• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸಂವಿಧಾನ ಉಳಿವಿಗಾಗಿ ಈಸೂರಿನಿಂದ ಜನತಾ ಜೋಡೋ’ ಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ

ಸಂವಿಧಾನ ಉಳಿವಿಗಾಗಿ ಈಸೂರಿನಿಂದ ಜನತಾ ಜೋಡೋ’ ಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ

ಈಸೂರಿನ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

Reported ByManjunath NaragundEdited ByManjunath Naragund
Published: Sep 30, 2026, 01:23 PM IST|Updated: Sep 30, 2026, 01:35 PM IST
joinshare
ಸಂವಿಧಾನ ಉಳಿವಿಗಾಗಿ ಈಸೂರಿನಿಂದ ಜನತಾ ಜೋಡೋ’ ಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ
Image Credit: Janata Jodo

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ: ದೇಶದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲೇ ‘ಮೊದಲು ಸ್ವತಂತ್ರಗೊಂಡ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಐತಿಹಾಸಿಕ ಈಸೂರು ಮಣ್ಣಿನಿಂದ ಕಾಂಗ್ರೆಸ್ ನಾಯಕರ ‘ಜನತಾ ಜೋಡೋ’ ಯಾತ್ರೆಗೆ ಚಾಲನೆ ಸಿಕ್ಕಿದೆ. ರಾಹುಲ್ ಗಾಂಧಿಯವರ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕಕ್ಕೆ ಪಾದಾರ್ಪಣೆ ಮಾಡಿ ವರ್ಷ ಪೂರೈಸಿದ ಸ್ಮರಣಾರ್ಥ, ರಾಜ್ಯಾದ್ಯಂತ ಈ ಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಈಸೂರಿನ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಈಸೂರಿನಿಂದಲೇ ಯಾತ್ರೆ ಏಕೆ?

"ಸ್ವಾತಂತ್ರ್ಯ ಸಂಗ್ರಾಮದ ವೇಳೆ 'ನಾವು ಬ್ರಿಟಿಷರಿಗೆ ತೆರಿಗೆ ಕಟ್ಟಲ್ಲ' ಎಂದು ಧೀಮಂತವಾಗಿ ಘೋಷಿಸಿ, ಬ್ರಿಟಿಷ್ ಆಡಳಿತಕ್ಕೆ ಸವಾಲೆಸೆದು ಗಲ್ಲಿಗೇರಿದ ಐವರು ಅಮರ ತಾಯ್ನಾಡಿನ ವೀರರ ಪವಿತ್ರ ಭೂಮಿ ಈಸೂರು. ಇಂತಹ ಐತಿಹಾಸಿಕ ಜಾಗದಿಂದಲೇ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿವಿಗಾಗಿ ಜಾಗೃತಿ ಮೂಡಿಸುವ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಹಿನ್ನಡೆ ಅನುಭವಿಸಿರುವ ರಾಜ್ಯದ 69 ಕ್ಷೇತ್ರಗಳಲ್ಲಿ ಈ ಪಾದಯಾತ್ರೆ ಸಾಗಲಿದ್ದು, ಜನರನ್ನು ಜಾಗೃತಗೊಳಿಸುವುದು ನಮ್ಮ ಮುಖ್ಯ ಉದ್ದೇಶ," ಎಂದರು.

 

