾಮ ಎರಡು ಬೋಗಿಗಳು ಹಳಿ ತಪ್ಪಿವೆ. ಅಪಘಾತದ ತೀವ್ರತೆಗೆ ರೈಲಿನ ಬೋಗಿಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲಿ ಅವಶೇಷಗಳು ಚದುರಿಹೋಗಿವೆ.
30ಕ್ಕೂ ಹೆಚ್ಚು ಮಂದಿ ಸಾವು!!
ಆರಂಭದಲ್ಲಿ ಅಧಿಕಾರಿಗಳು 10 ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಆದರೆ, ಬಳಿಕ ಸ್ಪೇನ್‌ನ EFE ಸುದ್ದಿ ಸಂಸ್ಥೆ ಸೇರಿದಂತೆ ಸ್ಥಳೀಯ ಮಾಧ್ಯಮಗಳು ಸಾವಿನ ಸಂಖ್ಯೆ ಕನಿಷ್ಠ ಕನಿಷ್ಠ 46ಕ್ಕೆ ಏರಿಕೆಯಾಗಿದೆ ಎಂದು ವರದಿ ಮಾಡಿವೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ತೀವ್ರವಾಗಿ ಹಾನಿಗೊಳಗಾದ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವುದು ಹಾಗೂ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಅತಿ ವೇಗದಲ್ಲಿ ಸಂಭವಿಸಿದ ಡಿಕ್ಕಿಯ ಪರಿಣಾಮ ದುರಂತದ ತೀವ್ರತೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವೆ ಮೋನಿಕಾ ಗಾರ್ಸಿಯಾ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ RENFE ನಿರ್ವಹಿಸುವ ರೈಲಿನಲ್ಲಿ 397 ಪ್ರಯಾಣಿಕರಿದ್ದರೆ, ಖಾಸಗಿ IRYO ರೈಲಿನಲ್ಲಿ 147 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡೂ ರೈಲುಗಳು ಮ್ಯಾಡ್ರಿಡ್‌ನಿಂದ ಸೆವಿಲ್ಲೆ ಕಡೆಗೆ ಸಾಗುತ್ತಿದ್ದವು ಎನ್ನಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ದುರಂತಕ್ಕೆ ಕಾರಣವಾದ ಅಂಶಗಳು ಬಹಿರಂಗವಾಗಬೇಕಿದೆ.
ರೈಲು ಸೇವೆ ಸ್ಥಗಿತ
ಅಪಘಾತದ ಹಿನ್ನೆಲೆಯಲ್ಲಿ ಮ್ಯಾಡ್ರಿಡ್, ಸಿಯುಡಾಡ್ ರಿಯಲ್ ಮತ್ತು ಆಂಡಲೂಸಿಯಾ ನಡುವಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲು ಮೂಲಸೌಕರ್ಯ ನಿರ್ವಾಹಕ ADIF ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆಗೆ ಆದ್ಯತೆ ನೀಡಲಾಗಿದೆ.ಸ್ಪೇನ್‌ನಲ್ಲಿ ರೈಲು ದುರಂತಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಮತ್ತು ಗಾಯಾ