• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ಜವಾಬ್ದಾರಿ..? ಸಂಪೂರ್ಣ ಲಿಸ್ಟ್‌ ಇಲ್ಲಿದೆ

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ಜವಾಬ್ದಾರಿ..? ಸಂಪೂರ್ಣ ಲಿಸ್ಟ್‌ ಇಲ್ಲಿದೆ

ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿನ ಭಿನ್ನಮತ ಶಮನಗೊಳಿಸಲು ಮತ್ತು ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳನ್ನು ತಣಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ದಾಳ ಉರುಳಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ 18 ವಿವಿಧ ನಿಗಮ, ಮಂಡಳಿ ಮತ್ತು ಪ್ರಮುಖ ಹುದ್ದೆಗಳ ಅಧ್ಯಕ್ಷ ಸ್ಥಾನವನ್ನು ಹಂಚಿಕೆ ಮಾಡುವ ಮೂಲಕ, ಸರ್ಕಾರಿ ಕಾರು ಹಾಗೂ ವಿಧಾನಸೌಧದಲ್ಲಿ ಕೊಠಡಿ ಸೇರಿದಂತೆ ಹಲವು ಸೌಲಭ್ಯಗಳ ಗ್ಯಾರಂಟಿ ನೀಡಿದ್ದಾರೆ.

Written ByKrishna NK
Published: Nov 21, 2026, 15:56 IST|Updated: Nov 21, 2026, 15:59 IST
joinshare
ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ಜವಾಬ್ದಾರಿ..? ಸಂಪೂರ್ಣ ಲಿಸ್ಟ್‌ ಇಲ್ಲಿದೆ
Image Credit: DK Shivakumar

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಬರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಮಹತ್ವದ 'ನಿಗಮ-ಮಂಡಳಿ ಭಾಗ್ಯ' ಕರುಣಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವು ಹಿರಿಯ ಶಾಸಕರಿಗೆ ವಿವಿಧ ನಿಗಮ, ಮಂಡಳಿ ಮತ್ತು ಪ್ರಮುಖ ಹುದ್ದೆಗಳ ಅಧ್ಯಕ್ಷ ಸ್ಥಾನವನ್ನು ನೀಡಿ ಸಮಾಧಾನಪಡಿಸುವ ರಾಜಕೀಯ ತಂತ್ರಗಾರಿಕೆ ಹೆಣೆದಿದ್ದಾರೆ. ಈ ಮೂಲಕ ಸರ್ಕಾರಿ ಕಾರು ಹಾಗೂ ವಿಧಾನಸೌಧದಲ್ಲಿ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳ ಗ್ಯಾರಂಟಿ ದೊರೆತಂತಾಗಿದೆ.

ಅಧಿವೇಶನಕ್ಕೂ ಮೊದಲೇ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುವುದು ಎಂದು ಈ ಹಿಂದೆ ಹೇಳಿದ್ದ ಸಿಎಂ ಡಿ.ಕೆ. ಶಿವಕುಮಾರ್, ಸಂಪುಟ ವಿಸ್ತರಣೆಗೆ ಮುನ್ನವೇ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಒಟ್ಟು 18 ನಿಗಮ, ಮಂಡಳಿ ಮತ್ತು ಇತರ ಪ್ರಮುಖ ಸ್ಥಾನಗಳಿಗೆ ನೇಮಕಾತಿ ಆದೇಶ ಹೊರಡಿಸುವ ಮೂಲಕ, ಕ್ಯಾಬಿನೆಟ್ ಸೇರುವ ತೀವ್ರ ನಿರೀಕ್ಷೆಯಲ್ಲಿದ್ದ ಹಲವು ಶಾಸಕರನ್ನು ಸದ್ಯದ ಮಟ್ಟಿಗೆ ಸಂಪುಟದ ರೇಸ್‌ನಿಂದ ಹೊರಗಿಟ್ಟಿದ್ದಾರೆ. ದೀರ್ಘಕಾಲದಿಂದ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಸಿಕ್ಕ ಹುದ್ದೆಗಳು 'ಸಿಕ್ಕಿದ್ದು ಸಿರೂಂಡೆ' ಎಂಬಂತಾಗಿದ್ದು, ಕೆಲವರು ಅಸಮಾಧಾನದ ನಡುವೆಯೂ 'ಪಾಲಿಗೆ ಬಂದಿದ್ದು ಪಂಚಾಮೃತ' ಎಂದು ಒಪ್ಪಿಕೊಂಡು ಹುದ್ದೆಗಳನ್ನು ಸ್ವೀಕರಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಹಿರಿತನದ ಅಸಮಾಧಾನ ಮತ್ತು ವಿಪಕ್ಷಗಳ ವಾಗ್ದಾಳಿ
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದ ಸಚಿವ ಸಂಪುಟ ರಚನೆ ಹಾಗೂ ನಿರ್ಧಾರಗಳ ಬಗ್ಗೆ ಹಲವು ಹಿರಿಯ ಶಾಸಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಮಾನ್ಯತೆ ಮತ್ತು ಅವಕಾಶ ದೊರೆತಿಲ್ಲ ಎಂಬ ಬೇಸರ ಹಿರಿಯ ಶಾಸಕರಲ್ಲಿ ಮನೆಮಾಡಿತ್ತು. ಈ ಆಂತರಿಕ ಬೆಳವಣಿಗೆಗಳನ್ನು ಬಂಡವಾಳ ಮಾಡಿಕೊಂಡ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಾದರೂ ಮೂರನೇ ಮುಖ್ಯಮಂತ್ರಿ ಬರಬಹುದು ಎಂದು ಭವಿಷ್ಯ ನುಡಿಯುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದ್ದವು.

