SOCIAL MEDIA

Newsletter

PARTNER SITES
Select Language Select State

ಆಲಿಸು ಕಂದ ಅಭಿಯಾನ: ಶ್ರವಣ ದೋಷವಿರುವ ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಟೇಷನ್ - ಸಚಿವ ಯು.ಟಿ. ಖಾದರ್ ಘೋಷಣೆ

ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಎಲ್ಲಾ ತಾಲೂಕಿನ ಹೆರಿಗೆ ಆಸ್ಪತ್ರೆಗಳಲ್ಲೇ ನವಜಾತ ಶಿಶುಗಳಿಗೆ ಶ್ರವಣ ದೋಷದ ತಪಾಸಣೆ ನಡೆಸಲಾಗುತ್ತದೆ.

Reported By Manjunath Naragund Written By Manjunath Naragund
Published: Oct 22, 2026, 04:04 PM IST | Updated: Oct 22, 2026, 04:24 PM IST
Image Credit: U T Khadar
Join

ಬೆಂಗಳೂರು: ರಾಜ್ಯದಲ್ಲಿ ಶ್ರವಣ ದೋಷದಿಂದ ಬಳಲುತ್ತಿರುವ ಬಡ ಕಾರ್ಮಿಕರ ಮಕ್ಕಳಿಗಾಗಿ ಮಹತ್ತ್ವದ ‘ಆಲಿಸು ಕಂದ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಾಗುವ ದುಬಾರಿ ಕಾಕ್ಲಿಯರ್ ಇಂಪ್ಲಾಟೇಷನ್  ಶಸ್ತ್ರಚಿಕಿತ್ಸೆಯನ್ನು ಇನ್ಮುಂದೆ ಅರ್ಹ ಮಕ್ಕಳಿಗೆ ಸಂಪೂರ್ಣ ಉಚಿತವಾಗಿರಿಸಲಾಗುವುದು ಎಂದು ಅವರು ಪ್ರಕಟಿಸಿದರು.

ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಎಲ್ಲಾ ತಾಲೂಕಿನ ಹೆರಿಗೆ ಆಸ್ಪತ್ರೆಗಳಲ್ಲೇ ನವಜಾತ ಶಿಶುಗಳಿಗೆ ಶ್ರವಣ ದೋಷದ ತಪಾಸಣೆ ನಡೆಸಲಾಗುತ್ತದೆ. ತಜ್ಞ ವೈದ್ಯರ ಸಮಾಲೋಚನೆ ಹಾಗೂ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದೊಂದಿಗೆ ಈ ಮಹತ್ತ್ವದ ಆರೋಗ್ಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರದರ್ಶನ ಕಡ್ಡಾಯ:

ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪ ಹಾಗೂ ಪಾರದರ್ಶಕ ದರ ಪಟ್ಟಿ ಪ್ರಕಟಿಸುವ ಕುರಿತು ಮಾತನಾಡಿದ ಅವರು, ನಾಳೆ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಜತೆ ಮಹತ್ವದ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಈಗಾಗಲೇ ಎಲ್ಲಾ ಆಸ್ಪತ್ರೆಗಳು ಪ್ರಮುಖ ಚಿಕಿತ್ಸೆಗಳ ದರ ಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಲಾಗಿದೆ. ವಿಶೇಷವಾಗಿ ಪ್ರಮುಖ ಚಿಕಿತ್ಸಾ ದರಗಳನ್ನು ವಿಭಿನ್ನ ಬಣ್ಣಗಳಲ್ಲಿ ನೋಟಿಸ್ ಬೋರ್ಡ್ ಮೇಲೆ ಹಾಗೂ ಲೆಡ್ಜರ್ ಪುಸ್ತಕದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಮೈಸೂರು ದಸರಾ ವೇಳೆ ಸಚಿವರ ತಡೆ ಪ್ರಕರಣ: ಪೊಲೀಸರ ಸಮರ್ಥನೆ

ಮೈಸೂರು ದಸರಾ ಮಹೋತ್ಸವದ ವೇಳೆ ತಮ್ಮನ್ನು ಭದ್ರತಾ ಸಿಬ್ಬಂದಿ ತಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಇದು ಯಾವುದೇ ಉದ್ದೇಶಪೂರ್ವಕ ಕೃತ್ಯವಲ್ಲ, ಕೇವಲ 'ಮಾನವ ಸಹಜ ತಪ್ಪು'ಎಂದು ಸ್ಪಷ್ಟಪಡಿಸಿದರು. ಕಳೆದ ಒಂದು ತಿಂಗಳಿಂದ ಪೊಲೀಸರು ಹಗಲಿರುಳು ಊಟ-ತಿಂಡಿಯಿಲ್ಲದೆ ಕಷ್ಟಪಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮದ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುವಾಗ ಇಂತಹ ಸಣ್ಣಪುಟ್ಟ ಪ್ರಮಾದಗಳು ಸಂಭವಿಸುವುದು ಸಹಜ. ಸಣ್ಣಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಿ ಪೊಲೀಸರ ಮನೋಸ್ಥೈರ್ಯ ಕುಗ್ಗಿಸಬಾರದು ಎಂದು ಅವರು ಅಭಿಪ್ರಾಯಪಟ್ಟರು.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES