SOCIAL MEDIA

Newsletter

PARTNER SITES
Select Language Select State

ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇನ್ಮುಂದೆ ಕೇವಲ 30 ನಿಮಿಷದಲ್ಲೇ ಸಿಗಲಿದೆ ಮನೆ ನಕ್ಷೆ ಮಂಜೂರಾತಿ; 'ನಂಬಿಕೆ ನಕ್ಷೆ 2.0' ಜಾರಿ!

ಜನರಿಗೆ ಸರಳ, ವೇಗದ ಹಾಗೂ ಪಾರದರ್ಶಕ ಆಡಳಿತ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಲಾಗಿದೆ.

Reported By Manjunath Naragund Written By Manjunath Naragund
Published: Sep 20, 2026, 08:15 PM IST | Updated: Sep 20, 2026, 08:30 PM IST
Image Credit: File Photo
Join

ಬೆಂಗಳೂರು: ಬೆಂಗಳೂರು ನಾಗರೀಕರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್ ಕೊಟ್ಟಿದ್ದಾರೆ..ಕೇವಲ 30 ನಿಮಿಷಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಸಿಗುವ ನಂಬಿಕೆ ನಕ್ಷೆ 2.0 ಯೋಜನೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಪ್ರಯೋಗಿಕವಾಗಿ ಜಾರಿಗೆ ಮಾಡಿದ್ದಾರೆ..ಈ ಕುರಿತು ಇಲ್ಲಿದೆ ಫುಲ್ ಡಿಟೈಲ್ಸ್.

ಹೌದು..ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ನಂಬಿಕೆ ನಕ್ಷೆ 2.0’ ವ್ಯವಸ್ಥೆ ಪ್ರಾಯೋಗಿಕವಾಗಿ ಲೋಕಾರ್ಪಣೆಯಾಗಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 50x80 ಅಡಿ ವರೆಗಿನ ವಸತಿ ನಿವೇಶನಗಳಲ್ಲಿ ಗರಿಷ್ಠ 4 ವಸತಿ ಘಟಕಗಳವರೆಗೆ ಕಟ್ಟಡ ನಿರ್ಮಾಣಕ್ಕೆ ಸಂಪೂರ್ಣ ಸ್ವಯಂಚಾಲಿತ ಕಟ್ಟಡ ನಕ್ಷೆ ಮಂಜೂರಾತಿ ವ್ಯವಸ್ಥೆ ಜಾರಿ ಮಾಡಲಾಗಿದೆ ಕೆಬಿಜಿ ಮಾಹಿತಿ ನೀಡಿದ್ರು.

ಜನರಿಗೆ ಸರಳ, ವೇಗದ ಹಾಗೂ ಪಾರದರ್ಶಕ ಆಡಳಿತ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಲಾಗಿದೆ.ಈ ಹಿಂದೆ ಕಟ್ಟಡ ನಕ್ಷೆ ಮಂಜೂರಾತಿಗಾಗಿ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ನಂಬಿಕೆ ನಕ್ಷೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು.ಈ ವ್ಯವಸ್ಥೆಯ ಅನುಷ್ಠಾನದ ನಂತರವೂ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿ, ಸಾರ್ವಜನಿಕರಿಗೆ ವೇಗವಾಗಿ ಸೇವೆ ಒದಗಿಸುವ ಅಗತ್ಯವನ್ನು ಮನಗಂಡು, ‘ನಂಬಿಕೆ ನಕ್ಷೆ 2.0’ ವ್ಯವಸ್ಥೆಯನ್ನು ರೂಪಿಸಲಾಗಿದೆ.

4000 ಚದರ ಅಡಿ ಅಥವಾ 50x80 ಅಡಿವರೆಗಿನ ವಸತಿ ಕಟ್ಟಡಗಳ ಕಟ್ಟಡ ನಕ್ಷೆ ಮಂಜೂರಾತಿಯನ್ನು ಸಂಪೂರ್ಣವಾಗಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ.ಅರ್ಹತೆ ಹೊಂದಿರುವ ವಾಸ್ತುಶಿಲ್ಪಿ ಮೂಲಕ ಕಟ್ಟಡ ನಕ್ಷೆಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.ಸಲ್ಲಿಸಲಾದ ನಕ್ಷೆಯು ನಗರ ಯೋಜನಾ ನಿಯಮಗಳಿಗೆ ಅನುಗುಣವಾಗಿದ್ದಲ್ಲಿ, ಸ್ವಯಂಚಾಲಿತವಾಗಿ ಸುಮಾರು 30 ನಿಮಿಷಗಳೊಳಗೆ ಕಟ್ಟಡ ನಕ್ಷೆ ಮಂಜೂರಾತಿ ದೊರೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

‘ನಂಬಿಕೆ ನಕ್ಷೆ 2.0’ ವ್ಯವಸ್ಥೆಯಲ್ಲಿ ಸಾರ್ವಜನಿಕರು ಖಾತಾ ದಾಖಲೆ ಸೇರಿದಂತೆ ಹಲವು ದಾಖಲೆಗಳನ್ನು ಪ್ರತ್ಯೇಕವಾಗಿ ಅಪ್‌ಲೋಡ್ ಮಾಡುವ ಅಗತ್ಯವಿಲ್ಲ. ಇ-ಖಾತಾ ಸಂಖ್ಯೆಯನ್ನು ನಮೂದಿಸಿದ ಕೂಡಲೇ ಸಂಬಂಧಿತ ಆಸ್ತಿಯ ಮೂಲ ಮಾಲೀಕತ್ವದ ಮಾಹಿತಿಯನ್ನು ವ್ಯವಸ್ಥೆಯೇ ಸ್ವಯಂಚಾಲಿತವಾಗಿ ಪಡೆದುಕೊಳ್ಳಲಿದೆ.

ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್ ಹಾಗೂ ಸ್ವಯಂಚಾಲಿತಗೊಳಿಸುವ ಮೂಲಕ ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಡೆಯಲಾಗುತ್ತಿದೆ.ಸಾರ್ವಜನಿಕರ ಅಮಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚನೆ ಅಥವಾ ಶೋಷಣೆ ನಡೆಯದಂತೆ ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ವ್ಯವಸ್ಥೆಯನ್ನು ರೂಪಿಸುವುದು ಇದರ ಪ್ರಮುಖ ಉದ್ದೇಶ ಎಂದು ಕೆಬಿಜಿ ತಿಳಿಸಿದರು.

ಈ ಹಿಂದೆ ಕಟ್ಟಡ ನಕ್ಷೆ ಮಂಜೂರಾತಿಗೆ  2ರಿಂದ 3 ತಿಂಗಳವರೆಗೆ ಸಮಯ ಬೇಕಾಗುತ್ತಿತ್ತು.ನಂಬಿಕೆ ನಕ್ಷೆ 2.0’ ವ್ಯವಸ್ಥೆಯನ್ನು ಮೊದಲ ಹಂತದಲ್ಲಿ ಆಯ್ದ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ.ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ, ಅಗತ್ಯ ಸುಧಾರಣೆಗಳನ್ನು ಕೈಗೊಂಡ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಇತರ ಪ್ರದೇಶಗಳಿಗೂ ವಿಸ್ತರಣೆ ಜೊತೆಗೆ ಮುಂದಿನ ಹಂತದಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ದೊಡ್ಡ ವಿಸ್ತೀರ್ಣದ ಕಟ್ಟಡಗಳಿಗೂ ಸರಳೀಕೃತ ಹಾಗೂ ತಂತ್ರಜ್ಞಾನ ಆಧಾರಿತ ಮಂಜೂರಾತಿ ವ್ಯವಸ್ಥೆ ಜಾರಿಗೆ ಸಿದ್ದತೆ ನಡೀತಾ ಇದೆ.

ಜನರ ಹಾಗೂ ಅರ್ಹ ಆರ್ಕಿಟೆಕ್ಟ್ ಮೇಲೆ‌ ನಂಬಿಕೆಯಿಟ್ಟು ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ವ್ಯವಸ್ಥೆಯ ದುರುಪಯೋಗ ಕಂಡುಬಂದಲ್ಲಿ, ಅಂತಹವರರಿಗೆ ದುಬಾರಿ ಶಿಕ್ಷೆ ವಿಧಿಸಲಾಗುವುದಾಗಿ ಸಚಿವರು ಎಚ್ಚರಿಸಿದ್ದಾರೆ.

 

Add Zee News as a Preferred Source

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES