• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಟ ದರ್ಶನ್‌ಗೆ ಬಿಗ್ ರಿಲೀಫ್ : ಮಹತ್ವದ ಆದೇಶ ಹೊರಡಿಸಿದ ನ್ಯಾಯಾಲಯ

ನಟ ದರ್ಶನ್‌ಗೆ ಬಿಗ್ ರಿಲೀಫ್ : ಮಹತ್ವದ ಆದೇಶ ಹೊರಡಿಸಿದ ನ್ಯಾಯಾಲಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಆರೋಗ್ಯ ಸಂಬಂಧಿತ ವಿಚಾರದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ಅವರಿಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡುವಂತೆ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

Written ByKrishna NK
Published: Nov 07, 2026, 18:24 IST|Updated: Nov 07, 2026, 18:33 IST
joinshare
ನಟ ದರ್ಶನ್‌ಗೆ ಬಿಗ್ ರಿಲೀಫ್ : ಮಹತ್ವದ ಆದೇಶ ಹೊರಡಿಸಿದ ನ್ಯಾಯಾಲಯ
Image Credit: Darshan CAse

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Darshan Case Updates : ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜೈಲಿನಲ್ಲಿಯೇ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೋರ್ಟ್ ಮಹತ್ವದ ಅನುಮತಿ ನೀಡಿದ್ದು, ನಟನ ಆರೋಗ್ಯ ಸ್ಥಿತಿಯ ಕುರಿತ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ..

ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಕಳೆದ ಕೆಲವು ತಿಂಗಳುಗಳಿಂದ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ ಅವರ ಆರೋಗ್ಯದ ವಿಚಾರವಾಗಿ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಕಾಲ್ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಇದರ ಬೆನ್ನಲ್ಲೇ ಈಗ ತೀವ್ರವಾದ ಬೆನ್ನುನೋವಿನ ಸಮಸ್ಯೆ ಅವರನ್ನು ಕಾಡುತ್ತಿದ್ದು, ಈ ಬಗ್ಗೆ ನಟನ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಜೈಲಿನ ಒಳಗಡೆಯೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್, ವಿಚಾರಣೆ ನಡೆಸಿ ಜೈಲಿನಲ್ಲಿಯೇ ದರ್ಶನ್‌ಗೆ ಅಗತ್ಯವಿರುವ ಫಿಸಿಯೋಥೆರಪಿ ಚಿಕಿತ್ಸೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ಇದರಿಂದಾಗಿ ದರ್ಶನ್ ಆರೋಗ್ಯಕ್ಕೆ ಸ್ವಲ್ಪಮಟ್ಟಿನ ಉಪಶಮನ ಸಿಕ್ಕಂತಾಗಿದೆ.

ಘಟನೆಯ ಹಿನ್ನೆಲೆ ನೋಡುವುದಾದರೆ, ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಪೊಲೀಸರ ಅತಿಥಿಯಾಗಿ ಜೈಲು ಸೇರಬೇಕಾಯಿತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ತನಿಖೆ ಮುಂದುವರಿದಂತೆ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಂದಿನಿಂದಲೂ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಹಾಗೂ ನಂತರ ಹೈ ಸೆಕ್ಯುರಿಟಿ ದೃಷ್ಟಿಯಿಂದ ಬೇರೆ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ಜೈಲು ಸೇರಿದ ಆರಂಭದ ದಿನಗಳಿಂದಲೂ ದರ್ಶನ್ ಅವರ ಆರೋಗ್ಯ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಮುನ್ನೆಲೆಗೆ ಬರುತ್ತಲೇ ಇವೆ. ಇದರ ಮಧ್ಯೆ ಈಗ ಬೆನ್ನುನೋವು ಕೂಡ ಉಲ್ಬಣಗೊಂಡಿದ್ದು, ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದರು. ಕೋರ್ಟ್ ನೀಡಿರುವ ಈ ಹೊಸ ಆದೇಶದಿಂದ ಜೈಲು ಅಧಿಕರಿಗಳು ಈಗ ದರ್ಶನ್‌ಗೆ ವೈದ್ಯರ ಸಲಹೆಯಂತೆ ಫಿಸಿಯೋಥೆರಪಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಿದೆ. ಕಾನೂನು ಹೋರಾಟದ ಮೂಲಕ ಆರೋಗ್ಯ ರಕ್ಷಣೆಗಾಗಿ ನಟನ ಪರ ವಕೀಲರು ನಡೆಸಿದ ಪ್ರಯತ್ನಕ್ಕೆ ಸದ್ಯ ನ್ಯಾಯಾಲಯದಲ್ಲಿ ತಾತ್ಕಾಲಿಕ ಜಯ ಸಿಕ್ಕಂತಾಗಿದೆ.

ಒಟ್ಟಾರೆಯಾಗಿ.. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಹೋರಾಟ ಒಂದು ಕಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ದರ್ಶನ್ ತಮ್ಮ ಆರೋಗ್ಯ ಸಮಸ್ಯೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಮತ್ತು ದರ್ಶನ್ ಆರೋಗ್ಯ ಎಷ್ಟರ ಮಟ್ಟಿಗೆ ಸುಧಾರಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

Add Zee News as a Preferred Source
TAGS:
Crime