• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರಾವಳಿ ವಿಕಾಸಕ್ಕೆ ₹32,611 ಕೋಟಿ ಯೋಜನೆಗಳ ಬಂಪರ್ ಕೊಡುಗೆ!

ಕರಾವಳಿ ವಿಕಾಸಕ್ಕೆ ₹32,611 ಕೋಟಿ ಯೋಜನೆಗಳ ಬಂಪರ್ ಕೊಡುಗೆ!

ಸಚಿವ ಸಂಪುಟ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರಿಗೆ ಮಂಗಳೂರಿನ ನೆಲದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

Reported ByManjunath NaragundEdited ByManjunath Naragund
Published: Sep 18, 2026, 09:23 PM IST|Updated: Sep 18, 2026, 09:29 PM IST
joinshare
ಕರಾವಳಿ ವಿಕಾಸಕ್ಕೆ ₹32,611 ಕೋಟಿ ಯೋಜನೆಗಳ ಬಂಪರ್ ಕೊಡುಗೆ!
Image Credit: D K Shivakumar

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಂಗಳೂರು: ಮೀನಿನನಗರಿ, ಕಡಲನಗರಿ ಎಂದೇ ಖ್ಯಾತಿ ಪಡೆದಿರುವ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕರಾವಳಿ ಮತ್ತು ಮಲೆನಾಡು ಭಾಗದ ಸರ್ವಾಂಗೀಣ ಅಭಿವೃದ್ಧಿಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡು ನಡೆದ ಈ ಐತಿಹಾಸಿಕ ಸಭೆಯಲ್ಲಿ, ಬಹುಕಾಲದ ಕನಸಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ಸೇರಿದಂತೆ ಬೃಹತ್ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ವೈಭವದ ರೋಡ್ ಶೋ ಮತ್ತು ಜಾನಪದ ಕಲಾತಂಡಗಳ ಭರ್ಜರಿ ಸ್ವಾಗತ:

ಸಚಿವ ಸಂಪುಟ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರಿಗೆ ಮಂಗಳೂರಿನ ನೆಲದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಖಾಸಗಿ ಹೋಟೆಲ್‌ನಲ್ಲಿದ್ದ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಮೊದಲು ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ, ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕದ್ರಿ ಟೆಂಪಲ್‌ನಿಂದ ಐರಾವತ ಎಸಿ ಬಸ್‌ನಲ್ಲಿ ಪ್ರಯಾಣಿಸಿ, ನಂತರ ತೆರೆದ ವಾಹನದಲ್ಲಿ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ (ಪ್ರಜಾ ಸೌಧ) ವರೆಗೂ ಭರ್ಜರಿ ರೋಡ್ ಶೋ ನಡೆಸಿದರು.

ಬಿರುಬಿಸಿಲನ್ನು ಲೆಕ್ಕಿಸದೆ ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕರಾವಳಿಯ ಹೆಮ್ಮೆಯ ಸಂಸ್ಕೃತಿಯಾದ ಹುಲಿನೃತ್ಯ, ದಫ್ ಪ್ರದರ್ಶನ ಹಾಗೂ ಜಾನಪದ ಕಲಾತಂಡಗಳ ಕಲಾ ಮೆರವಣಿಗೆ ಸಚಿವರ ಗಮನ ಸೆಳೆಯಿತು. ಜಿಲ್ಲಾಧಿಕಾರಿ ಕಚೇರಿಯ ಆವರಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು ಮತ್ತು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ಸಂಪುಟ ಸಭೆಯ ಐತಿಹಾಸಿಕ ತೀರ್ಮಾನಗಳು:

ಪಡೀಲ್‌ನ ‘ಪ್ರಜಾ ಸೌಧ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ನಂತರ ಸಚಿವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರಾವಳಿ ಮತ್ತು ಮಲೆನಾಡು ಭಾಗದ ಭವಿಷ್ಯದ ದೃಷ್ಟಿಯಿಂದ ಕೈಗೊಂಡ ಪ್ರಮುಖ ತೀರ್ಮಾನಗಳನ್ನು ಪ್ರಕಟಿಸಿದರು.

1. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯ ಗೌರವ:

ಕರಾವಳಿ ಜನರ ದಶಕಗಳ ಕನಸಾದ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದ ಸಮ್ಮತಿ ಸೂಚಿಸಿ ಅನುಮೋದನೆ ನೀಡಲಾಯಿತು. ಇದು ತುಳುನಾಡಿನ ಸಾಂಸ್ಕೃತಿಕ ಮತ್ತು ಭಾಷಿಕ ಹೂರಣಕ್ಕೆ ಸಿಕ್ಕ ದೊಡ್ಡ ಜಯವಾಗಿದೆ.

2. ಕರಾವಳಿ ಅಭಿವೃದ್ಧಿಗೆ ₹32,611 ಕೋಟಿ ಯೋಜನೆಗಳು:

ಕರಾವಳಿ ಭಾಗದ ರಸ್ತೆ, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಒಟ್ಟು 32,611 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ಸಿಂಹಪಾಲು, ಅಂದರೆ 16,000 ಕೋಟಿ ರೂಪಾಯಿಗಳನ್ನು ಕರಾವಳಿ ಭಾಗದ ರಸ್ತೆಗಳ ಸುಧಾರಣೆ ಮತ್ತು ಬೃಹತ್ ಸಂಪರ್ಕ ಜಾಲದ ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ.

3. ‘ದಕ್ಷಿಣ ಕನ್ನಡ’ ಹೆಸರು ‘ಮಂಗಳೂರು ಜಿಲ್ಲೆ’ಯಾಗಿ ಬದಲಾವಣೆ?:

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಪ್ರದಾಯ, ಆಚಾರ-ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಲಾಗಿದೆ. ಇಡೀ ಜಗತ್ತಿನಲ್ಲಿ ಮಂಗಳೂರು ಹೆಸರು ಪ್ರಸಿದ್ಧವಾಗಿದ್ದು, ಜನರ ಭಾವನಾತ್ಮಕ ಬೆಸುಗೆಯನ್ನು ಗೌರವಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಒಂದು ತಿಂಗಳ ಅವಧಿಯಲ್ಲಿ ಸಾರ್ವಜನಿಕ ಅಭಿಪ್ರಾಯ ಕೋರಿ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

4. ವಿಶೇಷ ಪ್ರವಾಸೋದ್ಯಮ ನೀತಿ ಮತ್ತು ಹೆಲ್ತ್ ಹಬ್:

ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಿಗೆ ಸೂಕ್ತವಾಗುವಂತೆ ‘ಪ್ರತ್ಯೇಕ ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026’ಕ್ಕೆ ಅನುಮೋದನೆ ನೀಡಲಾಗಿದೆ. ಜತೆಗೆ, ಈ ಭಾಗದ ಜನರ ಆರೋಗ್ಯ ಸೇವೆ ಬಲಪಡಿಸಲು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಹಾಗೂ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

5. ಬ್ಲೂ ಎಕಾನಮಿ ಯೂನಿವರ್ಸಿಟಿ ಹಾಗೂ ಫಿಶರೀಸ್ ಪಾರ್ಕ್:

ಮೀನುಗಾರಿಕೆ ಕ್ಷೇತ್ರವನ್ನು ಆಧುನಿಕಗೊಳಿಸಲು ಮತ್ತು ಕಡಲ ಆರ್ಥಿಕತೆಯನ್ನು ವೃದ್ಧಿಸಲು 'ಮರೈನ್ ಬ್ಲೂ ಎಕಾನಮಿ ಯೂನಿವರ್ಸಿಟಿ' ಘೋಷಣೆ ಮಾಡಲಾಗಿದ್ದು, 150 ಎಕರೆ ವಿಸ್ತೀರ್ಣದಲ್ಲಿ ಅತ್ಯಾಧುನಿಕ 'ಮೀನುಗಾರಿಕೆ ಪಾರ್ಕ್' (Fisheries Park) ನಿರ್ಮಿಸಲು ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ.

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಡೆದ ಈ ಸಚಿವ ಸಂಪುಟ ಸಭೆಯು ಈ ಭಾಗದ ಸಾರ್ವಜನಿಕ ವಲಯದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದು, ಕರಾವಳಿ ಮತ್ತು ಮಲೆನಾಡಿನ ಅಭಿವೃದ್ಧಿಗೆ ಹೊಸ ದಿಕ್ಸೂಚಿ ಒದಗಿಸಿದೆ.
 

Add Zee News as a Preferred Source