• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಅಂತಾರಾಷ್ಟ್ರೀಯ
  • /ಅಮೆರಿಕಾದಲ್ಲಿ ಏಕಕಾಲಕ್ಕೆ 10 ಸಾವಿರ ವಿಮಾನ ಹಾರಾಟ ಸ್ಥಗಿತ! 4,700ಕ್ಕೂ ಹೆಚ್ಚು ಫ್ಲೈಟ್ ರದ್ದು!

ಅಮೆರಿಕಾದಲ್ಲಿ ಏಕಕಾಲಕ್ಕೆ 10 ಸಾವಿರ ವಿಮಾನ ಹಾರಾಟ ಸ್ಥಗಿತ! 4,700ಕ್ಕೂ ಹೆಚ್ಚು ಫ್ಲೈಟ್ ರದ್ದು!

ಎಫ್‌ಎಎ ಸಂವಹನ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದ ಅಮೆರಿಕದಾದ್ಯಂತ ವಿಮಾನ ಹಾರಾಟಕ್ಕೆ ತಾತ್ಕಾಲಿಕ ತಡೆ ಉಂಟಾಗಿದ್ದು, 4,700ಕ್ಕೂ ಹೆಚ್ಚು ವಿಮಾನಗಳು ರದ್ದಾಗಿ, 10 ಸಾವಿರಕ್ಕೂ ಅಧಿಕ ವಿಮಾನಗಳು ವಿಳಂಬವಾಗಿವೆ. ಹಳೆಯ ಏರ್ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆಯ ಮೇಲಿನ ಒತ್ತಡವೇ ಸಮಸ್ಯೆಗೆ ಕಾರಣ ಎನ್ನಲಾಗಿದ್ದು, ಸೈಬರ್ ದಾಳಿಯ ಯಾವುದೇ ಪುರಾವೆ ಸಿಕ್ಕಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

Written ByPuttaraj K Alur
Published: Nov 14, 2026, 10:29 IST|Updated: Nov 14, 2026, 10:37 IST
joinshare
ಅಮೆರಿಕಾದಲ್ಲಿ ಏಕಕಾಲಕ್ಕೆ 10 ಸಾವಿರ ವಿಮಾನ ಹಾರಾಟ ಸ್ಥಗಿತ! 4,700ಕ್ಕೂ ಹೆಚ್ಚು ಫ್ಲೈಟ್ ರದ್ದು!
Image Credit: US Flight Chaos

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

US Flight Chaos: ಅಮೆರಿಕದಲ್ಲಿ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿನ ತಾಂತ್ರಿಕ ವೈಫಲ್ಯದಿಂದ ವಿಮಾನಯಾನ ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಸಂವಹನ ವ್ಯವಸ್ಥೆಯಲ್ಲಿ ಕಾಣಿಸಿಕೊಂಡ ದೋಷದಿಂದ ದೇಶದಾದ್ಯಂತ ವಿಮಾನಗಳ ಹಾರಾಟಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಇದರ ಪರಿಣಾಮ ಸಾವಿರಾರು ವಿಮಾನಗಳು ರದ್ದಾಗಿದ್ದು, 10 ಸಾವಿರಕ್ಕೂ ಅಧಿಕ ವಿಮಾನಗಳ ಸಂಚಾರ ವಿಳಂಬವಾಗಿದೆ. ವಿಮಾನ ಪ್ರಯಾಣಕ್ಕೆ ಯೋಜನೆ ರೂಪಿಸಿದ್ದ ಲಕ್ಷಾಂತರ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ನವೆಂಬರ್ 13ರಂದು ಅಮೆರಿಕದಲ್ಲಿ ಕಾಣಿಸಿಕೊಂಡ ಈ ಸಮಸ್ಯೆ ದೇಶದಾದ್ಯಂತ ಇರುವ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿತು. ತಾಂತ್ರಿಕ ದೋಷದ ಗಂಭೀರತೆಯನ್ನ ಗಮನಿಸಿದ FAA, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಿಮಾನ ನಿಲ್ದಾಣಗಳಿಂದ ಹೊರಡುವ ವಿಮಾನಗಳ ಹಾರಾಟವನ್ನ ಸ್ಥಗಿತಗೊಳಿಸಿತ್ತು. ಇದೀಗ ನಿರ್ಬಂಧ ತೆರವುಗೊಳಿಸಲಾಗಿದ್ದರೂ, ವಿಮಾನಯಾನ ಸೇವೆಗಳು ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಲು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

22 ವಾಯು ಸಂಚಾರ ನಿಯಂತ್ರಣ ಕೇಂದ್ರಗಳ ಮೇಲೆ ಪರಿಣಾಮ

ಅಮೆರಿಕದ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ನೀಡಿರುವ ಮಾಹಿತಿಯ ಪ್ರಕಾರ, ಹಳೆಯ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿದ್ದ ಸ್ವಿಚ್‌ಗಳು ಮತ್ತು ರೂಟರ್‌ಗಳು ಹೆಚ್ಚಿನ ಪ್ರಮಾಣದ ಡೇಟಾ ಒತ್ತಡದಿಂದ ಓವರ್‌ಲೋಡ್ ಆಗಿದ್ದವು. ಇದರಿಂದ ವ್ಯವಸ್ಥೆಯಲ್ಲಿ ತಪ್ಪಾದ ಹಾಗೂ ಅಸಮಂಜಸ ಮಾಹಿತಿಗಳು ರವಾನೆಯಾಗಿದ್ದು, ಸಂವಹನ ಮತ್ತು ರಾಡಾರ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ.

ಈ ತಾಂತ್ರಿಕ ಸಮಸ್ಯೆ ಅಮೆರಿಕದಾದ್ಯಂತ ಇರುವ 22 ಪ್ರಾದೇಶಿಕ ವಾಯು ಸಂಚಾರ ನಿಯಂತ್ರಣ ಕೇಂದ್ರಗಳ ಮೇಲೂ ಪರಿಣಾಮ ಬೀರಿದೆ. ಈ ಕೇಂದ್ರಗಳು ವಿಮಾನಗಳ ಚಲನವಲನವನ್ನ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪೈಲಟ್‌ಗಳು ಮತ್ತು ಏರ್ ಟ್ರಾಫಿಕ್ ಕಂಟ್ರೋಲರ್‌ಗಳ ನಡುವೆ ಸರಿಯಾದ ಸಂವಹನ ಇಲ್ಲದಿದ್ದರೆ ವಿಮಾನಗಳ ಸುರಕ್ಷತೆಗೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ FAA ವಿಮಾನಗಳ ಟೇಕ್‌ಆಫ್‌ಗೆ ತಾತ್ಕಾಲಿಕ ತಡೆ ನೀಡಿತ್ತು.

ಆಕಾಶದಲ್ಲಿದ್ದ ವಿಮಾನಗಳಿಗೆ ಲ್ಯಾಂಡಿಂಗ್ ಅವಕಾಶ

ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಗಳ ಹಾರಾಟವನ್ನ ಸ್ಥಗಿತಗೊಳಿಸಲಾಗಿದ್ದರೂ, ಈಗಾಗಲೇ ಆಕಾಶದಲ್ಲಿದ್ದ ವಿಮಾನಗಳಿಗೆ ಸುರಕ್ಷಿತವಾಗಿ ಲ್ಯಾಂಡ್ ಆಗಲು ಅವಕಾಶ ಕಲ್ಪಿಸಲಾಗಿತ್ತು. ವಿಮಾನಗಳ ಸುರಕ್ಷತೆಯನ್ನ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರು. ವಿಮಾನ ಸಂಚಾರದ ಮೇಲಿನ ನಿರ್ಬಂಧದಿಂದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಯಾಣಿಕರ ವೇಳಾಪಟ್ಟಿಗಳು ಬದಲಾಗಿದ್ದು, ಮುಂದಿನ ವಿಮಾನಗಳ ಸಂಚಾರದ ಮೇಲೂ ಇದರ ಪರಿಣಾಮ ಬೀರಿದೆ.

