• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /‘ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಿಯ ಕರ್ತವ್ಯ’: ಬರ ಪರಿಹಾರ ನಿಧಿಗಾಗಿ ಡಿಕೆ ಶಿವಕುಮಾರ್ ಮನವಿ

‘ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಿಯ ಕರ್ತವ್ಯ’: ಬರ ಪರಿಹಾರ ನಿಧಿಗಾಗಿ ಡಿಕೆ ಶಿವಕುಮಾರ್ ಮನವಿ

ಬರ ಪರಿಸ್ಥಿತಿಯಿಂದಾಗಿ ಕಂಗೆಟ್ಟಿರುವ ರೈತರಿಗಾಗಿ ಶೀಘ್ರವೇ ಕೇಂದ್ರ ಸರ್ಕಾರ ಬರ ಪರಿಹಾರ ನಿಧಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

Written ByYashaswini V
Published: Sep 24, 2026, 12:35 PM IST|Updated: Sep 24, 2026, 12:38 PM IST
joinshare
‘ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಿಯ ಕರ್ತವ್ಯ’: ಬರ ಪರಿಹಾರ ನಿಧಿಗಾಗಿ ಡಿಕೆ ಶಿವಕುಮಾರ್ ಮನವಿ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ದೆಹಲಿಗೆ ತೆರಳುವುದಾಗಿ ಅವರು ತಿಳಿಸಿದರು.

ರಾಜ್ಯಕ್ಕೆ ಬರ ಪರಿಹಾರ ನೀಡುವುದು ಪ್ರಧಾನಿಗಳ ಕರ್ತವ್ಯ:
“ಕರ್ನಾಟಕಕ್ಕೆ ನೆರವು ನೀಡುವುದು ಗೌರವಾನ್ವಿತ ಪ್ರಧಾನಮಂತ್ರಿಗಳ ಕರ್ತವ್ಯ. ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಸಂಕಷ್ಟದಲ್ಲಿವೆ. ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ರೈತರು ಬೆಳೆ ಕಳೆದುಕೊಂಡಿದ್ದಾರೆ. ನೀರು ಮತ್ತು ವಿದ್ಯುತ್ ಸಮಸ್ಯೆಗಳೂ ಎದುರಾಗಿವೆ,” ಎಂದು ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸುಮಾರು 20,000 ಮೆಗಾವ್ಯಾಟ್‌ಗೆ ತಲುಪಿದ್ದು, ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಗಂಭೀರ ಪರಿಸ್ಥಿತಿ ಎದುರಾಗಿದೆ ಎಂದರು.

“ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಾವು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ರಾಜ್ಯಗಳಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ ₹20ರಿಂದ ₹22ರವರೆಗೆ ಪಾವತಿಸಿ ಖರೀದಿಸುವ ಪರಿಸ್ಥಿತಿ ಇದೆ. ವಿದ್ಯುತ್ ಲಭ್ಯವಾಗುತ್ತಿಲ್ಲ,” ಎಂದು ಅವರು ಹೇಳಿದರು.

ವಿದ್ಯುತ್ ಪರಿಸ್ಥಿತಿ ಪರಿಶೀಲನೆ:
ವಿದ್ಯುತ್ ಪರಿಸ್ಥಿತಿಯನ್ನು ಪರಿಶೀಲಿಸಿ, ಗ್ರಾಹಕರ ಹಿತವನ್ನು ರಕ್ಷಿಸುವಂತೆ ಇಂಧನ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದ  ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, “ವಿದ್ಯುತ್ ಇಲಾಖೆಗೆ ಪರಿಸ್ಥಿತಿಯನ್ನು ಪರಿಶೀಲಿಸಿ, ನಾಗರಿಕರನ್ನು ರಕ್ಷಿಸುವಂತೆ ಸೂಚಿಸಿದ್ದೇನೆ,” ಎಂದರು.

