SOCIAL MEDIA

Newsletter

PARTNER SITES
Select Language Select State

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

ಶಾಲೆಯಲ್ಲಿ ಮಧ್ಯಾಹ್ನದ ಉಪಹಾರವಾಗಿ ಮಕ್ಕಳಿಗೆ ಉಪ್ಪಿಟ್ಟು ಹಾಗೂ ಬಾಳೆಹಣ್ಣು ನೀಡಲಾಗಿತ್ತು. ಆಹಾರ ಸೇವಿಸಿದ ಕೆಲವೇ ಸಮಯದಲ್ಲೇ ಮಕ್ಕಳಲ್ಲಿ ಸಡನ್ ಆಗಿ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ.

Reported By Manjunath Naragund Written By Manjunath Naragund
Published: Oct 01, 2026, 07:42 PM IST | Updated: Oct 01, 2026, 07:49 PM IST
Image Credit: Davanagere
Join

ದಾವಣಗೆರೆ: ಸರ್ಕಾರಿ ಶಾಲೆಯಲ್ಲಿ ವಿತರಿಸಲಾದ ಮಧ್ಯಾಹ್ನದ ಬಿಸಿಯೂಟ ಸೇವಿಸಿ 13 ಶಾಲಾ ಮಕ್ಕಳು ದಿಢೀರ್ ಅಸ್ವಸ್ಥಗೊಂಡಿರುವ ಕರುಣಾಜನಕ ಘಟನೆ ನಗರದ ಶ್ರೀರಾಮ ಬಡಾವಣೆಯಲ್ಲಿ ನಡೆದಿದೆ. ಶ್ರೀರಾಮ ಬಡಾವಣೆಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ಸಂಭವಿಸಿದ್ದು, ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ಶಾಲೆಯಲ್ಲಿ ಮಧ್ಯಾಹ್ನದ ಉಪಹಾರವಾಗಿ ಮಕ್ಕಳಿಗೆ ಉಪ್ಪಿಟ್ಟು ಹಾಗೂ ಬಾಳೆಹಣ್ಣು ನೀಡಲಾಗಿತ್ತು. ಆಹಾರ ಸೇವಿಸಿದ ಕೆಲವೇ ಸಮಯದಲ್ಲೇ ಮಕ್ಕಳಲ್ಲಿ ಸಡನ್ ಆಗಿ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ಒಂದರ ಮೇಲೊಂದರಂತೆ 13 ಮಕ್ಕಳು ತೀವ್ರ ಹೊಟ್ಟೆನೋವಿನಿಂದ ನರಳಾಡಲು ಶುರುಮಾಡಿದಾಗ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ.

ಅಸ್ವಸ್ಥಗೊಂಡ ಎಲ್ಲ 13 ಮಕ್ಕಳನ್ನು ತಕ್ಷಣವೇ ನಗರದ ಪ್ರಸಿದ್ಧ ಚಿಗಟೇರಿ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿ ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿದೆ. ಸದ್ಯ ಮಕ್ಕಳಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಓಡೋಡಿ ಬಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಬಿಸಿಯೂಟದಲ್ಲಿ ಆಹಾರ ವಿಷಪೂರಿತಗೊಂಡಿದೆಯೇ ಅಥವಾ ಬಾಳೆಹಣ್ಣಿನಲ್ಲಿ ಏನಾದರೂ ವ್ಯತ್ಯಾಸವಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES