ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ವಿವಿಧ ವಿವಾದಗಳಲ್ಲಿ ಮುಳುಗಿರುವಂತೆಯೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಚುರುಕುಗೊಳಿಸಿದೆ. ಕಂದಾಯ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 572 ಗ್ರಾಮ ಅಡಳಿತ ಅಧಿಕಾರಿ (Village Administrative Officer - V.A.O.) ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೆಎಇ ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು, ಪ್ರಾಧಿಕಾರದಿಂದ ಕಳೆದ ಅಕ್ಟೋಬರ್ 04 ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಬಂದಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅಕ್ಟೋಬರ್ 16 ರಂದು ಹೊರಡಿಸಲಾಗಿತ್ತು. ಅದರನ್ವಯ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಅಕ್ಟೋಬರ್ 19 ರಂದು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ ನಾಳೆ :
ಬಿಡುಗಡೆ ಮಾಡಲಾದ ತಾತ್ಕಾಲಿಕ ಫಲಿತಾಂಶದ ಕುರಿತು ಅಭ್ಯರ್ಥಿಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ನಾಳೆ ಅಕ್ಟೋಬರ್ 22 ರ ಬೆಳಿಗ್ಗೆ 10:00 ಗಂಟೆಯೊಳಗೆ ಇ-ಮೇಲ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಯಾವುದೇ ದಾಖಲೆಗಳಿಲ್ಲದೆ ಸಲ್ಲಿಸುವ ಹಾಗೂ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್