ಅ*ತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಜೈಲು!.. 54,000 ದಂಡ ವಿಧಿಸಿದ ಕೋರ್ಟ್
10 years in jail for accused in rape case: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.
10 years in jail for accused in rape case: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ ಮಹಿಳೆಯೋರ್ವರಿಗೆ, ಆಕೆಯ ಮನೆಯ ನೆರೆಮನೆಯ ನಿವಾಸಿ ಆರೋಪಿ ಅನಿಲ್ ಎಂಬಾತನು ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವಬೆದರಿಕೆ ಹಾಕಿದ್ದ. ಈ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಅ.ಕ್ರ: 92/2021, ಕಲಂ:376, 448, 323. 504. 506 ಭಾ.ದಂ.ಸಂ ಪ್ರಕರಣದಲ್ಲಿ, ಬಂಟ್ವಾಳ ಗ್ರಾಮಾಂತರ ಠಾಣಾ ಆಗಿನ ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಮ್ ಎಸ್ ರವರು ಆರೋಪಿಯನ್ನು ಪತ್ತೆಮಾಡಿ, ಪ್ರಕರಣದ ತನಿಖಾಧಿಕಾರಿಗಳು ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ ಡಿ ನಾಗರಾಜ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳೂರಲ್ಲಿ ವಿಚಾರಣೆ ನಡೆದು ಆರೋಪಿತನ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆರವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ರೂ 54,000 ದಂಡ ವಿಧಿಸಿ ಅದೇಶ ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧಾರಿರವರು ಸಮರ್ಥವಾಗಿ ವಾದ ಮಂಡನೆ ನಡೆಸಿದರು.
ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ.. ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಸಾವು!
ಮದುವೆಯ ಸಂಭ್ರಮ ಮಾಸುವ ಮುನ್ನವೇ ವಿಧಿಯ ಕ್ರೂರ ಆಟ
ಶಿವಮೊಗ್ಗ: ಜಿಲ್ಲೆಯ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ ಒಂದೂವರೆ ತಿಂಗಳಾಗಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟಿದ್ದು, ಎರಡೂ ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ.ಮೃತರನ್ನು 28 ವರ್ಷದ ಕಿರಣ್ ಜಿ ಹಾಗೂ 22 ವರ್ಷದ ಸೌಮ್ಯ ಎಂದು ಗುರುತಿಸಲಾಗಿದೆ. ಕಿರಣ್ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.
ಕಿರಣ್ ಹಾಗೂ ಸೌಮ್ಯ ಬೈಕ್‌ನಲ್ಲಿ ಶರಾವತಿ ನಗರದ ಮನೆಯಿಂದ ಸೌಮ್ಯ ಅವರ ತವರು ಮನೆಯಾದ ಗೋವಿಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ನವದಂಪತಿ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳಷ್ಟೇ ಕಳೆದಿದ್ದ ಕಿರಣ್ ಮತ್ತು ಸೌಮ್ಯ ದಿಢೀರ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮನೆಗಳಲ್ಲಿ ಮದುವೆಯ ಸಂಭ್ರಮ ಇನ್ನೂ ಮಾಸಿರಲಿಲ್ಲ. ಅಷ್ಟರಲ್ಲೇ ನವದಂಪತಿ ಅಪಘಾತದಲ್ಲಿ ಬಲಿಯಾಗಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.