ಎಸ್‍ಐಆರ್ ಹೆಸರಿನಲ್ಲಿ ಸುಮಾರು ಒಂದೂವರೆ ಕೋಟಿ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವದ ಬುಡಕ್ಕೇ ಕೊಳ್ಳಿ ಇಡುವ ಕೆಲಸವಾಗುತ್ತಿದೆ. ಜನರು ಯಾವುದೇ ಕಾರಣಕ್ಕೂ ಅಂಧಭಕ್ತರಾಗಬಾರದು. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಹಾಗೂ ಜನರಿಗೆ ತಮ್ಮ ಹಕ್ಕುಗಳ ಅರಿವು ಮೂಡಿಸಲು ಈ 'ಜನತಾ ಜೋಡೋ' ಸಹಕಾರಿಯಾಗಲಿದೆ ಎಂದರು.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಗಾಲದ ಕುರಿತು ಮಾತನಾಡಿದ ಅವರು, "ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರದಿಂದ 18,000 ಕೋಟಿ ರೂಪಾಯಿ ಪರಿಹಾರ ಧನ ಕೇಳಿದ್ದೇವೆ. ಕೇಂದ್ರ ಸರ್ಕಾರವೇನೂ ಪಾಕಿಸ್ತಾನದ ಸರ್ಕಾರವಲ್ಲ, ಅದು ನಮ್ಮದೇ ದೇಶದ ಸರ್ಕಾರ. ಆದರೆ, ಜನರ ಕಷ್ಟ ಆಲಿಸಲು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪರಿಹಾರ ತರಲು ರಾಜ್ಯದ ವಿರೋಧ ಪಕ್ಷದ ನಾಯಕರಿಗೆ ಇಷ್ಟವಿಲ್ಲ. 'ಮನ್ ಕಿ ಬಾತ್'ನಲ್ಲಿ ಉದ್ದುದ್ದ ಮಾತನಾಡುವ ಪ್ರಧಾನಿ ಮೋದಿಯವರು ಎಂದಾದರೂ ರೈತರ ಸಂಕಷ್ಟಗಳ ಬಗ್ಗೆ ಮಾತನಾಡಿದ್ದಾರಾ?" ಎಂದು ಖಾರವಾಗಿ ಪ್ರಶ್ನಿಸಿದರು.

ಇದೇ ವೇಳೆ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, "ಸುಳ್ಳಿನ ಸರದಾರರಂತೆ ಮಾತನಾಡುವ ಕುಮಾರಸ್ವಾಮಿಯವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪರಿಹಾರ ಕೊಡಿಸುವಂತೆ ಒತ್ತಾಯಿಸಲಿ," ಎಂದು ಸವಾಲೆಸೆದರು.

ಬಿಜೆಪಿ ಶಾಸಕ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, "ವಿಜಯೇಂದ್ರ ಅವರು ಭ್ರಷ್ಟಾಚಾರಕ್ಕೆ ಇಡೀ ಭಾರತಕ್ಕೇ ಮಾದರಿಯಾಗಿದ್ದಾರೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ದೊಡ್ಡ ವೀರರು, ಶೂರರಂತೆ ಮಾತನಾಡುತ್ತಾರೆ. ಆದರೆ, ಪಕ್ಷದ ಅಧ್ಯಕ್ಷರಾಗಿ ನಿಯಮಾವಳಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ನಾವೂ ರಾಜಕೀಯದಲ್ಲಿ ಪಿಎಚ್‌ಡಿ ಮಾಡಿದ್ದೇವೆ, ನಾವು ಮನಸ್ಸು ಮಾಡಿದರೆ ಬಿಜೆಪಿಯವರಿಗೆ ಒಂದು ಬಾವುಟ ಕಟ್ಟಲೂ ಬಿಡುವುದಿಲ್ಲ," ಎಂದು ಎಚ್ಚರಿಸಿದರು.

ಇಡೀ ಯಾತ್ರೆಯು ರಾಜ್ಯದ ಹಲವು ಭಾಗಗಳಲ್ಲಿ ಸಂಚರಿಸಲಿದ್ದು, ಸ್ಥಳೀಯ ಬರ ಸ್ಥಿತಿ ಅಧ್ಯಯನ ಹಾಗೂ ಜನಜಾಗೃತಿಗೆ ಒತ್ತು ನೀಡಲಿದೆ ಎಂದು ಅವರು ಮಾಹಿತಿ ನೀಡಿದರು.
 

Add Zee News as a Preferred Source
TAGS:
Kannada News