SOCIAL MEDIA

Newsletter

PARTNER SITES
Select Language Select State

ಒಂಟಿ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ದರೋಡೆ

ದುಷ್ಕರ್ಮಿಗಳು ವೃದ್ಧೆಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.

Written By Chetana Devarmani
Published: Oct 26, 2026, 02:52 PM IST | Updated: Oct 26, 2026, 03:02 PM IST
Join

ಬೆಂಗಳೂರು: ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ. ವೆಂಕಟಲಕ್ಷ್ಮಮ್ಮ (70) ಕೊಲೆಯಾದ ವೃದ್ಧೆ. ಶನಿವಾರ ಸಂಜೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳು ವೃದ್ಧೆಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಬೀರುವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ತೆಗೆದುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ವೆಂಕಟಲಕ್ಷ್ಮಮ್ಮ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ದುಷ್ಕರ್ಮಿಗಳು ಅವರ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹದ ತಲೆ ಮತ್ತು ಕತ್ತಿನ ಭಾಗದಲ್ಲಿ ಗಾಯಗಳು ಪತ್ತೆಯಾಗಿವೆ. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

ವೆಂಕಟಲಕ್ಷ್ಮಮ್ಮ ಅವರಿಗೆ ನಾಲ್ಕು ಮನೆಗಳಿದ್ದವು ಎನ್ನಲಾಗಿದೆ. ಅವುಗಳಲ್ಲಿ ಒಂದು ಮನೆಯಲ್ಲಿ ಅವರು ವಾಸಿಸುತ್ತಿದ್ದರು. ಇನ್ನೆರಡು ಮನೆಗಳು ಖಾಲಿ ಇದ್ದವು. ಮತ್ತೊಂದು ಮನೆಯನ್ನು ಯುವಕನೊಬ್ಬ ಬಾಡಿಗೆಗೆ ಪಡೆದುಕೊಂಡಿದ್ದ. ಸೌಂಡ್ ಸಿಸ್ಟಮ್‌ಗಳನ್ನು ಸಂಗ್ರಹಿಸಲು ಆ ಮನೆಯನ್ನು ಗೋದಾಮಿನಂತೆ ಬಳಸುತ್ತಿದ್ದ ಎಂದು ತಿಳಿದುಬಂದಿದೆ.

ವೃದ್ಧೆಯೊಂದಿಗೆ ಸಂಪರ್ಕದಲ್ಲಿದ್ದ ಬಾಡಿಗೆದಾರ ಯುವಕ ತಿಂಗಳಿಗೊಮ್ಮೆ ಬಾಡಿಗೆ ನೀಡುವುದರ ಜೊತೆಗೆ ಅವರಿಗೆ ಮಾತ್ರೆಗಳನ್ನು ತಂದುಕೊಡುತ್ತಿದ್ದ ಎನ್ನಲಾಗಿದೆ. ಸ್ಥಳೀಯರಿಂದ ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ಯುವಕ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾನೆ. ಬಳಿಕ ಆತ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಹಿಂದಿರುವವರನ್ನು ಪತ್ತೆಹಚ್ಚಲು ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದವರು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES