• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /“ಕರ್ನಾಟಕದಲ್ಲಿ 1.18 ಕೋಟಿ ಮತ ಅಳಿಸಿ ಹಾಕಿದ್ದಾರೆ!”: ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ!

“ಕರ್ನಾಟಕದಲ್ಲಿ 1.18 ಕೋಟಿ ಮತ ಅಳಿಸಿ ಹಾಕಿದ್ದಾರೆ!”: ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ!

ಬೆಳಗಾವಿಯಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿದ ಅವರು, "200ಕ್ಕೂ ಹೆಚ್ಚು ನಕಲಿ ಅರ್ಜಿಗಳನ್ನು ತಂದು ಮತದಾರರ ಹೆಸರು ತೆಗೆಯಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ನಾವೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ.

Reported ByManjunath NaragundEdited ByManjunath Naragund
Published: Sep 27, 2026, 03:54 PM IST|Updated: Sep 27, 2026, 04:07 PM IST
joinshare
“ಕರ್ನಾಟಕದಲ್ಲಿ 1.18 ಕೋಟಿ ಮತ ಅಳಿಸಿ ಹಾಕಿದ್ದಾರೆ!”: ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ!
Image Credit: Prakash Rai

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹಾಸನ: ಕರ್ನಾಟಕದಲ್ಲಿ ಚುನಾವಣಾ ಆಯೋಗ ಜಾರಿಗೆ ತರುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಹಿಂದೆ ಬೃಹತ್ ಹುನ್ನಾರವಿದ್ದು, ರಾಜ್ಯದಲ್ಲಿ ಬರೋಬ್ಬರಿ 1.18 ಕೋಟಿ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ನಡೆದ 'NO SIR, ಎಸ್ಐಆರ್ ಪರಿಶೋಧ ಹಾಗೂ ಪ್ರತಿರೋಧ ಪ್ರವಾಸ'ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವಾಗ ಈ ರೀತಿ ತರಾತುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವುದು ಸರಿಯಲ್ಲ ಎಂಬುದು ನಮ್ಮ ಒಮ್ಮತದ ಅಭಿಪ್ರಾಯ. "5 ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ರಾಜ್ಯದಲ್ಲಿ ಇಷ್ಟು ಅರ್ಜೆಂಟ್ ಆಗಿ ಮತದಾರರ ಪಟ್ಟಿ ಸರಿಪಡಿಸುವ ನೆಪದಲ್ಲಿ 1 ಕೋಟಿ 18 ಲಕ್ಷ ಮತಗಳನ್ನು ಡಿಲೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಎಲ್‌ಒ (BLO) ಗಳಿಗೆ ಸರಿಯಾದ ತರಬೇತಿ ನೀಡಿಲ್ಲ. ನಿಯಮದ ಪ್ರಕಾರ ಪ್ರತಿಯೊಬ್ಬರ ಮನೆಗೆ ಮೂರು ಬಾರಿ ಭೇಟಿ ನೀಡಬೇಕು. ಆದರೆ ಬಿಎಲ್‌ಒಗಳು ಮನೆಗೆ ಹೋಗದೇ, 'ಮನೆಯಲ್ಲಿ ಯಾರೂ ಇರಲಿಲ್ಲ' ಎಂಬ ಕ್ಷುಲ್ಲಕ ಕಾರಣ ನೀಡಿ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದ್ದಾರೆ" ಎಂದು ಕಿಡಿಕಾರಿದರು.

