• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಅ*ತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಜೈಲು!.. 54,000 ದಂಡ ವಿಧಿಸಿದ ಕೋರ್ಟ್

ಅ*ತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಜೈಲು!.. 54,000 ದಂಡ ವಿಧಿಸಿದ ಕೋರ್ಟ್

10 years in jail for accused in rape case: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

Written ByRamya. R. Gowda
Published: Nov 22, 2026, 12:00 IST|Updated: Nov 22, 2026, 12:12 IST
joinshare
ಅ*ತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಜೈಲು!.. 54,000 ದಂಡ ವಿಧಿಸಿದ ಕೋರ್ಟ್

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

10 years in jail for accused in rape case: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗೆ  ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ ಮಹಿಳೆಯೋರ್ವರಿಗೆ, ಆಕೆಯ ಮನೆಯ ನೆರೆಮನೆಯ ನಿವಾಸಿ ಆರೋಪಿ ಅನಿಲ್ ಎಂಬಾತನು ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವಬೆದರಿಕೆ ಹಾಕಿದ್ದ. ಈ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಅ.ಕ್ರ: 92/2021, ಕಲಂ:376, 448, 323. 504. 506 ಭಾ.ದಂ.ಸಂ ಪ್ರಕರಣದಲ್ಲಿ, ಬಂಟ್ವಾಳ ಗ್ರಾಮಾಂತರ ಠಾಣಾ ಆಗಿನ ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ  ಎಮ್ ಎಸ್  ರವರು ಆರೋಪಿಯನ್ನು ಪತ್ತೆಮಾಡಿ, ಪ್ರಕರಣದ ತನಿಖಾಧಿಕಾರಿಗಳು ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ ಡಿ ನಾಗರಾಜ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
‌

 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳೂರಲ್ಲಿ ವಿಚಾರಣೆ ನಡೆದು ಆರೋಪಿತನ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆರವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ರೂ 54,000 ದಂಡ ವಿಧಿಸಿ ಅದೇಶ ನೀಡಿದ್ದಾರೆ.  ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧಾರಿರವರು ಸಮರ್ಥವಾಗಿ ವಾದ ಮಂಡನೆ ನಡೆಸಿದರು.

 

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ.. ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಸಾವು!

ಮದುವೆಯ ಸಂಭ್ರಮ ಮಾಸುವ ಮುನ್ನವೇ ವಿಧಿಯ ಕ್ರೂರ ಆಟ

ಶಿವಮೊಗ್ಗ: ಜಿಲ್ಲೆಯ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ ಒಂದೂವರೆ ತಿಂಗಳಾಗಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟಿದ್ದು, ಎರಡೂ ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ.ಮೃತರನ್ನು 28 ವರ್ಷದ ಕಿರಣ್ ಜಿ ಹಾಗೂ 22 ವರ್ಷದ ಸೌಮ್ಯ ಎಂದು ಗುರುತಿಸಲಾಗಿದೆ. ಕಿರಣ್ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.

ಕಿರಣ್ ಹಾಗೂ ಸೌಮ್ಯ ಬೈಕ್‌ನಲ್ಲಿ ಶರಾವತಿ ನಗರದ ಮನೆಯಿಂದ ಸೌಮ್ಯ ಅವರ ತವರು ಮನೆಯಾದ ಗೋವಿಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ನವದಂಪತಿ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳಷ್ಟೇ ಕಳೆದಿದ್ದ ಕಿರಣ್ ಮತ್ತು ಸೌಮ್ಯ ದಿಢೀರ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮನೆಗಳಲ್ಲಿ ಮದುವೆಯ ಸಂಭ್ರಮ ಇನ್ನೂ ಮಾಸಿರಲಿಲ್ಲ. ಅಷ್ಟರಲ್ಲೇ ನವದಂಪತಿ ಅಪಘಾತದಲ್ಲಿ ಬಲಿಯಾಗಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Add Zee News as a Preferred Source
TAGS:
Kannada News