ಸಕ್ಕರೆ ಕಾರ್ಖಾನೆಗಳೊಂದಿಗೆ ಕೂಡ ಚರ್ಚಿಸಿದ್ದು, ವಿದ್ಯುತ್ ಪೂರೈಕೆ ವಿಚಾರದಲ್ಲಿ ಸರ್ಕಾರದೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ಈ ವಿಚಾರದಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸುವ ಅಗತ್ಯವಿದೆ. ಅವರು ಉತ್ಪಾದಿಸುವ ವಿದ್ಯುತ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ; ಅದನ್ನು ಸರ್ಕಾರಕ್ಕೆ ನೀಡಬೇಕು,” ಎಂದು ಅವರು ಹೇಳಿದರು.

ಉಷ್ಣ ವಿದ್ಯುತ್ ಸ್ಥಾವರ ಕೇವಲ ಕರ್ನಾಟಕದ ಸಮಸ್ಯೆ ಅಲ್ಲ:
ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯವಿರುವ ಕಲ್ಲಿದ್ದಲು ದಾಸ್ತಾನು ಬಗ್ಗೆಯೂ ಎಚ್ಚರಿಕೆ ವಹಿಸಬೇಕಿದೆ ಎಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, “ಉಷ್ಣ ವಿದ್ಯುತ್ ಉತ್ಪಾದನೆಯಾಗುವ ಕಡೆಗಳಲ್ಲಿ ಕಲ್ಲಿದ್ದಲು ದಾಸ್ತಾನು ಎಷ್ಟಿದೆ ಎಂಬುದನ್ನು ಗಮನಿಸಬೇಕು. ಈ ವಿಚಾರದಲ್ಲಿ ನಾವು ಬಹಳ ಎಚ್ಚರಿಕೆಯಿಂದ ಇರಬೇಕು. ಇದು ಕರ್ನಾಟಕದ ಸಮಸ್ಯೆ ಮಾತ್ರವಲ್ಲ. ಇತರ ರಾಜ್ಯಗಳ ಪರಿಸ್ಥಿತಿಯನ್ನೂ ನಾನು ಗಮನಿಸುತ್ತಿದ್ದೇನೆ,” ಎಂದರು.

ತಾವು ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಲಭ್ಯತೆಯನ್ನು ಪ್ರತಿದಿನವೂ ಗಮನಿಸುತ್ತಿದ್ದುದಾಗಿ ಹೇಳಿದ ಡಿ. ಕೆ. ಶಿವಕುಮಾರ್, “ನಾನು ಇಂಧನ ಸಚಿವನಾಗಿದ್ದಾಗಿನಿಂದಲೂ ಪ್ರತಿದಿನ ಯಾವ ರಾಜ್ಯದಲ್ಲಿ ಎಷ್ಟು ವಿದ್ಯುತ್ ಲಭ್ಯವಿದೆ ಎಂಬುದನ್ನು ಗಮನಿಸುತ್ತಿದ್ದೇನೆ,” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಕುರಿತು ಮಾತನಾಡಿದ ಮುಖ್ಯಮಂತ್ರಿ, ತಮ್ಮ ಕಾರ್ಯಕ್ರಮಗಳ ಬಳಿಕ ದೆಹಲಿಗೆ ತೆರಳಿ ಪ್ರಧಾನಿಯವರ ಭೇಟಿಗೆ ಸಮಯ ಕೇಳುವುದಾಗಿ ತಿಳಿಸಿದರು. “ಇದರ ನಂತರ ನಾನು ದೆಹಲಿಗೆ ತೆರಳುತ್ತೇನೆ. ಪ್ರಧಾನಿಯವರ ಭೇಟಿಗೆ ಸಮಯ ಕೇಳುತ್ತಿದ್ದೇನೆ,” ಎಂದು ಶಿವಕುಮಾರ್ ಹೇಳಿದರು.
 

Add Zee News as a Preferred Source
TAGS:
D K Shivakumar
Narendra Modi
Kannada News