ಉತ್ತರ ಕರ್ನಾಟಕ ಭಾಗದ ಬಡ ಜನರು ಉದ್ಯೋಗಕ್ಕಾಗಿ ಬೇರೆಡೆಗೆ ಗುಳೆ ಹೋಗುತ್ತಾರೆ. ಅವರ ಹೆಸರುಗಳನ್ನು ಈ ರೀತಿ ಏಕಪಕ್ಷೀಯವಾಗಿ ಅಳಿಸಿಹಾಕಿದರೆ ಅವರು ತಮ್ಮ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗುವುದಿಲ್ಲವೇ? ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಯಾರದ್ದೋ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿದ ಅವರು, "200ಕ್ಕೂ ಹೆಚ್ಚು ನಕಲಿ ಅರ್ಜಿಗಳನ್ನು ತಂದು ಮತದಾರರ ಹೆಸರು ತೆಗೆಯಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ನಾವೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ. ಅವರು ವಿಶೇಷವಾಗಿ ಮುಸ್ಲಿಂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕೆಲಸ ಮಾಡುತ್ತಿದ್ದರು. ಅವರನ್ನು ಹಿಡಿದು ಪ್ರಶ್ನೆ ಮಾಡಿದಾಗ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಿಗೆ ಫೋನ್ ಕರೆ ಹೋಯಿತು. ಸಾಕ್ಷ್ಯ ನಾಶ ಮಾಡಲು ಹೋಗಿ ಇವರು ಸಿಕ್ಕಿಬಿದ್ದಿದ್ದಾರೆ. ಎಲೆಕ್ಷನ್ ಕಮಿಷನ್ ಕ್ರಿಮಿನಲ್‌ಗಳಂತೆ ವರ್ತಿಸುತ್ತಿದೆ" ಎಂದು ಕಟುವಾಗಿ ಆರೋಪಿಸಿದರು.

“ಅಪ್ಪ-ತಾತನ ಹೆಸರು ಯಾಕೆ ಹೇಳಬೇಕು?”

ಚುನಾವಣಾ ಆಯೋಗದ ಹೊಸ ನಿಯಮಗಳನ್ನು ತೀವ್ರವಾಗಿ ಆಕ್ಷೇಪಿಸಿದ ಪ್ರಕಾಶ್ ರಾಜ್, "ಈ ದೇಶದಲ್ಲಿ ಒಬ್ಬ ವ್ಯಕ್ತಿಗೆ 18 ವರ್ಷ ತುಂಬಿದ ತಕ್ಷಣ ಮತದಾನದ ಹಕ್ಕು ಬರುತ್ತದೆ. ಹಾಗಿರುವಾಗ ಅವನ ಅಪ್ಪ ಯಾರು, ತಾತ ಯಾರು ಎಂಬ ದಾಖಲೆಗಳನ್ನು ಕೊಡಿ ಎಂದು ಕೇಳಲು ಆಯೋಗಕ್ಕೆ ಅಧಿಕಾರ ಕೊಟ್ಟವರು ಯಾರು? ಗಣಪತಿ ವಿಸರ್ಜನೆ ಮಾಡಿದಂತೆ ಜ್ಞಾನೇಶ್ ಕುಮಾರ್ ಅವರನ್ನೂ ಆ ಹುದ್ದೆಯಿಂದ ವಿಸರ್ಜನೆ ಮಾಡಬೇಕು. ಜ್ಞಾನೇಶ್ ಕುಮಾರ್ ಬಿಜೆಪಿಗೆ ಸೇರುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಸುಪ್ರೀಂ ಕೋರ್ಟ್ ತಕ್ಷಣವೇ ಎಲೆಕ್ಷನ್ ಕಮಿಷನ್ ದಾಖಲೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಪರಿಶೀಲಿಸಬೇಕು" ಎಂದು ಒತ್ತಾಯಿಸಿದರು.

ಸೆಪ್ಟೆಂಬರ್ 30 ರಂದು ರಾಜ್ಯ ಮಟ್ಟದಲ್ಲಿ ಎಲ್ಲಾ ದಾಖಲೆಗಳ ಸಮೇತ ರಾಜ್ಯದ ನಾಯಕರನ್ನು ಪ್ರಶ್ನಿಸಲಾಗುವುದು ಹಾಗೂ ಈ ಅಕ್ರಮದ ವಿರುದ್ಧ ಕೋರ್ಟ್ ಮೆಟ್ಟಿಲೇರಲಾಗುವುದು ಎಂದು ತಿಳಿಸಿದರು. ಅಲ್ಲದೆ, ಕರ್ನಾಟಕದ ಈ ಹೋರಾಟದ ಮಾದರಿಯನ್ನೇ ಇಟ್ಟುಕೊಂಡು ಅಕ್ಟೋಬರ್ 15 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿ ರಾಜ್ಯದಿಂದ ಸುಮಾರು 10,000 ಜನರನ್ನು ಒಟ್ಟುಗೂಡಿಸಿ ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಾಶ್ ರಾಜ್ ಎಚ್ಚರಿಕೆ ನೀಡಿದ್ದಾರೆ.

 

Add Zee News as a Preferred Source
TAGS:
Kannada News