ಬೀದಿಬದಿ ವ್ಯಾಪಾರಿಗಳಿಂದ ಸರ್ಕಾರಕ್ಕೆ ಬಿಗ್ ಚಾಲೆಂಜ್!... ಇಂದಿನಿಂದ ಪುಟ್ಪಾತ್ ಮೇಲೆ ವ್ಯಾಪಾರ ಮಾಡ್ತೇವೆ
street vendors protest: ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬೀದಿಬದಿ ವ್ಯಾಪಾರಿಗಳು ಸರ್ಕಾರಕ್ಕೆ ಮತ್ತೆ ಕಿಚ್ಚು ಹೊತ್ತಿಸಿದ್ದಾರೆ. ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಬೀದಿಬದಿ ವ್ಯಾಪಾರಿಗಳು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಇಂದಿನಿಂದಲೇ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತೇವೆ, ತಡೆಯುವ ತಾಕತ್ತಿದ್ದರೆ ತಡೆಯಲಿ ಅಂತ ಪಟ್ಟು ಹಿಡಿದಿದ್ದಾರೆ.
street vendors protest: ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬೀದಿಬದಿ ವ್ಯಾಪಾರಿಗಳು ಸರ್ಕಾರಕ್ಕೆ ಮತ್ತೆ ಕಿಚ್ಚು ಹೊತ್ತಿಸಿದ್ದಾರೆ. ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡದಂತೆಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಬೀದಿಬದಿ ವ್ಯಾಪಾರಿಗಳು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಇಂದಿನಿಂದಲೇ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತೇವೆ, ತಡೆಯುವ ತಾಕತ್ತಿದ್ದರೆ ತಡೆಯಲಿ ಅಂತ ಪಟ್ಟು ಹಿಡಿದಿದ್ದಾರೆ. ಇನ್ನು ವ್ಯಾಪಾರಿಗಳ ಬೆನ್ನಿಗೆ ಅಧ್ಯಕ್ಷ ರಂಗಸ್ವಾಮಿ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎಸ್. ಬಾಲನ್ ನಿಂತಿದ್ದಾರೆ. ಮಲ್ಲೇಶ್ವರಂನಲ್ಲಿ ಈಗ ಏನಾಗ್ತಿದೆ? ಅಧಿಕಾರಿಗಳ ಮುಂದಿನ ನಡೆ ಏನು? ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.
ಫುಟ್‌ಪಾತ್ ನಮ್ಮ ವ್ಯಾಪಾರದ ಜಾಗ.. ವ್ಯಾಪಾರ ಮಾಡಿಯೇ ಮಾಡ್ತೀವಿ.. ತಡೆಯುವ ತಾಕತ್ತಿದ್ದರೆ ಬಂದು ತಡೆಯಿರಿ.. ಹೀಗೆ ಸವಾಲು ಹಾಕುತ್ತಿರುವವರು ಮಲ್ಲೇಶ್ವರಂನ ಬೀದಿಬದಿ ವ್ಯಾಪಾರಿಗಳು. ಇಷ್ಟು ದಿನಗಳಿಂದ ನಡೆಯುತ್ತಿದ್ದ ಫುಟ್‌ಪಾತ್ ವ್ಯಾಪಾರದ ವಿವಾದ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಇಂದಿನಿಂದಲೇ ಫುಟ್‌ಪಾತ್ ಮೇಲೆ ಅಂಗಡಿಗಳನ್ನು ಹಾಕಿ ವ್ಯಾಪಾರ ನಡೆಸಲು ವ್ಯಾಪಾರಿಗಳು ಮುಂದಾಗಿದ್ದಾರೆ.
ಒಂದೆಡೆ ಸರ್ಕಾರ, ಜಿಬಿಎ ಅಧಿಕಾರಿಗಳು ಹಾಗೂ ಪೊಲೀಸರ ಕ್ರಮ.. ಮತ್ತೊಂದೆಡೆ ನಮ್ಮ ಹಕ್ಕಿಗಾಗಿ ಹೋರಾಟ ಅಂತ ಬೀದಿಗಿಳಿದಿರುವ ವ್ಯಾಪಾರಿಗಳು. ಕಾನೂನು ನಮಗೂ ಗೊತ್ತಿದೆ.. ನಾವು ವ್ಯಾಪಾರ ಮಾಡುತ್ತೇವೆ ಎಂದು ಪಟ್ಟು ಹಿಡಿದಿರುವ ವ್ಯಾಪಾರಸ್ಥರು, ಮಲ್ಲೇಶ್ವರಂ ಫುಟ್‌ಪಾತ್‌ಗಳಲ್ಲಿ ಅಂಗಡಿಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇನ್ನು ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಅಧ್ಯಕ್ಷ ರಂಗಸ್ವಾಮಿ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎಸ್. ಬಾಲನ್ ಸಾಥ್ ನೀಡಿದ್ದಾರೆ. ವ್ಯಾಪಾರಿಗಳು ತಮ್ಮ ಜೀವನೋಪಾಯಕ್ಕಾಗಿ ವ್ಯಾಪಾರ ನಡೆಸಲಿ, ಅವರ ಜೊತೆ ನಾವಿದ್ದೇವೆ ಎಂಬ ಬೆಂಬಲದ ಮಾತುಗಳನ್ನು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರೊಂದಿಗೆ ವಕೀಲ ಎಸ್. ಬಾಲನ್ ಮಾತಿನ ಚಕಮಕಿ ನಡೆಸಿದರೆಂಬ ವರದಿಯೂ ಇದೆ. ಈ ವೇಳೆ ಸ್ಥಳದಲ್ಲಿ ವ್ಯಾಪಾರಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿರುವ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸದ್ಯ ಮಲ್ಲೇಶ್ವರಂನಲ್ಲಿ ಬೀದಿಬದಿ ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಫುಟ್‌ಪಾತ್ ಮೇಲೆಯೇ ಅಂಗಡಿಗಳನ್ನು ಹಾಕಿ ವ್ಯಾಪಾರ ಆರಂಭಿಸಲು ಮುಂದಾಗಿದ್ದಾರೆ. ಮತ್ತೊಂದೆಡೆ, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಫುಟ್‌ಪಾತ್‌ಗಳನ್ನು ಮುಕ್ತವಾಗಿಡುವುದು ಅಧಿಕಾರಿಗಳ ಮುಂದಿರುವ ಸವಾಲಾಗಿದೆ. ಹೀಗಾಗಿ ವ್ಯಾಪಾರಿಗಳ ಹೋರಾಟಕ್ಕೆ ಜಿಬಿಎ ಅಧಿಕಾರಿಗಳು ಮತ್ತು ಪೊಲೀಸರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಫುಟ್‌ಪಾತ್ ನಮ್ಮ ವ್ಯಾಪಾರದ ಜಾಗ.. ವ್ಯಾಪಾರ ಮಾಡಿಯೇ ಮಾಡ್ತೀವಿ.. ತಡೆಯುವ ತಾಕತ್ತಿದ್ದರೆ ಬಂದು ತಡೆಯಿರಿ.. ಹೀಗೆ ಸವಾಲು ಹಾಕುತ್ತಿರುವವರು ಮಲ್ಲೇಶ್ವರಂನ ಬೀದಿಬದಿ ವ್ಯಾಪಾರಿಗಳು. ಇಷ್ಟು ದಿನಗಳಿಂದ ನಡೆಯುತ್ತಿದ್ದ ಫುಟ್‌ಪಾತ್ ವ್ಯಾಪಾರದ ವಿವಾದ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಇಂದಿನಿಂದಲೇ ಫುಟ್‌ಪಾತ್ ಮೇಲೆ ಅಂಗಡಿಗಳನ್ನು ಹಾಕಿ ವ್ಯಾಪಾರ ನಡೆಸಲು ವ್ಯಾಪಾರಿಗಳು ಮುಂದಾಗಿದ್ದಾರೆ.
ಒಟ್ಟಿನಲ್ಲಿ, ಮಲ್ಲೇಶ್ವರಂನಲ್ಲಿ ಬೀದಿಬದಿ ವ್ಯಾಪಾರಿಗಳ ಪಟ್ಟು ಸರ್ಕಾರ ಮತ್ತು ಅಧಿಕಾರಿಗಳಿಗೆ ಹೊಸ ಸವಾಲು ತಂದಿಟ್ಟಿದೆ. ವ್ಯಾಪಾರಿಗಳ ಜೀವನೋಪಾಯದ ಹಕ್ಕು ಮತ್ತು ಸಾರ್ವಜನಿಕರ ಸುಗಮ ಸಂಚಾರದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಈಗ ಆಡಳಿತದ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ. ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆದುಕೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕಿದೆ.