• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್ ಟಿಕೆಟ್‌ ದರ 9 ರೂ. ಹೆಚ್ಚಳ

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್ ಟಿಕೆಟ್‌ ದರ 9 ರೂ. ಹೆಚ್ಚಳ

ರಾಜ್ಯದ ಜನತೆಗೆ ದುಬಾರಿ ದುನಿಯಾ ಆರಂಭವಾಗಿದೆ. ಹಾಲಿನ ದರ ಹೆಚ್ಚಳ ಬೆನ್ನಲ್ಲೇ KSRTC, BMTC ಸೇರಿದಂತೆ ನಾಲ್ಕು ನಿಗಮಗಳ ಟಿಕೆಟ್ ಬೆಲೆ ಇಂದಿನಿಂದ 9 ರೂ. ಏರಿಕೆಯಾಗಲಿದೆ. ಡೀಸೆಲ್ ಬೆಲೆ ಏರಿಕೆ, ನೌಕರರ ಸಂಬಳ ಮತ್ತು ಕಾರ್ಯಾಚರಣೆಯ ವೆಚ್ಚವೇ ಇದಕ್ಕೆ ಮುಖ್ಯ ಕಾರಣ ಎಂದು ಸಾರಿಗೆ ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ.

Written ByYashaswini V
Published: Nov 04, 2026, 01:31 PM IST|Updated: Nov 04, 2026, 01:39 PM IST
joinshare
ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್ ಟಿಕೆಟ್‌ ದರ 9 ರೂ. ಹೆಚ್ಚಳ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ತುಘಲಕ್ ಸರ್ಕಾರಕ್ಕಿಂತಲೂ ಹೀನ ಕಾಂಗ್ರೆಸ್‌ ಸರ್ಕಾರ: ಬೆಲೆ ಏರಿಕೆ ವಿರುದ್ಧ ಆರ್‌.ಅಶೊಕ್‌ ಆಕ್ರೋಶ

ತುಘಲಕ್ ಸರ್ಕಾರಕ್ಕಿಂತಲೂ ಹೀನ ಕಾಂಗ್ರೆಸ್‌ ಸರ್ಕಾರ: ಬೆಲೆ ಏರಿಕೆ ವಿರುದ್ಧ ಆರ್‌.ಅಶೊಕ್‌ ಆಕ್ರೋಶ

2

ಭಾರತದ ಈ ಖ್ಯಾತ ಉದ್ಯಮಿ ಏಷ್ಯಾದ ಶ್ರೀಮಂತ ವ್ಯಕ್ತಿ! ಅಂಬಾನಿಯೋ, ಅದಾನಿಯೋ?

3

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್ ಟಿಕೆಟ್‌ ದರ 9 ರೂ. ಹೆಚ್ಚಳ

4

ಕಿಂಗ್ ಕೊಹ್ಲಿಯ ಅದ್ಭುತ ಕ್ಯಾಚ್‌ಗೆ ಪ್ರೇಕ್ಷಕರು ಫಿದಾ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್!

