SOCIAL MEDIA

Newsletter

PARTNER SITES
Select Language Select State

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ವಿಮಾನದ ರೆಕ್ಕೆ ರನ್‌ವೇಗೆ ಬಡಿತ— ಪೈಲಟ್ ಜಾಣಕ್ಷತೆಯಿಂದ ತಪ್ಪಿದ ಭಾರಿ ದುರಂತ

ವಿಮಾನ ರನ್‌ವೇನಲ್ಲಿ ಸುರಕ್ಷಿತವಾಗಿ ನಿಂತ ತಕ್ಷಣವೇ ಸಿಬ್ಬಂದಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪೈಲಟ್‌ನ ಸೂಕ್ತ ನಿರ್ಧಾರ ಹಾಗೂ ಸಮಯಪ್ರಜ್ಞೆಗೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Reported By Manjunath Naragund Written By Manjunath Naragund
Published: Sep 28, 2026, 10:15 AM IST | Updated: Sep 28, 2026, 10:35 AM IST
Image Credit: Runway
Join

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವಾಗ ಭಾರಿ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಗುವಾಹಟಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡ್ ಆಗುವ ಸಂದರ್ಭದಲ್ಲಿ ಅದರ ರೆಕ್ಕೆ ರನ್‌ವೇಗೆ ತಗಲಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ನೂರಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯಾಹ್ನ ಸುಮಾರು 1:34ರ ವೇಳೆಗೆ ಈ ಘಟನೆ ನಡೆದಿದೆ. ಗುವಾಹಟಿಯಿಂದ ಹೊರಟಿದ್ದ ಇಂಡಿಗೋ ಸಂಸ್ಥೆಯ '6E 6542' ವಿಮಾನವು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್‌ಗೆ ಸಜ್ಜಾಗುತ್ತಿತ್ತು. ಈ ವೇಳೆ ಏಕಾಏಕಿ ಬೀಸಿದ ಜೋರಾದ ಗಾಳಿಯ ಒತ್ತಡಕ್ಕೆ ಸಿಲುಕಿ, ವಿಮಾನದ ರನ್‌ವೇ ಸಂಪರ್ಕದಲ್ಲಿ ಸಣ್ಣ ಮಟ್ಟದ ಎಡವಟ್ಟಾಯಿತು. ಲ್ಯಾಂಡಿಂಗ್ ಆಗುವ ಕ್ಷಣದಲ್ಲೇ ವಿಮಾನದ ರೆಕ್ಕೆ ರನ್‌ವೇ ಸ್ಪರ್ಶಿಸಿದೆ.

ಸ್ಥಿತಿ ಕೈತಪ್ಪುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್, ಪರಿಸ್ಥಿತಿಯನ್ನು ಅತ್ಯಂತ ಜಾಣಕ್ಷತೆಯಿಂದ ಹತೋಟಿಗೆ ತಂದರು. ಇದರಿಂದಾಗಿ ವಿಮಾನದಲ್ಲಿದ್ದ 200ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ವಿಮಾನ ರನ್‌ವೇನಲ್ಲಿ ಸುರಕ್ಷಿತವಾಗಿ ನಿಂತ ತಕ್ಷಣವೇ ಸಿಬ್ಬಂದಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪೈಲಟ್‌ನ ಸೂಕ್ತ ನಿರ್ಧಾರ ಹಾಗೂ ಸಮಯಪ್ರಜ್ಞೆಗೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಘಟನೆ ನಡೆದ ತಕ್ಷಣವೇ ನಿಯಮಾವಳಿಗಳ ಪ್ರಕಾರ (SOP) ಪೈಲಟ್‌ಗಳು ಇಂಡಿಗೋ ವಿಮಾನಯಾನ ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸಂಪೂರ್ಣ ವಿವರ ನೀಡಿದ್ದಾರೆ. ಪ್ರಸ್ತುತ ಈ ವಿಮಾನವನ್ನು ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದ್ದು, ವಿಮಾನಕ್ಕಾದ ಹಾನಿ ಮತ್ತು ಘಟನೆಗೆ ನಿಖರ ಕಾರಣಗಳ ಕುರಿತು ಇಂಡಿಗೋ ಸಂಸ್ಥೆಯ ತಾಂತ್ರಿಕ ತಂಡ ತನಿಖೆ ಮುಂದುವರಿಸಿದೆ.

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES