• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಅಕ್ಟೋಬರ್ 2 ರಿಂದ ದೇಶಾದ್ಯಂತ ಸಿಜೆಪಿ, ಕಾಂಗ್ರೆಸ್‌ ಪ್ರತಿಭಟನೆ

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಅಕ್ಟೋಬರ್ 2 ರಿಂದ ದೇಶಾದ್ಯಂತ ಸಿಜೆಪಿ, ಕಾಂಗ್ರೆಸ್‌ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ತಕ್ಷಣದ ರಾಜೀನಾಮೆಗೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕಾಂಗ್ರೆಸ್ ತೀವ್ರ ಆಗ್ರಹ ವ್ಯಕ್ತಪಡಿಸಿವೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದ್ದು, 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 130 ಮಿಲಿಯನ್‌ಗೂ (13 ಕೋಟಿ) ಹೆಚ್ಚು ಮತದಾರರ ಹೆಸರುಗಳನ್ನು ಹೊರಗಿಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

Reported ByKrishna NKEdited ByKrishna NK
Published: Sep 28, 2026, 06:42 PM IST|Updated: Sep 28, 2026, 06:47 PM IST
joinshare
ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಅಕ್ಟೋಬರ್ 2 ರಿಂದ ದೇಶಾದ್ಯಂತ ಸಿಜೆಪಿ, ಕಾಂಗ್ರೆಸ್‌ ಪ್ರತಿಭಟನೆ
Image Credit: CJP News

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಕೀಯ ವಲಯದಲ್ಲಿ ವಿವಾದ ಹಾಗೂ ಪ್ರತಿಭಟನೆಗಳು ತೀವ್ರಗೊಂಡಿವೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕಾಂಗ್ರೆಸ್, ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 2 ರಿಂದ ದೇಶಾದ್ಯಂತ ಬೃಹತ್ ಆಂದೋಲನ ಕೈಗೊಳ್ಳುವುದಾಗಿ ಘೋಷಿಸಿವೆ.

130 ಮಿಲಿಯನ್ ಹೆಸರುಗಳು ಔಟ್: ಸಿಜೆಪಿ ಗಂಭೀರ ಆರೋಪ
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಮಯದಲ್ಲಿ 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರಡು ಮತದಾರರ ಪಟ್ಟಿಯಿಂದ ಸುಮಾರು 130 ಮಿಲಿಯನ್‌ಗೂ (13 ಕೋಟಿ) ಹೆಚ್ಚಿನ ಹೆಸರುಗಳನ್ನು ಅಳಿಸಿಹಾಕಲಾಗಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಂಕಾ ಆರೋಪಿಸಿದ್ದಾರೆ.

ಸಂಸ್ಥೆಯು 'ಚುನಾವಣಾ ಆಯೋಗವನ್ನು ಸರಿಪಡಿಸಿ' ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ಪತ್ರಿಕಾಗೋಷ್ಠಿ ನಡೆಸಿ ಈ ಲೋಪಗಳ ಬಗ್ಗೆ ಸಾರ್ವಜನಿಕರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಸಿಇಸಿ ರಾಜೀನಾಮೆ ನೀಡುವವರೆಗೂ ಅಕ್ಟೋಬರ್ 2 ರಿಂದ ಆರಂಭವಾಗುವ ರಾಷ್ಟ್ರವ್ಯಾಪಿ ಆಂದೋಲನ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.

ಭೋಪಾಲ್‌ನಲ್ಲಿ ರಣರಂಗ: ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗ
ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ಉಗ್ರ ರೂಪ ತಾಳಿದೆ. ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು.

ಪ್ರತಿಭಟನಾಕಾರರು ಬ್ಯಾರಿಕೇಡ್ ದಾಟಲು ಯತ್ನಿಸಿದಾಗ ಪೊಲೀಸರು ಜಲಫಿರಂಗಿ (ವಾಟರ್ ಕೆನಾನ್) ಬಳಸಿ ಚದುರಿಸಿದರು. ಈ ವೇಳೆ ನಡೆದ ತೂರಾಟ ಮತ್ತು ಚಕಮಕಿಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಹಾಗೂ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಜ್ಞಾನೇಶ್ ಕುಮಾರ್ ಅವರ ಮುಖವಾಡ ಧರಿಸಿದ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ಸಾಂಕೇತಿಕವಾಗಿ ಆಕ್ರೋಶ ಹೊರಹಾಕಲಾಯಿತು.

ಅಸ್ಸಾಂ, ಮಹಾರಾಷ್ಟ್ರದಲ್ಲೂ ಹೆಚ್ಚಿದ ಆಕ್ರೋಶ
ಅಸ್ಸಾಂನ ಗುವಾಹಟಿಯಲ್ಲಿರುವ ಮನಬೇಂದ್ರ ಶರ್ಮಾ ಸಂಕೀರ್ಣದಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಭಾರಿ ಧರಣಿ ನಡೆಸಿದೆ. ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಮತ್ತು ಚುನಾವಣಾ ಆಯೋಗವು ತನ್ನ ಪಾರದರ್ಶಕತೆಯನ್ನು ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು ಸಿಇಸಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇತ್ತ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಇಡೀ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ತೀವ್ರಗೊಳಿಸಿದೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ, ಬದಲಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪರವಾಗಿ ಪಕ್ಷಪಾತ ಧೋರಣೆ ತಳೆದಿದೆ ಎಂದು ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ.

Add Zee News as a Preferred Source
TAGS:
Kannada News