5

ಪಿಂಕ್ ಆಟೋ ಯೋಜನೆಗೆ ಮನಸ್ಸು ಮಾಡದ ಮಹಿಳೆಯರು: ಗಟ್ಟಿಗಿತ್ತೀಯರಾಗಾಗಿ ಖಾಲಿ ಬಿದ್ದಿದೆ ₹4 ಕೋಟಿ ಅನುದಾನ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಈಗಾಗಲೇ ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಇದೀಗ ಬಸ್ ಪ್ರಯಾಣವೂ ದುಬಾರಿಯಾಗಲಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಬಸ್ ದರ ಹೆಚ್ಚಳ ಅನಿವಾರ್ಯ ಎಂದ ಸಚಿವರು!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಹಾಗೂ ನಿರ್ವಹಣಾ ವೆಚ್ಚದಿಂದ ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲೂ ಬಸ್ ಪ್ರಯಾಣ ದರ ಹೆಚ್ಚಳವಾಗಿದೆ. ನಾವು ನೀರು ಹಾಕಿ ಬಸ್ ಓಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಮ್ಮದು ಲಾಭದಾಯಕ ಸಂಸ್ಥೆಯಲ್ಲ, ಜನರಿಗೆ ಸೇವೆ ನೀಡುವ ಸಂಸ್ಥೆ. ಟಿಕೆಟ್ ದರ ಹೆಚ್ಚಳ ಮಾಡಿದರೂ ನಿಗಮಗಳ ನಷ್ಟ ಸಂಪೂರ್ಣ ಕಡಿಮೆಯಾಗುವುದಿಲ್ಲ. ಆದರೆ ಆರ್ಥಿಕ ಒತ್ತಡ ಸ್ವಲ್ಪ ಮಟ್ಟಿಗೆ ತಗ್ಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

KSRTC 23%, BMTC 33ರಿಂದ 35%ರಷ್ಟು ಹೆಚ್ಚಳ!
ಸುದ್ದಿಗೋಷ್ಠಿಯಲ್ಲಿ ಸಾರಿಗೆ ದರ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಸಚಿವರು, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರದಲ್ಲಿ ಶೇ.23ರಷ್ಟು ಹೆಚ್ಚಳ ಮಾಡಿರುವುದಾಗಿ ಹಾಗೂ ಬಿಎಂಟಿಸಿ ಬಸ್ ಟಿಕೆಟ್ ದರದಲ್ಲಿ ಶೇ.33ರಿಂದ 35ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಡೈಲಿ ಪಾಸ್ ಸೇರಿದಂತೆ ವಿವಿಧ ಬಸ್ ಪಾಸ್‌ಗಳ ದರವನ್ನೂ ಪರಿಷ್ಕರಿಸಲಾಗಿದೆ.

ಈ ದರ ಏರಿಕೆಯಿಂದ ಪ್ರತಿದಿನ ಬಸ್‌ನಲ್ಲಿ ಪ್ರಯಾಣಿಸುವ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ.

ನಾಲ್ಕು ಸಾರಿಗೆ ನಿಗಮಗಳು 10,200 ಕೋಟಿ ನಷ್ಟ!
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಒಟ್ಟಾರೆ 10,200 ಕೋಟಿ ರೂಪಾಯಿ ನಷ್ಟದಲ್ಲಿವೆ ಎಂದು ಸಚಿವರು ಮಾಹಿತಿ ನೀಡಿದ್ದು, ನಿಗಮಗಳ ಮೇಲಿರುವ ವಿವಿಧ ಬಾಕಿಗಳ ವಿವರವನ್ನು ಹಂಚಿಕೊಂಡಿದ್ದಾರೆ.

* ಭವಿಷ್ಯ ನಿಧಿ ಬಾಕಿ: 2,916 ಕೋಟಿ ರೂ.
* ನಿವೃತ್ತ ನೌಕರರ ಬಾಕಿ: 603 ಕೋಟಿ ರೂ.
* ವೇತನ ಪರಿಷ್ಕರಣೆ ಬಾಕಿ: 664 ಕೋಟಿ ರೂ.
* ಸಿಬ್ಬಂದಿಯ ಇತರೆ ಪಾವತಿ ಬಾಕಿ: 356 ಕೋಟಿ ರೂ.

ಈ ಎಲ್ಲ ಬಾಕಿಗಳನ್ನು ಪಾವತಿಸುವ ಜವಾಬ್ದಾರಿ ನಿಗಮಗಳ ಮೇಲಿದೆ. ಹೀಗಾಗಿ ಆದಾಯ ಹೆಚ್ಚಳದ ಮೂಲಕ ಆರ್ಥಿಕ ಒತ್ತಡ ಕಡಿಮೆ ಮಾಡಬೇಕಿದೆ ಎಂದಿದ್ದಾರೆ.

ಶಕ್ತಿ ಯೋಜನೆಯಿಂದ ನಿಗಮಗಳಿಗೆ ಹೊರೆಯಾಗಿಲ್ಲ!
ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊರೆ ಉಂಟಾಗಿಲ್ಲ ಎಂದು ಭೈರತಿ ಸುರೇಶ್ ಸಮರ್ಥಿಸಿಕೊಂಡರು. ಸರ್ಕಾರದಿಂದ ಶಕ್ತಿ ಯೋಜನೆಯಡಿ ನಿಗಮಗಳಿಗೆ ಸುಮಾರು 6,300 ಕೋಟಿ ರೂಪಾಯಿ ಪಾವತಿಸಬೇಕಿದೆ. 2023-24ರಲ್ಲಿಯೂ ಸರ್ಕಾರಕ್ಕೆ 1,140 ಕೋಟಿ ರೂಪಾಯಿ ಬಾಕಿ ಇತ್ತು ಎಂದು ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಉಳಿದಿರುವ ಆರ್ಥಿಕ ಹೊಣೆಯನ್ನು ಮುಂದಿನ ಸರ್ಕಾರವೂ ಹೊರಬೇಕಾಗುತ್ತದೆ. ನೀರಾವರಿ ಇಲಾಖೆಯಲ್ಲಿಯೂ ಸುಮಾರು 60 ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಎಂದು ಉಲ್ಲೇಖಿಸಿದರು. ನಮ್ಮ ಸರ್ಕಾರ ಸಾರಿಗೆ ನಿಗಮಗಳಿಗೆ ಕಾಲಕಾಲಕ್ಕೆ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಶಕ್ತಿ ಯೋಜನೆಯಿಂದ ನಿಗಮಗಳಿಗೆ ಹೊರೆ ಉಂಟಾಗಿದೆ ಎಂಬ ಆರೋಪ ಸರಿಯಲ್ಲ ಎಂದು ಸಚಿವರು ಹೇಳಿದರು.

ಮಾಧ್ಯಮಗಳ ಪ್ರಶ್ನೆಗೆ ಬೈರತಿ ಸುರೇಶ್‌ ಗರಂ!
ಇನ್ನು ಸುದ್ದಿಗೋಷ್ಠಿಯಲ್ಲಿ ವರದಿಗಾರರು ಕೇಳಿದ ಕೆಲವು ಪ್ರಶ್ನೆಗಳಿಗೆ ಉತ್ತರಿಸುವಾಗ ಸಚಿವರು ತಡವರಿಸಿದ್ದು, ಸೂಕ್ತ ಮಾಹಿತಿ ಇಲ್ಲದೆ ಸುದ್ದಿಗೋಷ್ಠಿಗೆ ಬಂದಿದ್ದಾರೆಯೇ ಎಂಬ ಚರ್ಚೆಯೂ ಕೇಳಿಬಂದಿದೆ. ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ನನ್ನ ಬಳಿ ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡಿ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ಮಾಹಿತಿ ಒದಗಿಸುತ್ತೇವೆ ಎಂದು ಹೇಳಿ ಪರಿಸ್ಥಿತಿಯನ್ನು ಸಮಾಧಾನಪಡಿಸಿದಾರೆ.

ಒಟ್ಟಿನಲ್ಲಿ ಸಾರಿಗೆ ನಿಗಮಗಳ ನಷ್ಟ, ಶಕ್ತಿ ಯೋಜನೆಯ ವೆಚ್ಚ, ನೌಕರರ ಬಾಕಿ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದೆ. ಆದರೆ ಬೆಲೆ ಏರಿಕೆಯ ನಡುವೆಯೇ ಬಸ್ ಪ್ರಯಾಣವೂ ದುಬಾರಿಯಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.
 

Add Zee News as a Preferred Source
TAGS:
Karnataka Politics
Price Hike
Kannada News