SOCIAL MEDIA

Newsletter

PARTNER SITES
Select Language Select State

ಬನಹಟ್ಟಿ ಕಾಡಸಿದ್ದೇಶ್ವರ ಜಾತ್ರೆ ಸಂಭ್ರಮ: ಲಕ್ಷಾಂತರ ರೂ. ಮೌಲ್ಯದ ಪಟಾಕಿ ಸಿಡಿಸಿ ಹರಕೆ ತೀರಿಸಿದ ಭಕ್ತಸಾಗರ!

ಬನಹಟ್ಟಿಯ ಕಾಡಸಿದ್ದೇಶ್ವರ ಜಾತ್ರೆಗೆ 'ಪಟಾಕಿ ಜಾತ್ರೆ' ಎಂದೇ ಹೆಸರು. ಇಲ್ಲಿ ತಮ್ಮ ಮನದ ಆಸೆ, ತೊಂದರೆಗಳು ಈಡೇರಿದರೆ ಇಂತಿಷ್ಟು ಹಣದ ಪಟಾಕಿ ಸಿಡಿಸುತ್ತೇವೆ ಎಂದು ಭಕ್ತರು ಹರಕೆ ಹೊರುತ್ತಾರೆ.

Reported By Manjunath Naragund Written By Manjunath Naragund
Published: Sep 30, 2026, 12:17 PM IST | Updated: Sep 30, 2026, 12:31 PM IST
Image Credit: Banahatti
Join

ಬನಹಟ್ಟಿ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸುವ ಮೂಲಕ ತಮ್ಮ ಹರಕೆ ತೀರಿಸಿದರು.

ಬನಹಟ್ಟಿಯ ಕಾಡಸಿದ್ದೇಶ್ವರ ಜಾತ್ರೆಗೆ 'ಪಟಾಕಿ ಜಾತ್ರೆ' ಎಂದೇ ಹೆಸರು. ಇಲ್ಲಿ ತಮ್ಮ ಮನದ ಆಸೆ, ತೊಂದರೆಗಳು ಈಡೇರಿದರೆ ಇಂತಿಷ್ಟು ಹಣದ ಪಟಾಕಿ ಸಿಡಿಸುತ್ತೇವೆ ಎಂದು ಭಕ್ತರು ಹರಕೆ ಹೊರುತ್ತಾರೆ. ಹರಕೆ ತೀರಿದ ನಂತರ ಶ್ರೀ ಕಾಡಸಿದ್ದೇಶ್ವರನಿಗೆ ಕೃತಜ್ಞತೆ ಸಲ್ಲಿಸಲು ತಮ್ಮ ಶಕ್ತಿಯಾನುಸಾರ ನೂರು, ಸಾವಿರದಿಂದ ಹಿಡಿದು ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ಸಿಡಿಸುವುದು ಇಲ್ಲಿನ ವಿಶೇಷ. ಪಟಾಕಿ ಸಿಡಿಸುವುದರಿಂದ ಸಕಲ ಸಂಕಷ್ಟಗಳೂ ದೂರವಾಗುತ್ತವೆ ಎಂಬ ಬಲವಾದ ನಂಬಿಕೆ ಭಕ್ತರಲ್ಲಿದೆ.

ಮುಂಜಾನೆಯಿಂದಲೇ ಪೂಜಾ ಕೈಂಕರ್ಯ:

ಜಾತ್ರೆಯ ಅಂಗವಾಗಿ ಮುಂಜಾನೆಯಿಂದಲೇ ಕಾಡಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ಜರುಗಿದವು. ಸಾವಿರಾರು ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ, ದೇವರ ದರ್ಶನ ಪಡೆದರು. ಬಾಗಲಕೋಟೆ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ ರಾಜ್ಯ ಸೇರಿದಂತೆ ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತಸಾಗರ ದೇವಾಲಯದ ಆವರಣದಲ್ಲಿ ನೆರೆದಿತ್ತು.

ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಎಂಬ ಅಪಸ್ವರಗಳು ಕೇಳಿಬಂದರೂ, ಇದನ್ನು ಶತಮಾನಗಳ ಇತಿಹಾಸವಿರುವ ಸಂಪ್ರದಾಯ ಎಂದು ಪ್ರತಿಪಾದಿಸುವ ಭಕ್ತರು, ತಮ್ಮ ಹರಕೆ ಕಾರ್ಯವನ್ನು ಯಥಾರೀತಿ ನೆರವೇರಿಸಿದರು. ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳ ಸದ್ದಿನೊಂದಿಗೆ ಬನಹಟ್ಟಿಯಲ್ಲಿ ಜಾತ್ರೆಯ ಸಂಭ್ರಮ ಮುಗಿಲು ಮುಟ್ಟಿದೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES