• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಪ್ರಯಾಣಿಕರೇ ಗಮನಿಸಿ! ವಿಶಾಖಪಟ್ಟಣ - ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಪ್ರಯಾಣಿಕರೇ ಗಮನಿಸಿ! ವಿಶಾಖಪಟ್ಟಣ - ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ದಸರಾ, ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ರೈಲ್ವೆ ಇಲಾಖೆ ವಿಶಾಖಪಟ್ಟಣ ಹಾಗೂ ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ.

Written ByYashaswini V
Published: Sep 26, 2026, 07:41 AM IST|Updated: Sep 26, 2026, 07:43 AM IST
joinshare
ಪ್ರಯಾಣಿಕರೇ ಗಮನಿಸಿ! ವಿಶಾಖಪಟ್ಟಣ - ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ನವರಾತ್ರಿ, ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸೌತ್‌ ಕೋಸ್ಟ್ ರೈಲ್ವೆಯು ನೆರೆಯ ಆಂಧ್ರಪ್ರದೇಶದ ಅತಿದೊಡ್ಡ ಕರಾವಳಿ ನಗರ ಹಾಗೂ ಪ್ರಮುಖ ಪ್ರವಾಸಿ ತಾಣವಾಗಿರುವ ವಿಶಾಖಪಟ್ಟಣ ಮತ್ತು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲುಗಳನ್ನು ಘೋಷಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರೈಲ್ವೆ ಇಲಾಖೆ, ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ವಿಶಾಖಪಟ್ಟಣ ಹಾಗೂ ಬೆಂಗಳೂರು ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲುಗಳನ್ನು ಸಂಚರಿಸಲು ತೀರ್ಮಾನಿಸಲಾಗಿದೆ. ಈ ವಿಶೇಷ ರೈಲುಗಳು ಪ್ರತಿ ದಿಕ್ಕಿನಲ್ಲಿಯೂ ತಲಾ 8 ಬಾರಿ ಸಂಚರಿಸಲಿವೆ ಎಂದು ತಿಳಿಸಿದೆ.

ವಿಶಾಖಪಟ್ಟಣ–SMVT ಬೆಂಗಳೂರು ನಡುವೆ ಯಾವಾಗಿನಿಂದ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚರಿಸಲಿವೆ?
ರೈಲು ಸಂಖ್ಯೆ 08583 ವಿಶಾಖಪಟ್ಟಣ–SMVT ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು, 06.10.2026 ರಿಂದ 24.11.2026 ರವರೆಗೆ ಪ್ರತಿ ಮಂಗಳವಾರ ಸಂಜೆ 19:00 ಗಂಟೆಗೆ ವಿಶಾಖಪಟ್ಟಣದಿಂದ ಹೊರಟು, ಮರುದಿನ (ಬುಧವಾರ) ಮಧ್ಯಾಹ್ನ 12:45 ಗಂಟೆಗೆ SMVT ಬೆಂಗಳೂರನ್ನು ತಲುಪಲಿದೆ.

SMVT ಬೆಂಗಳೂರು- ವಿಶಾಖಪಟ್ಟಣ ನಡುವಿನ ರೈಲು ಸಂಚಾರ:
ಮರುಮಾರ್ಗದಲ್ಲಿ, ರೈಲು ಸಂಖ್ಯೆ 08584 SMVT ಬೆಂಗಳೂರು–ವಿಶಾಖಪಟ್ಟಣ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು, 07.10.2026 ರಿಂದ 25.11.2026 ರವರೆಗೆ ಪ್ರತಿ ಬುಧವಾರ ಮಧ್ಯಾಹ್ನ 15:50 ಗಂಟೆಗೆ SMVT ಬೆಂಗಳೂರಿನಿಂದ ಹೊರಟು, ಮರುದಿನ (ಗುರುವಾರ) ಮಧ್ಯಾಹ್ನ 13:30 ಗಂಟೆಗೆ ವಿಶಾಖಪಟ್ಟಣವನ್ನು ತಲುಪಲಿದೆ.

SMVT ಬೆಂಗಳೂರು- ವಿಶಾಖಪಟ್ಟಣ ನಡುವಿನ ರೈಲುಗಳು ಯಾವ ಮಾರ್ಗದಲ್ಲಿ ಸಂಚರಿಸಲಿವೆ?
ಈ ವಿಶೇಷ ರೈಲು ಮಾರ್ಗಮಧ್ಯೆ ಎರಡೂ ದಿಕ್ಕುಗಳಲ್ಲಿ ದುವ್ವಾಡ, ಅನಕಾಪಲ್ಲಿ, ಸಮಲ್ಕೋಟ್ ಜಂಕ್ಷನ್, ರಾಜಮಂಡ್ರಿ, ಏಲೂರು, ವಿಜಯವಾಡ ಜಂಕ್ಷನ್, ಒಂಗೋಲು, ನೆಲ್ಲೂರು, ಗೂಡೂರು ಜಂಕ್ಷನ್, ರೇಣಿಗುಂಟ ಜಂಕ್ಷನ್, ಕಾಟ್ಪಾಡಿ ಜಂಕ್ಷನ್, ಜೋಲಾರಪೇಟೆ ಜಂಕ್ಷನ್, ಬಂಗಾರಪೇಟೆ ಜಂಕ್ಷನ್ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು ಒಟ್ಟು 19 ಬೋಗಿಗಳನ್ನು ಒಳಗೊಂಡಿರುತ್ತದೆ: ಇದರಲ್ಲಿ 2 ಎಸಿ 2-ಟೈರ್ ಬೋಗಿಗಳು, 4 ಎಸಿ 3-ಟೈರ್ ಬೋಗಿಗಳು, 7 ಸ್ಲೀపర్ ಕ್ಲಾಸ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆಯ (General Second Class) ಬೋಗಿಗಳು ಹಾಗೂ 1 ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್ (SLR) ಮತ್ತು ದಿವ್ಯಾಂಗ ಸ್ನೇಹಿ ವಿಭಾಗವನ್ನು ಹೊಂದಿರುವ 1 ದ್ವಿತೀಯ ದರ್ಜೆ-ಕಮ್-ಲಗೇಜ್ ಮತ್ತು ಬ್ರೇಕ್ ವ್ಯಾನ್ ಸೇರಿವೆ.
 

Add Zee News as a Preferred Source
TAGS:
Indian Railways
Travel