• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ದುಬಾರಿ ದುನಿಯಾ ನಡುವೆ ಮತ್ತೊಂದು ಶಾಕ್! ನಂದಿನಿ ಬೆನ್ನಲ್ಲೇ ಖಾಸಗಿ ಹಾಲಿನ ದರ ಏರಿಕೆ

ದುಬಾರಿ ದುನಿಯಾ ನಡುವೆ ಮತ್ತೊಂದು ಶಾಕ್! ನಂದಿನಿ ಬೆನ್ನಲ್ಲೇ ಖಾಸಗಿ ಹಾಲಿನ ದರ ಏರಿಕೆ

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಬೆನ್ನಲ್ಲೇ ಮದರ್ ಡೈರಿ, ಹೆರಿಟೇಜ್, ಡೊಡ್ಲಾ ಸೇರಿದಂತೆ ಖಾಸಗಿ ಡೈರಿಗಳೂ ಬೆಲೆ ಹೆಚ್ಚಿಸಿದ್ದು, ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿವೆ. ಇನ್ನು ಹಾಲಿನ ದರ ಪರಿಷ್ಕರಣೆ ಕುರಿತು ಇಂದು ನಡೆಯಬೇಕಿದ್ದ ಡಿ.ಕೆ. ಸುರೇಶ್ ಅವರ ಸುದ್ದಿಗೋಷ್ಠಿ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

Written ByYashaswini V
Published: Nov 04, 2026, 10:44 AM IST|Updated: Nov 04, 2026, 10:45 AM IST
joinshare
ದುಬಾರಿ ದುನಿಯಾ ನಡುವೆ ಮತ್ತೊಂದು ಶಾಕ್! ನಂದಿನಿ ಬೆನ್ನಲ್ಲೇ ಖಾಸಗಿ ಹಾಲಿನ ದರ ಏರಿಕೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದಲ್ಲಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತ ಸಿಸಿಬಿ ಪೊಲೀಸರು!

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದಲ್ಲಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತ ಸಿಸಿಬಿ ಪೊಲೀಸರು!

2

ದುಬಾರಿ ದುನಿಯಾ ನಡುವೆ ಮತ್ತೊಂದು ಶಾಕ್! ನಂದಿನಿ ಬೆನ್ನಲ್ಲೇ ಖಾಸಗಿ ಹಾಲಿನ ದರ ಏರಿಕೆ

3

BBK 13 : ಸೇಡಿಗಾಗಿ ಕೀಳುಮಟ್ಟದ ಆಟವಾಡಿದ್ರಾ ಶಾಸ್ತ್ರಿ! ಫಿನಾಲೆ ಅವಕಾಶವನ್ನೇ ಕಳೆದುಕೊಳ್ತಾರಾ?

4

ದೀಪಾವಳಿ ಹೊತ್ತಲ್ಲೇ ಮಿಂಟೋ ಆಸ್ಪತ್ರೆಯಿಂದ ಪಟಾಕಿಯಿಂದ ಉಂಟಾದ ಅವಘಡಗಳ ಅಂಕಿ ಅಂಶ ಬಿಡುಗಡೆ

5

ದಿನ ಭವಿಷ್ಯ 04-11-2026: ಬುಧವಾರದಂದು ಬ್ರಹ್ಮ ಯೋಗ.. ಈ ರಾಶಿಯವರಿಗೆ ಅದೃಷ್ಟ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಹಾಲಿನ ದರ ಏರಿಕೆಯ ಮತ್ತೊಂದು ಬಿಸಿ ತಟ್ಟಿದೆ. ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬೆನ್ನಲ್ಲೇ ಪ್ರಮುಖ ಖಾಸಗಿ ಡೈರಿಗಳೂ ತಮ್ಮ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿವೆ. ಮದರ್ ಡೈರಿ, ಹೆರಿಟೇಜ್, ಡೊಡ್ಲಾ ಹಾಗೂ ತಿರುಮಲ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹಾಲು ಮತ್ತು ಮೊಸರಿನ ದರದಲ್ಲಿ ಏರಿಕೆಯಾಗಿದೆ. ಇದರಿಂದ ಪ್ರತಿದಿನ ಹಾಲು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಆರ್ಥಿಕ ಹೊರೆ ಎದುರಾಗಿದೆ.

ನಂದಿನಿ ಬೆನ್ನಲ್ಲೇ ಖಾಸಗಿ ಡೈರಿಗಳಿಂದಲೂ ಹಾಲಿನ ದರ ಏರಿಕೆ: 
ರಾಜ್ಯದಲ್ಲಿ ನವೆಂಬರ್ 1ರಿಂದ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಜಾರಿಗೆ ಬಂದಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಪೈಕಿ 7 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತದೆ ಎಂದು ಕೆಎಂಎಫ್ ತಿಳಿಸಿತ್ತು. ಆದರೆ ಮೊಸರಿನ ದರವನ್ನು ಲೀಟರ್‌ಗೆ 54 ರೂಪಾಯಿಯಿಂದ 68 ರೂಪಾಯಿಗೆ ಹೆಚ್ಚಿಸಿರುವುದು ಗ್ರಾಹಕರ ತೀವ್ರ ವಿರೋಧಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಖಾಸಗಿ ಹಾಲಿನ ಕಂಪನಿಗಳೂ ಬೆಲೆ ಹೆಚ್ಚಿಸಿರುವುದು ಗ್ರಾಹಕರಿಗೆ ಮತ್ತೊಂದು ಆಘಾತ ನೀಡಿದೆ. ಮದರ್ ಡೈರಿ ಪ್ರತಿ ಲೀಟರ್ ಹಾಲಿನ ದರವನ್ನು 2 ರೂಪಾಯಿ ಹೆಚ್ಚಿಸಿದೆ. ಹೆರಿಟೇಜ್ ಹಾಲಿನ ದರದಲ್ಲಿ ಪ್ರತಿ ಲೀಟರ್‌ಗೆ ಗರಿಷ್ಠ 5.90 ರೂಪಾಯಿ ಏರಿಕೆ ಮಾಡಲಾಗಿದೆ. ಇನ್ನು ಡೊಡ್ಲಾ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ 6 ರೂಪಾಯಿ ಹೆಚ್ಚಿಸಲಾಗಿದೆ.

