SOCIAL MEDIA

Newsletter

PARTNER SITES
Select Language Select State

KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್

KPSC ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ವಿಚಾರಣೆಯ ಭಾಗವಾಗಿ ಶಾಂತ ಹೊಸಮನಿ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Reported By Manjunath Naragund Written By Manjunath Naragund
Published: Sep 19, 2026, 08:55 PM IST | Updated: Sep 19, 2026, 06:50 PM IST
Image Credit: File Photo
Join

ಒಂದು ಕಡೆ ಸಿಐಡಿ ಅಧಿಕಾರಿಗಳಿಂದ ಶಾಂತ ಹೊಸಮನಿಗೆ ವಿಚಾರಣೆಯ ಬಿಸಿ.ಮತ್ತೊಂದು ಕಡೇ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ಎಲೆಕ್ಟ್ರಾನಿಕ್ ಸಾಧನಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ KPSC ನೇಮಕಾತಿ ಹಗರಣ ಪ್ರಕರಣದಲ್ಲಿ ಇಡಿ ಕೂಡ ಅಲರ್ಟ್ ಆಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿ ಕಸ್ಟಡಿಗೆ ಪಡೆದಿದೆ. ಹಾಗಾದ್ರೆ ಈ ತನಿಖೆಯಲ್ಲಿ ಸಿಐಡಿ ಹಾಗೂ ಇಡಿಗೆ ಸಿಕ್ಕಿರುವ ಸುಳಿವುಗಳೇನು.ಎಲೆಕ್ಟ್ರಾನಿಕ್ ಸಾಧನಗಳ ರಿಟ್ರೀವ್ ರಿಪೋರ್ಟ್‌ನಲ್ಲಿ ಏನಿದೆ.ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

KPSC ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ವಿಚಾರಣೆಯ ಭಾಗವಾಗಿ ಶಾಂತ ಹೊಸಮನಿ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಧಿಕಾರಿಗಳು ಕೇಳಿದ ಹಲವು ಪ್ರಶ್ನೆಗಳಿಗೆ ಶಾಂತ ಹೊಸಮನಿ ಸಮರ್ಪಕವಾಗಿ ಉತ್ತರಿಸಿಲ್ಲ ಎನ್ನಲಾಗಿದ್ದು, ವಿಚಾರಣೆ ಬಳಿಕ ಸಿಐಡಿ ಅಧಿಕಾರಿಗಳು ಮತ್ತಷ್ಟು ಸಾಕ್ಷ್ಯಗಳಿಗಾಗಿ ಅವರ ಮನೆಗಳತ್ತ ಹೆಜ್ಜೆ ಹಾಕಿದ್ದಾರೆ.ಶಾಂತ ಹೊಸಮನಿ ಬೆಂಗಳೂರಿನಲ್ಲಿ ವಾಸವಾಗಿದ್ದು, ದಾವಣಗೆರೆಯಲ್ಲೂ ಒಂದು ಮನೆ ಹೊಂದಿದ್ದಾರೆ. ದಾವಣಗೆರೆಯ ಮನೆಯನ್ನು ಬಾಡಿಗೆಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಬಾಡಿಗೆದಾರರು ಮನೆ ಖಾಲಿ ಮಾಡಿದ್ದ ಹಿನ್ನೆಲೆ, ನಿನ್ನೆ ಸಿಐಡಿ ತಂಡ ದಾವಣಗೆರೆಯ ಮನೆಗೂ ತೆರಳಿ ಸಂಪೂರ್ಣ ಪರಿಶೀಲನೆ ನಡೆಸಿದೆ. ಶಾಂತ ಹೊಸಮನಿಗೆ ಸಂಬಂಧಿಸಿದ ಇನ್ನೂ ಹಲವು ಸ್ಥಳಗಳಲ್ಲೂ ಸಿಐಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಇನ್ನು ಬೆಂಗಳೂರಿನ ಮನೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಎರಡು ಮೊಬೈಲ್ ಫೋನ್ ಹಾಗೂ ಒಂದು ಟ್ಯಾಬ್ ಪತ್ತೆಯಾಗಿದೆ. ಈ ಮೂರು ಎಲೆಕ್ಟ್ರಾನಿಕ್ ಸಾಧನಗಳನ್ನು ರಿಟ್ರೀವ್ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಾಧನಗಳಲ್ಲಿ ಇರುವ ಮಾಹಿತಿ, ಸಂಪರ್ಕಗಳು ಹಾಗೂ ಇತರೆ ಡಿಜಿಟಲ್ ದಾಖಲೆಗಳು ಪ್ರಕರಣದ ತನಿಖೆಗೆ ಮಹತ್ವದ ಸುಳಿವು ನೀಡಬಹುದೇ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ರಿಟ್ರೀವ್ ರಿಪೋರ್ಟ್‌ಗಾಗಿ ಸಿಐಡಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಇದೇ ವೇಳೆ KPSC ನೇಮಕಾತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕೂಡ ತನ್ನ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.ನ್ಯಾಯಾಂಗ ಬಂಧನದಲ್ಲಿದ್ದ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಇಡಿ ಅಧಿಕಾರಿಗಳು ಜೈಲಿನಲ್ಲೇ ವಿಚಾರಣೆ ನಡೆಸಿದ್ದರು.ಸತತ ಮೂರು ದಿನಗಳ ವಿಚಾರಣೆ ಬಳಿಕ ನಿನ್ನೆ ರಾತ್ರಿ ಇಬ್ಬರನ್ನೂ ಇಡಿ ಬಂಧಿಸಿದೆ.ಬಂಧನದ ಬಳಿಕ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ ಇಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.ಹೀಗಾಗಿ ಒಂದೆಡೆ ಸಿಐಡಿ ತನಿಖೆ ನಡೆಸುತ್ತಿದ್ದರೆ, ಮತ್ತೊಂದೆಡೆ ಇಡಿ ಕೂಡ ಅಕ್ರಮ ನೇಮಕಾತಿ ಪ್ರಕರಣದ ಹಣಕಾಸು ಹಾಗೂ ಇತರೆ ಆಯಾಮಗಳ ಬಗ್ಗೆ ತನಿಖೆ ಮುಂದುವರಿಸಿದೆ.ಸಿಐಡಿ ಕೈಗೆ ಸಿಕ್ಕಿರುವ ಮೊಬೈಲ್, ಟ್ಯಾಬ್‌ಗಳ ರಿಟ್ರೀವ್ ರಿಪೋರ್ಟ್ ಹಾಗೂ ಇಡಿ ವಿಚಾರಣೆಯಿಂದ ಹೊರಬರುವ ಮಾಹಿತಿ ಪ್ರಕರಣದ ತನಿಖೆಯಲ್ಲಿ ಯಾವ ತಿರುವು ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
 

Add Zee News as a Preferred Source

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES