• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬಿಜೆಪಿ ರೆಬೆಲ್‌ ನಾಯಕರ 'ಮಿಡ್‌ನೈಟ್ ಆಪರೇಷನ್'..! ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು

ಬಿಜೆಪಿ ರೆಬೆಲ್‌ ನಾಯಕರ 'ಮಿಡ್‌ನೈಟ್ ಆಪರೇಷನ್'..! ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಮತ್ತೊಮ್ಮೆ ಭುಗಿಲೆದ್ದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಅಸಮಾಧಾನಗೊಂಡಿರುವ ರೆಬೆಲ್ ನಾಯಕರು ನೂತನ ಉಸ್ತುವಾರಿ ಹರೀಶ್ ದ್ವಿವೇದಿ ಅವರನ್ನು ಭೇಟಿಯಾಗಿ ರಹಸ್ಯ ಸಭೆ ನಡೆಸಿರುವುದು ತೀವ್ರ ರಾಜಕೀಯ ಸಂಚಲನ ಮೂಡಿಸಿದೆ.

Written ByKrishna NK
Published: Nov 06, 2026, 22:45 IST|Updated: Nov 06, 2026, 22:46 IST
joinshare
ಬಿಜೆಪಿ ರೆಬೆಲ್‌ ನಾಯಕರ 'ಮಿಡ್‌ನೈಟ್ ಆಪರೇಷನ್'..! ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು
Image Credit: karnataka bjp

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೊಮ್ಮೆ ತೀವ್ರಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಅಸಮಾಧಾನಗೊಂಡಿರುವ ಬಂಡಾಯ ನಾಯಕರು ಹೊಸ ದಾಳ ಉರುಳಿಸಿದ್ದಾರೆ. ಪಕ್ಷದ ನೂತನ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಅವರ ಬೆಂಗಳೂರು ಆಗಮನದ ಬೆನ್ನಲ್ಲೇ, ತಡರಾತ್ರಿ ರಹಸ್ಯ ಸಭೆ ನಡೆಸಿರುವ ರೆಬೆಲ್ ನಾಯಕರು ವಿಜಯೇಂದ್ರ ಅವರ ಕಾರ್ಯವೈಖರಿ ಹಾಗೂ ಸಂಘಟನಾತ್ಮಕ ಲೋಪಗಳ ಕುರಿತು ವಿಸ್ತೃತ ದೂರು ಸಲ್ಲಿಸಿದ್ದಾರೆ. ನವೆಂಬರ್ 10ಕ್ಕೆ ಬಿ.ವೈ. ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಅವಧಿ ಮುಕ್ತಾಯಗೊಳ್ಳುತ್ತಿರುವ ಈ ಸಂದರ್ಭದಲ್ಲಿ ನಡೆದಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಕಳೆದ ಕೆಲವು ದಿನಗಳಿಂದ ಸ್ವಲ್ಪಮಟ್ಟಿಗೆ ತಣ್ಣಗಾಗಿದ್ದ ರಾಜ್ಯ ಬಿಜೆಪಿ ಅಂಗಳದ ಭಿನ್ನಮತದ ಬೆಂಕಿ, ಇದೀಗ ನೂತನ ಉಸ್ತುವಾರಿಗಳ ಆಗಮನದೊಂದಿಗೆ ಮತ್ತೆ ಹೊತ್ತಿ ಉರಿಯತೊಡಗಿದೆ. ವಿಜಯೇಂದ್ರ ಅವರ ನೇತೃತ್ವವನ್ನು ವಿರೋಧಿಸುತ್ತಾ ಬಂದಿರುವ ಪ್ರಮುಖ ಅಸಮಾಧಾನಿತ ನಾಯಕರು, ಹರೀಶ್ ದ್ವಿವೇದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆಯೇ ರಹಸ್ಯ ಸಭೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ, ಇತ್ತೀಚೆಗೆ ತಡರಾತ್ರಿ ಕೆ.ಕೆ. ಗೇಸ್ಟ್‌ಹೌಸ್‌ನಲ್ಲಿ ಉಸ್ತುವಾರಿ ಹರೀಶ್ ದ್ವಿವೇದಿ ಅವರನ್ನು ಭೇಟಿಯಾದ ರೆಬೆಲ್ ಪಡೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಗಂಟೆಗಟ್ಟಲೆ ಚರ್ಚೆ ನಡೆಸಿದೆ.

ಈ ನಿಯೋಗದಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವ ವಹಿಸಿದ್ದರು. ಇವರೊಂದಿಗೆ ಶಾಸಕ ಬಿ.ಪಿ. ಹರೀಶ್, ಮಾಜಿ ಸಂಸದ ಭಗವಂತ್ ಖೂಬಾ ಸೇರಿದಂತೆ ಹಲವು ಪ್ರಮುಖ ರೆಬೆಲ್ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಉಸ್ತುವಾರಿಯಾದ ಹರೀಶ್ ದ್ವಿವೇದಿ ಅವರನ್ನು ಶಾಲಾ ಹಾಗೂ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ ಬಂಡಾಯ ನಾಯಕರು, ಬಳಿಕ ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಮತ್ತು ಪಕ್ಷದ ಸಂಘಟನೆಯಲ್ಲಿ ಉಂಟಾಗಿರುವ ಲೋಪದೋಷಗಳ ಬಗ್ಗೆ ಸುದೀರ್ಘವಾಗಿ ವಿವರಿಸಿದ್ದಾರೆ ಎನ್ನಲಾಗಿದೆ.

ವಿಶೇಷವಾಗಿ, ಬಿ.ವೈ. ವಿಜಯೇಂದ್ರ ಅವರ ರಾಜ್ಯಾಧ್ಯಕ್ಷರ ಅಧಿಕಾರಾವಧಿಯು ನವೆಂಬರ್ 10ಕ್ಕೆ ಅಧಿಕೃತವಾಗಿ ಪೂರ್ಣಗೊಳ್ಳಲಿದೆ. ಈ ಸೂಕ್ಷ್ಮ ಹಾಗೂ ನಿರ್ಣಾಯಕ ಘಟ್ಟದಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಉಸ್ತುವಾರಿಗಳೊಂದಿಗೆ ಮಾತುಕತೆ ನಡೆಸಿರುವುದು ಅತ್ಯಂತ ಮಹತ್ವ ಪಡೆದುಕೊಂಡಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ಮತ್ತೆ ಅಧಿಕಾರಕ್ಕೆ ತರಲು ನಾಯಕತ್ವ ಬದಲಾವಣೆ ಅನಿವಾರ್ಯ ಎಂದು ರೆಬೆಲ್ ನಾಯಕರು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ.

ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷವನ್ನು ಮುಂದಕ್ಕೆ ಕೊಂಡೊಸುವುದು ಕಷ್ಟಕರ ಎಂಬ ತಮ್ಮ ಹಿಂದಿನ ನಿಲುವನ್ನು ಈ ನಾಯಕರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಬಂಡಾಯ ನಾಯಕರ ಈ 'ಮಿಡ್‌ನೈಟ್ ಆಪರೇಷನ್' ದೆಹಲಿ ವಲಯದಲ್ಲಿ ಯಾವ ರೀತಿಯ ಸ್ಪಂದನೆ ಪಡೆದುಕೊಳ್ಳಲಿದೆ ಮತ್ತು ಮುಂಬರುವ ದಿನಗಳಲ್ಲಿ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Add Zee News as a Preferred Source
TAGS:
BJP