• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /6ನೇ ದಿನಕ್ಕೆ ಕಾಲಿಟ್ಟ ಆಶಾ ಹೋರಾಟ.. ನಟಿ ರಮ್ಯಾ ಬೆಂಬಲ, ಬೇಡಿಕೆ ಈಡೇರುವವರೆಗೂ ಧರಣಿ ನಿಲ್ಲಲ್ಲ!

6ನೇ ದಿನಕ್ಕೆ ಕಾಲಿಟ್ಟ ಆಶಾ ಹೋರಾಟ.. ನಟಿ ರಮ್ಯಾ ಬೆಂಬಲ, ಬೇಡಿಕೆ ಈಡೇರುವವರೆಗೂ ಧರಣಿ ನಿಲ್ಲಲ್ಲ!

Ashas protest : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕಾಗಿ ನಡೆಸುತ್ತಿರುವ ಹೋರಾಟ ಇಂದು ಆರನೆ ದಿನಕ್ಕೆ ಕಾಲಿಟ್ಟಿದೆ.

Written ByRamya. R. Gowda
Published: Nov 22, 2026, 10:47 IST|Updated: Nov 22, 2026, 11:00 IST
joinshare
6ನೇ ದಿನಕ್ಕೆ ಕಾಲಿಟ್ಟ ಆಶಾ ಹೋರಾಟ.. ನಟಿ ರಮ್ಯಾ ಬೆಂಬಲ, ಬೇಡಿಕೆ ಈಡೇರುವವರೆಗೂ ಧರಣಿ ನಿಲ್ಲಲ್ಲ!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಗೌರವಧನ ಹೆಚ್ಚಳದ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ ಗೌರವಧನವನ್ನು ₹15,000ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆ ಕೈಬಿಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸಚಿವ ಸಂಪುಟದಲ್ಲಿ ಈ ವಿಚಾರವಾಗಿ ಚರ್ಚಿಸಿ ಸೂಕ್ತ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿಗಳ ಮನವಿಗೂ ಕಾರ್ಯಕರ್ತೆಯರು ಮಣಿದಿಲ್ಲ. ಕಳೆದ ಬಾರಿ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಆಶ್ವಾಸನೆಗಳಿಗೆ ಒಪ್ಪುವುದಿಲ್ಲ ಎಂಬುದು ಕಾರ್ಯಕರ್ತೆಯರ ಸ್ಪಷ್ಟ ನಿಲುವಾಗಿದೆ. ಗೌರವಧನ ಹೆಚ್ಚಳದ ಕುರಿತು ಅಧಿಕೃತ ಆದೇಶ ಪತ್ರ ಕೈ ಸೇರುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡೆಸಿದ ಸಂಧಾನ ಮಾತುಕತೆಯೂ ಫಲ ನೀಡಿಲ್ಲ. ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟಿ ರಮ್ಯಾ ಕೂಡ ಬೆಂಬಲ ಸೂಚಿಸಿದ್ದಾರೆ. ಕೇವಲ ₹5,000 ಗೌರವಧನದಲ್ಲಿ ಒಂದು ಕುಟುಂಬವನ್ನು ಹೇಗೆ ನಿರ್ವಹಿಸಲು ಸಾಧ್ಯ? ಎಂದು ಪ್ರಶ್ನಿಸಿರುವ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಶೀಘ್ರವೇ ಈಡೇರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರ 10 ಪ್ರಮುಖ ಬೇಡಿಕೆಗಳು
1. ತಿಂಗಳಿಗೆ ₹15,000 ಗೌರವಧನ: ಪ್ರತಿ ತಿಂಗಳು ಕನಿಷ್ಠ ₹15 ಸಾವಿರ ನಿಗದಿತ ಗೌರವಧನ ನೀಡಬೇಕು.

2. ಮೊಬೈಲ್ ಫೋನ್ ಸೌಲಭ್ಯ: ಆ್ಯಪ್ ಆಧಾರಿತ ಕೆಲಸಕ್ಕೆ ಉತ್ತಮ ಗುಣಮಟ್ಟದ ಮೊಬೈಲ್ ಹಾಗೂ ರೀಚಾರ್ಜ್ ಭತ್ಯೆ ನೀಡಬೇಕು.

3. 6 ತಿಂಗಳ ಹೆರಿಗೆ ರಜೆ: ಆರು ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು.

4. ಬಾಕಿ ಹಣ ಬಿಡುಗಡೆ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರಬೇಕಿರುವ ಬಾಕಿ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.

5. ಆಶಾ ಫೆಸಿಲಿಟೇಟರ್‌ಗಳ ಮರುನೇಮಕ: ಫೆಬ್ರವರಿ 25, 2025ರಿಂದ ಕೆಲಸ ಕಳೆದುಕೊಂಡಿರುವ ಫೆಸಿಲಿಟೇಟರ್‌ಗಳನ್ನು ಮತ್ತೆ ನೇಮಕ ಮಾಡಬೇಕು.

6. ಬಾಕಿ ₹1,500 ಪ್ರೋತ್ಸಾಹಧನ: 2024-25ನೇ ಸಾಲಿನ ಹೆಚ್ಚುವರಿ ಮಾಸಿಕ ₹1,500 ಪ್ರೋತ್ಸಾಹಧನದ ಬಾಕಿ ಹಣ ಪಾವತಿಸಬೇಕು.

7. NIOS ತರಬೇತಿ ಭತ್ಯೆ: ಪ್ರತಿ NIOS ತರಬೇತಿ ಕಾರ್ಯಕ್ರಮ ಪೂರ್ಣಗೊಳಿಸಿದವರಿಗೆ ₹5,000 ವಿಶೇಷ ಪ್ರೋತ್ಸಾಹಧನ ನೀಡಬೇಕು.

8. ಅನಾರೋಗ್ಯದ ಸಂದರ್ಭದಲ್ಲಿ ನೆರವು: ಗಂಭೀರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಮೂರು ತಿಂಗಳ ಗೌರವಧನ ಮತ್ತು ಪ್ರೋತ್ಸಾಹಧನ ನೀಡಬೇಕು.

9. ನಿವೃತ್ತಿ ಸೌಲಭ್ಯ: ನಿವೃತ್ತಿಯ ಸಂದರ್ಭದಲ್ಲಿ ₹5 ಲಕ್ಷ ಆರ್ಥಿಕ ನೆರವು ನೀಡಬೇಕು.

10. ಅನಗತ್ಯ ಕೆಲಸಗಳಿಂದ ಮುಕ್ತಿ: ಆರೋಗ್ಯ ಇಲಾಖೆಗೆ ಸಂಬಂಧಿಸದ ಇತರೆ ಕೆಲಸಗಳನ್ನು ಆಶಾ ಕಾರ್ಯಕರ್ತೆಯರಿಗೆ ವಹಿಸಬಾರದು.
 

ಮುಖ್ಯ ಬೇಡಿಕೆಯೇ  ತಿಂಗಳಿಗೆ ₹15,000 ನಿಗದಿತ ಗೌರವಧನ ನೀಡಬೇಕು ಎಂಬುದು ಆಶಾ ಕಾರ್ಯಕರ್ತೆಯರ ಪ್ರಮುಖ ಆಗ್ರಹವಾಗಿದೆ. ಒಟ್ಟಿನಲ್ಲಿ, ಆರನೇ ದಿನವೂ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ ಮುಂದುವರಿದಿದ್ದು, ಸರ್ಕಾರದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ.

 

Add Zee News as a Preferred Source
TAGS:
Kannada News