SOCIAL MEDIA

Newsletter

PARTNER SITES
Select Language Select State

ಕೆಪಿಎಸ್‌ಸಿ ವಿವಾದದ ಬೆನ್ನಲ್ಲೇ ಕೆಎಇ ಬಿರುಸು: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ!

ಬಿಡುಗಡೆ ಮಾಡಲಾದ ತಾತ್ಕಾಲಿಕ ಫಲಿತಾಂಶದ ಕುರಿತು ಅಭ್ಯರ್ಥಿಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ನಾಳೆ ಅಕ್ಟೋಬರ್ 22 ರ ಬೆಳಿಗ್ಗೆ 10:00 ಗಂಟೆಯೊಳಗೆ ಇ-ಮೇಲ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Reported By Manjunath Naragund Written By Manjunath Naragund
Published: Oct 21, 2026, 01:05 PM IST | Updated: Oct 21, 2026, 01:28 PM IST
Image Credit: KPSC
Join

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ವಿವಿಧ ವಿವಾದಗಳಲ್ಲಿ ಮುಳುಗಿರುವಂತೆಯೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಚುರುಕುಗೊಳಿಸಿದೆ. ಕಂದಾಯ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 572 ಗ್ರಾಮ ಅಡಳಿತ ಅಧಿಕಾರಿ (Village Administrative Officer - V.A.O.) ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೆಎಇ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು, ಪ್ರಾಧಿಕಾರದಿಂದ ಕಳೆದ ಅಕ್ಟೋಬರ್ 04 ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಬಂದಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅಕ್ಟೋಬರ್ 16 ರಂದು ಹೊರಡಿಸಲಾಗಿತ್ತು. ಅದರನ್ವಯ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಅಕ್ಟೋಬರ್ 19 ರಂದು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ ನಾಳೆ : 

ಬಿಡುಗಡೆ ಮಾಡಲಾದ ತಾತ್ಕಾಲಿಕ ಫಲಿತಾಂಶದ ಕುರಿತು ಅಭ್ಯರ್ಥಿಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ನಾಳೆ ಅಕ್ಟೋಬರ್ 22 ರ ಬೆಳಿಗ್ಗೆ 10:00 ಗಂಟೆಯೊಳಗೆ ಇ-ಮೇಲ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಯಾವುದೇ ದಾಖಲೆಗಳಿಲ್ಲದೆ ಸಲ್ಲಿಸುವ ಹಾಗೂ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ <response-element class="no-md" ng-version="0.0.0-PLACEHOLDER">https://cetonline.karnataka.gov.in/kea</link-block></response-element> ಮೂಲಕ ಪರಿಶೀಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗುರುವಾರದಿಂದ ಎಂದಿನಂತೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES