• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಿರ್ಮಾಣ ಹಂತದಲ್ಲೇ ಕುಸಿದ ಸೆಂಟ್ರಿಂಗ್ : ಕಾಂಕ್ರೀಟ್ ಅಡಿಯಲ್ಲಿ ಸಿಲುಕಿ 3 ಕಾರ್ಮಿಕರ ಸಾ*ವು, ನಾಲ್ವರಿಗೆ ಗಾಯ

ನಿರ್ಮಾಣ ಹಂತದಲ್ಲೇ ಕುಸಿದ ಸೆಂಟ್ರಿಂಗ್ : ಕಾಂಕ್ರೀಟ್ ಅಡಿಯಲ್ಲಿ ಸಿಲುಕಿ 3 ಕಾರ್ಮಿಕರ ಸಾ*ವು, ನಾಲ್ವರಿಗೆ ಗಾಯ

ತಮಿಳುನಾಡಿನ ಹೊಸೂರು ಸಮೀಪದ ಸಿಪ್‌ಕಾಟ್ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಾಂಕ್ರೀಟ್ ಸೆಂಟ್ರಿಂಗ್ ಕುಸಿದು ಬಿದ್ದು, ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಘಟನೆಯ ಸಂಪೂರ್ಣ ವರದಿ ಇಲ್ಲಿದೆ.

Written ByKrishna NK
Published: Nov 06, 2026, 18:23 IST|Updated: Nov 06, 2026, 18:26 IST
joinshare
ನಿರ್ಮಾಣ ಹಂತದಲ್ಲೇ ಕುಸಿದ ಸೆಂಟ್ರಿಂಗ್ : ಕಾಂಕ್ರೀಟ್ ಅಡಿಯಲ್ಲಿ ಸಿಲುಕಿ 3 ಕಾರ್ಮಿಕರ ಸಾ*ವು, ನಾಲ್ವರಿಗೆ ಗಾಯ
Image Credit: Anekal News

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕರ ಪಾಲಿಗೆ ಯಮನಾಗಿ ಎರಗಿದ ಕಾಂಕ್ರೀಟ್ ಸೆಂಟ್ರಿಂಗ್, ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರ್ನಾಟಕದ ಗಡಿ ಭಾಗದಲ್ಲಿರುವ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಯಿತೇ ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಇದರ ಒಂದು ವರದಿ ಇಲ್ಲಿದೆ ನೋಡಿ.

ಹೌದು, ಕಾರ್ಖಾನೆಯೊಂದರಲ್ಲಿ ನಡೆಯುತ್ತಿದ್ದ ನಿರ್ಮಾಣ ಹಂತದ ಕಾಮಗಾರಿ ಕ್ಷಣಾರ್ಧದಲ್ಲಿ ಸ್ಮಶಾನ ಮೌನಕ್ಕೆ ಸಾಕ್ಷಿಯಾಗಿದೆ. ತಮಿಳುನಾಡಿನ ಹೊಸೂರು ಸಮೀಪದ ಸಿಪ್‌ಕಾಟ್ ಕೈಗಾರಿಕಾ ಪ್ರದೇಶದಲ್ಲಿರುವ ಬಾಲಾಜಿ ಗೇರ್ಸ್ ಖಾಸಗಿ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿತ್ತು. ಕಟ್ಟಡದ ನಿರ್ಮಾಣದ ಭಾಗವಾಗಿ ಮೋಲ್ಡ್‌ಗೆ ಕಾಂಕ್ರೀಟ್ ಹಾಕುವ ಕೆಲಸದಲ್ಲಿ ಕಾರ್ಮಿಕರು ತೊಡಗಿಸಿಕೊಂಡಿದ್ದರು. ಎಲ್ಲವೂ ಸಹಜವಾಗಿಯೇ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಪರಿಣಾಮ, ಕಾಂಕ್ರೀಟ್ ಮತ್ತು ಕಟ್ಟಡದ ಅವಶೇಷಗಳು ಕಾರ್ಮಿಕರ ಮೇಲೆ ಬಿದ್ದಿವೆ.

ಕಣ್ಣೆದುರೇ ಸಂಭವಿಸಿದ ಈ ಅವಘಡದಲ್ಲಿ ಕಾರ್ಮಿಕರಿಗೆ ತಪ್ಪಿಸಿಕೊಳ್ಳಲು ಕೂಡ ಅವಕಾಶ ಸಿಗಲಿಲ್ಲ. ಭಾರೀ ಪ್ರಮಾಣದ ಕಾಂಕ್ರೀಟ್ ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದ ಮೂವರು ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಕುಮರೇಶನ್ (39), ಮೈಕೆಲ್ (26) ಹಾಗೂ ಶ್ರೀನಿವಾಸನ್ (26) ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರ್ಖಾನೆ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನು ಈ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಕ್ರೇನ್‌ಗಳ ನೆರವು ಪಡೆಯಲಾಗಿದೆ. ಸತತ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರ್ಮಾಣ ಕಾಮಗಾರಿ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತ, ಕಾರ್ಮಿಕರ ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಲಾಗಿತ್ತೇ ಎಂಬ ಅಯಾಮದಲ್ಸಿ ಪೋಲಿಸರು ತನಿಖೆ ಶುರು ಮಾಡಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಆದರೆ ಮುನ್ನೆಚ್ಚರಿಕಾ ಕ್ರಮಗಳ ಕೊರತೆ ಅಥವಾ ಕಾಮಗಾರಿಯಲ್ಲಿನ ಲೋಪದಿಂದಲೇ ಈ ದುರಂತ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ದುಡಿಯಲು ಬಂದ ಕಾರ್ಮಿಕರು ಹೆಣವಾಗಿ ಮನೆಗೆ ಮರಳಿರುವುದು ಮಾತ್ರ ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಕಾರ್ಮಿಕರ ಬೆವರಿನಿಂದ ನಿರ್ಮಾಣವಾಗಬೇಕಿದ್ದ ಕಟ್ಟಡವೇ ಅವರ ಪಾಲಿಗೆ ಸಾವಿನ ಮನೆಯಾಗಿದೆ. ಕೆಲಸ ಮುಗಿಸಿ ಸುರಕ್ಷಿತವಾಗಿ ಮನೆಗೆ ಮರಳಬೇಕಿದ್ದ ಮೂವರು ಕಾರ್ಮಿಕರು ಇದೀಗ ಹೆಣವಾಗಿ ಮಲಗಿದ್ದು, ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ದುರಂತ ಮೂರು ಕುಟುಂಬಗಳ ಬದುಕಿನಲ್ಲಿ ಎಂದಿಗೂ ಮರೆಯಲಾಗದ ನೋವನ್ನು ಉಳಿಸಿದೆ. ಇನ್ನಾದರೂ ನಿರ್ಮಾಣ ಕಾಮಗಾರಿಗಳ ವೇಳೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕಾರ್ಮಿಕರ ಜೀವಕ್ಕೆ ಮೊದಲ ಆದ್ಯತೆ ನೀಡಬೇಕಿದೆ. ಇಲ್ಲವಾದಲ್ಲಿ ಇಂತಹ ದುರಂತಗಳು ಮರುಕಳಿಸುವ ಅಪಾಯ ತಪ್ಪಿದ್ದಲ್ಲ.

Add Zee News as a Preferred Source
TAGS:
Kannada News