ಮೊಸರು ದರದಲ್ಲೂ ಭಾರೀ ಏರಿಕೆ: 
ಹಾಲಿನ ಜೊತೆಗೆ ಮೊಸರಿನ ಬೆಲೆಯೂ ಹೆಚ್ಚಳವಾಗಿರುವುದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ. ಹೆರಿಟೇಜ್ ಕಂಪನಿಯ ಒಂದು ಲೀಟರ್ ಮೊಸರಿನ ದರದಲ್ಲಿ 14 ರೂಪಾಯಿ ಹೆಚ್ಚಳ ಮಾಡಿದ್ದರೆ, ಡೊಡ್ಲಾ ಕಂಪನಿಯ ಒಂದು ಲೀಟರ್ ಮೊಸರಿನ ಬೆಲೆಯನ್ನು 6 ರೂಪಾಯಿ ಹೆಚ್ಚಿಸಲಾಗಿದೆ. ಹೀಗಾಗಿ ನಂದಿನಿ ಮಾತ್ರವಲ್ಲದೆ ಖಾಸಗಿ ಬ್ರ್ಯಾಂಡ್‌ಗಳ ಮೊಸರು ಖರೀದಿಸುವ ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ನಂದಿನಿ ಮೊಸರು ದರ ಇಳಿಕೆಗೆ ಸಿಎಂ ಸೂಚನೆ: 
ಇನ್ನು ನಂದಿನಿ ಮೊಸರಿನ ದರ ಏರಿಕೆ ವಿಚಾರವಾಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಕೆಎಂಎಫ್ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊಸರಿನ ದರವನ್ನು ಲೀಟರ್‌ಗೆ 2 ರೂಪಾಯಿ ಇಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಹಾಲಿನ ದರ ಏರಿಕೆಯಿಂದ ಸಂಗ್ರಹವಾಗುವ 8 ರೂಪಾಯಿಯಲ್ಲಿ 7 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದರು. ಆದರೆ ಮೊಸರಿನ ದರವನ್ನು ಏಕಾಏಕಿ 14 ರೂಪಾಯಿ ಹೆಚ್ಚಿಸಿದ್ದಕ್ಕೆ ಗ್ರಾಹಕರು ಪ್ರಶ್ನೆ ಎತ್ತಿದ್ದರು. ಈ ಕುರಿತಂತೆ ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಮೊಸರಿನ ದರದಲ್ಲಿ 2 ರೂಪಾಯಿ ಕಡಿತ ಮಾಡುವುದಾಗಿ ತಿಳಿಸಿತ್ತು.

ಡಿ.ಕೆ. ಸುರೇಶ್ ಸುದ್ದಿಗೋಷ್ಠಿ ಮುಂದೂಡಿಕೆ: 
ಈ ಎಲ್ಲಾ ಬೆಳವಣಿಗೆಗಳ ನಡುವೆ ಹಾಲಿನ ದರ ಪರಿಷ್ಕರಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಾಹಿತಿ ನೀಡಲು ಇಂದು (ನ. 4) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಬಮೂಲ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್.ಟಿ. ಸುರೇಶ್ ಸೇರಿದಂತೆ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಪತ್ರಿಕಾಗೋಷ್ಠಿಯನ್ನು ಮುಂದೂಡಲಾಗಿದೆ ಎಂದು ಬಮೂಲ್ ಪ್ರಕಟಣೆ ತಿಳಿಸಿದೆ. ಮುಂದಿನ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದೂ ಸ್ಪಷ್ಟಪಡಿಸಲಾಗಿದೆ. ಈ ಬದಲಾವಣೆಯಿಂದ ವಿಷಾದ ವ್ಯಕ್ತಪಡಿಸಿರುವ ಬಮೂಲ್, ಮಾಧ್ಯಮ ಪ್ರತಿನಿಧಿಗಳ ಸಹಕಾರ ಕೋರಿದೆ.

ಒಟ್ಟಿನಲ್ಲಿ ನಂದಿನಿ ಬಳಿಕ ಖಾಸಗಿ ಡೈರಿಗಳೂ ಹಾಲು ಮತ್ತು ಮೊಸರಿನ ದರ ಹೆಚ್ಚಿಸಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಹಾಲಿನ ದರ ಏರಿಕೆ ಮತ್ತಷ್ಟು ಹೊರೆಯಾಗಿದೆ. ಮುಂದಿನ ದಿನಗಳಲ್ಲಿ ಹಾಲು ಮತ್ತು ಮೊಸರಿನ ದರದ ಕುರಿತು ಕೆಎಂಎಫ್ ಹಾಗೂ ಖಾಸಗಿ ಡೈರಿಗಳು ಯಾವ ನಿರ್ಧಾರ ಕೈಗೊಳ್ಳಲಿವೆ ಎಂಬುದನ್ನು ಕಾದು ನೋಡಬೇಕಿದೆ.
 

Add Zee News as a Preferred Source
TAGS:
Price Hike
Kannada News
D K Shivakumar