4 ಸಾವಿರಕ್ಕೂ ಹೆಚ್ಚು ವಿಮಾನ ರದ್ದು, 10 ಸಾವಿರಕ್ಕೂ ಅಧಿಕ ವಿಳಂಬ

ಈ ತಾಂತ್ರಿಕ ವೈಫಲ್ಯದಿಂದ ಅಮೆರಿಕದಲ್ಲಿ 4 ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ಇದರ ಜೊತೆಗೆ 10 ಸಾವಿರಕ್ಕೂ ಅಧಿಕ ವಿಮಾನಗಳು ವಿಳಂಬವಾಗಿವೆ ಎಂದು ವರದಿಯಾಗಿದೆ. ಸುಮಾರು 15 ಲಕ್ಷ ಪ್ರಯಾಣಿಕರು ಈ ಅವ್ಯವಸ್ಥೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಕೂಡ ಅಮೆರಿಕಕ್ಕೆ ತೆರಳುವ ಹಾಗೂ ಅಲ್ಲಿಂದ ಭಾರತಕ್ಕೆ ಬರುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿತ್ತು. ಹೀಗಾಗಿ ಅಮೆರಿಕದ ವಿಮಾನ ನಿಲ್ದಾಣಗಳಲ್ಲಿನ ಸಮಸ್ಯೆ ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಸೈಬರ್ ದಾಳಿ ಶಂಕೆ ತಳ್ಳಿಹಾಕಿದ ಅಧಿಕಾರಿಗಳು

ವಿಮಾನಯಾನ ವ್ಯವಸ್ಥೆಯಲ್ಲಿನ ಈ ದೋಷದ ಹಿಂದೆ ಸೈಬರ್ ದಾಳಿಯ ಕೈವಾಡವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಪ್ರಾಥಮಿಕ ತನಿಖೆಯಲ್ಲಿ ಸೈಬರ್ ದಾಳಿಗೆ ಸಂಬಂಧಿಸಿದ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲವೆಂದು ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಮಾರ್ಕ್‌ವೇನ್ ಮುಲ್ಲಿನ್ ತಿಳಿಸಿದ್ದಾರೆ. ಇದೇ ವೇಳೆ ಮೈಕ್ರೋಸಾಫ್ಟ್ ಸೇವೆಗಳಲ್ಲಿನ ವ್ಯತ್ಯಯಕ್ಕೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲವೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಮಸ್ಯೆಯ ನಿಖರ ಕಾರಣದ ಕುರಿತು ಪರಿಶೀಲನೆ ಮುಂದುವರಿದಿದೆ.

ಹಳೆಯ ವ್ಯವಸ್ಥೆ ಆಧುನೀಕರಣಕ್ಕೆ 50 ಬಿಲಿಯನ್ ಡಾಲರ್ ಬೇಡಿಕೆ

ಅಮೆರಿಕದ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯನ್ನ ಆಧುನೀಕರಿಸುವ ಅಗತ್ಯವನ್ನ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ಒತ್ತಿಹೇಳಿದ್ದಾರೆ. ಹಳೆಯ ತಂತ್ರಜ್ಞಾನವನ್ನ ಬದಲಾಯಿಸಿ ಸುಧಾರಿತ ವ್ಯವಸ್ಥೆ ಅಳವಡಿಸಲು ಸುಮಾರು 50 ಬಿಲಿಯನ್ ಡಾಲರ್ ಅನುದಾನದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ನಲ್ಲಿ FAA ಸಂವಹನ ವ್ಯವಸ್ಥೆಯಲ್ಲಿನ ತಾಂತ್ರಿಕ ವೈಫಲ್ಯ ಅಮೆರಿಕದ ವಿಮಾನಯಾನ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ವ್ಯತ್ಯಯಕ್ಕೆ ಕಾರಣವಾಗಿದೆ. ಸಾವಿರಾರು ವಿಮಾನಗಳ ರದ್ದು ಮತ್ತು ವಿಳಂಬದಿಂದ ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ವಿಮಾನಯಾನ ಸೇವೆಗಳು ಸಂಪೂರ್ಣ ಸಹಜ ಸ್ಥಿತಿಗೆ ಮರಳುವುದನ್ನ ಪ್ರಯಾಣಿಕರು ಎದುರು ನೋಡುತ್ತಿದ್ದಾರೆ.

Add Zee News as a Preferred Source
TAGS:
Kannada News