• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಾಳೆಯಿಂದ 3 ದಿನ ಬ್ಯಾಂಕ್ ಸೇವೆ ಬಂದ್ : ರಾಜ್ಯಾದ್ಯಂತ ನೌಕರರ ಪ್ರತಿಭಟನೆ

ನಾಳೆಯಿಂದ 3 ದಿನ ಬ್ಯಾಂಕ್ ಸೇವೆ ಬಂದ್ : ರಾಜ್ಯಾದ್ಯಂತ ನೌಕರರ ಪ್ರತಿಭಟನೆ

ವಾರದಲ್ಲಿ 5 ದಿನಗಳ ಕೆಲಸದ ಅವಧಿ ಜಾರಿ ಸೇರಿದಂತೆ ವಿವಿಧ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್' (UFBU) ನಾಳೆಯಿಂದ ಮೂರು ದಿನಗಳ ಕಾಲ ದೇಶವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ..

Reported ByKrishna NKEdited ByKrishna NK
Published: Sep 27, 2026, 03:45 PM IST|Updated: Sep 27, 2026, 03:47 PM IST
joinshare
ನಾಳೆಯಿಂದ 3 ದಿನ ಬ್ಯಾಂಕ್ ಸೇವೆ ಬಂದ್ : ರಾಜ್ಯಾದ್ಯಂತ ನೌಕರರ ಪ್ರತಿಭಟನೆ
Image Credit: Bank Stike News

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Bank Strike : ರಾಜ್ಯದಾದ್ಯಂತ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ 3 ದಿನ ಬ್ಯಾಂಕ್ಸೇವೆಯನ್ನು ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.. ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದು, ಬ್ಯಾಂಕ್ ಸೇವೆ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.. ಇವತ್ತು ಕೆಲ ಬ್ಯಾಂಕ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದು, ಏನಿದು ಮುಷ್ಕರ, ಬೇಡಿಕೆಗಳೇನು, ಯಾವ ಸೇವೆ ಮೇಲೆ ಪರಿಣಾಮ ಅನ್ನೋ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ ನೋಡಿ..

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನಾಳೆಯಿಂದ ಮೂರು ದಿನಗಳ ಕಾಲ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.. ಸೆಪ್ಟೆಂಬರ್ 28, 29 ಮತ್ತು 30ರವರೆಗೆ ಮೂರು ದಿನ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದು, ದೇಶದಾದ್ಯಂತ ಬ್ಯಾಂಕಿಂಗ್ ಸೇವೆ ಸಂಪೂರ್ಣ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.. 2024ರಲ್ಲೇ ಐದು ದಿನಗಳ ಕೆಲಸದ ವಾರ ಜಾರಿಗೆ ತರುವಂತೆ ಮನವಿ ನೀಡಲಾಗಿತ್ತು.. ಮನವಿ ನೀಡಿ ಎರಡು ವರ್ಷ ಕಳೆದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.. ಹೀಗಾಗಿ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರದ ಅಸ್ತ್ರ ಪ್ರಯೋಗಿಸಿದ್ದಾರೆ..

ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆ ಐದು ದಿನಗಳ ಕೆಲಸದ ವಾರ ಜಾರಿ.. ಪ್ರಸ್ತುತ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಮಾತ್ರ ರಜೆ ಇದೆ.. ಎಲ್ಲಾ ಶನಿವಾರ ರಜೆ ನೀಡಬೇಕು, ವಾರದಲ್ಲಿ ಐದು ದಿನ ಮಾತ್ರ ಕೆಲಸ ಇರಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ.. ಜೊತೆಗೆ ಕಾರ್ಯಕ್ಷಮತೆ ಪ್ರೋತ್ಸಾಹ ಯೋಜನೆ ಅಂದ್ರೆ ಪರ್ಫಾರ್ಮೆನ್ಸ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್ ಜಾರಿಗೆ ತರಬೇಕು, ನೇಮಕಾತಿ ಹೆಚ್ಚಿಸಬೇಕು, ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ನೌಕರರು ಪಟ್ಟು ಹಿಡಿದಿದ್ದಾರೆ..

ಇನ್ನು ಮುಷ್ಕರದ ಹಿನ್ನೆಲೆಯಲ್ಲಿ ಬಹುತೇಕ ಕಡೆ ಭಾನುವಾರವೂ ಬ್ಯಾಂಕ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಭಾನುವಾರವೂ ಕೆಲಸ ಮಾಡಿದ್ದಾರೆ.. ರಜೆ ದಿನವೂ ಬ್ಯಾಂಕ್ ಸಿಬ್ಬಂದಿ ಕರ್ತವ್ಯ ನಿರ್ವಹಣೆ ಮಾಡಿದ್ದು, ಬಾಕಿ ಇರುವ ಕೆಲಸಗಳನ್ನು ಮುಗಿಸಿದ್ದಾರೆ.. ಮೂರು ದಿನ ಬ್ಯಾಂಕ್ ಬಂದ್ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆ ಆಗಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಭಾನುವಾರವೇ ಕೆಲಸ ಮಾಡಿದ್ದಾರೆ..

ಈ ಮೂರು ದಿನಗಳ ಮುಷ್ಕರದಿಂದ ಗ್ರಾಹಕರಿಗೆ ಭಾರಿ ತೊಂದರೆ ಆಗಲಿದೆ.. ಬ್ಯಾಂಕ್‌ಗಳಲ್ಲಿ ನಗದು ವಹಿವಾಟು, ಚೆಕ್ ಕ್ಲಿಯರೆನ್ಸ್, ಸಾಲದ ಪ್ರಕ್ರಿಯೆ, ಡಿಡಿ ಸೇರಿದಂತೆ ಎಲ್ಲಾ ಸೇವೆಗಳು ಸ್ಥಗಿತವಾಗಲಿವೆ.. ಎಟಿಎಂಗಳಲ್ಲಿ ಹಣ ಖಾಲಿಯಾಗುವ ಸಾಧ್ಯತೆ ಇದೆ.. ಆನ್‌ಲೈನ್ ವಹಿವಾಟು ಎಂದಿನಂತೆ ಇದ್ದರೂ, ಬ್ಯಾಂಕ್ ಶಾಖೆಗಳಲ್ಲಿ ಕೆಲಸ ಆಗಲ್ಲ.. ವ್ಯಾಪಾರಸ್ಥರು, ಸಣ್ಣ ಕೈಗಾರಿಕೆಗಳು, ರೈತರಿಗೆ ಇದರಿಂದ ಹೆಚ್ಚು ತೊಂದರೆ ಆಗಲಿದೆ..

ಒಟ್ಟಿನಲ್ಲಿ ಎರಡು ವರ್ಷದಿಂದ ಬೇಡಿಕೆ ಈಡೇರದೆ ಬೇಸತ್ತಿರುವ ಬ್ಯಾಂಕ್ ನೌಕರರು ಇದೀಗ ಮುಷ್ಕರಕ್ಕೆ ಇಳಿದಿದ್ದಾರೆ.. ಕೇಂದ್ರ ಸರ್ಕಾರದ ನಿರ್ಧಾರಕ್ಕಾಗಿ ಬ್ಯಾಂಕ್ ನೌಕರರು ಕಾದಾಟ ನಡೆಸುತ್ತಿದ್ದು, ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮತ್ತಷ್ಟು ಹೋರಾಟದ ಎಚ್ಚರಿಕೆ ನೀಡಿದ್ದಾರೆ.. 3 ದಿನಗಳ ಮುಷ್ಕರದ ಬಳಿಕವೂ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ.. ಸರ್ಕಾರ ಬೇಡಿಕೆ ಈಡೇರಿಸುತ್ತಾ, ಇಲ್ಲಾ ಗ್ರಾಹಕರ ಪರದಾಟ ಮುಂದುವರೆಯುತ್ತಾ ಕಾದು ನೋಡಬೇಕಿದೆ..

Add Zee News as a Preferred Source
TAGS:
Kannada News