ಇದರ ನಡುವೆಯೇ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣವು ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು-ಮೂರು ಬಣಗಳ ಹುಟ್ಟಿಗೆ ಕಾರಣವಾಗಿದೆ ಎಂಬ ಚರ್ಚೆಗಳು ಜೋರಾಗಿದ್ದವು. ಮತ್ತೊಂದೆಡೆ, ಸಚಿವ ಸ್ಥಾನ ವಂಚಿತ ಕೆಲ ಶಾಸಕರು ಸಹಿ ಸಂಗ್ರಹ ಅಭಿಯಾನಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದು, ರಾಜ್ಯ ರಾಜಕೀಯದಲ್ಲಿ ಯಾವುದೇ ಕ್ಷಣದಲ್ಲಾದರೂ ಬದಲಾವಣೆಗಳಾಗಬಹುದು ಎಂಬ ಹೇಳಿಕೆಗಳು ಆಡಳಿತ ಪಕ್ಷದಲ್ಲಿ ತಳಮಳ ಮೂಡಿಸಿದ್ದವು.

ಬೆಳಗಾವಿ ಅಧಿವೇಶನದ ಲೆಕ್ಕಾಚಾರ
ವಿರೋಧ ಪಕ್ಷಗಳ ಟೀಕೆ ಮತ್ತು ಆಂತರಿಕ ಭಿನ್ನಮತದ ಧ್ವನಿ ಇನ್ನಷ್ಟು ಹೆಚ್ಚಾದರೆ ಅದು ಸರ್ಕಾರದ ವರ್ಚಸ್ಸು ಹಾಗೂ ಆಡಳಿತದ ಮೇಲೆ ಭಾರಿ ಹೊಡೆತ ನೀಡಬಹುದು ಎಂಬುದು ಮುಖ್ಯಮಂತ್ರಿಗಳ ಲೆಕ್ಕಾಚಾರವಾಗಿದೆ. ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದ ವೇಳೆ ಎಲ್ಲ ಶಾಸಕರು ಒಗ್ಗಟ್ಟಾಗಿ ಸರ್ಕಾರದ ನಾಯಕತ್ವದ ಬೆನ್ನಿಗೆ ನಿಲ್ಲಬೇಕು ಎಂಬುದು ಸಿಎಂ ಅವರ ಪ್ರಮುಖ ಉದ್ದೇಶವಾಗಿದೆ. ಇದೇ ಕಾರಣಕ್ಕಾಗಿ ಅಸಮಾಧಾನಗೊಂಡಿದ್ದ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ನಡೆದಿದೆ.

ಯಾವ ನಾಯಕರಿಗೆ ಯಾವ ಹುದ್ದೆ?

  • ಬಿ. ಶಿವಣ್ಣ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ
  • ಕೆ. ಷಡಕ್ಷರಿ: ಕರ್ನಾಟಕ ರಾಜ್ಯ ಗಣಿ ನಿಗಮ ಅಧ್ಯಕ್ಷ
  • ಪಿ.ಎಂ. ಅಶೋಕ್: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ
  • ಎ.ಆರ್. ಕೃಷ್ಣಮೂರ್ತಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ
  • ಹಂಪನಗೌಡ ಬಾದರ್ಲಿ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ
  • ಡಿ.ಜಿ. ಶಾಂತನಗೌಡ: ತ್ಯಾಜ್ಯ ನಿರ್ವಹಣಾ ನಿಗಮ ಅಧ್ಯಕ್ಷ
  • ಜಿ.ಎಚ್. ಶ್ರೀನಿವಾಸ್: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ
  • ಮಹಾಂತೇಶ್ ಕೌಜಲಗಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷ
  • ಎಸ್.ಎನ್. ಸುಬ್ಬಾರೆಡ್ಡಿ: ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷ
  • ಎನ್.ಎಚ್. ಕೋನರಡ್ಡಿ: ಕರ್ನಾಟಕ ಕೃಷಿ ಬೆಲೆ ಆಯೋಗ ಅಧ್ಯಕ್ಷ
  • ಬಸನಗೌಡ ದದ್ದಲ್: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ
  • ಅಲ್ಲಂಪ್ರಭು ಪಾಟೀಲ್: ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ
  • ಶ್ಯಾಮ್ ನಾಟೇಕರ್: ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ
  • ಹೆಚ್.ಸಿ. ಲಲಿತ್ ರಾಘವ್: ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ
  • ಸುಭಾಷ್ ರಾಥೋಡ್: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ
  • ಬೇಲೂರು ಗೋಪಾಲಕೃಷ್ಣ: ಸರ್ಕಾರಿ ಮುಖ್ಯ ಸಚೇತಕ
  • ತನ್ವೀರ್ ಸೇಟ್: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
  • ಮಂಜುನಾಥ್ ಭಂಡಾರಿ: ವಿಧಾನ ಪರಿಷತ್ ಮುಖ್ಯ ಸಚೇತಕ

ಒಟ್ಟಾರೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ-ಮಂಡಳಿಗಳ ಸ್ಥಾನಮಾನ ನೀಡುವ ಮೂಲಕ ಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಸ್ಥಾನ ಮತ್ತು ಸರ್ಕಾರವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ. ಆದರೆ, ಈ ಪಟ್ಟಿಯಲ್ಲೂ ಯಾವುದೇ ಸ್ಥಾನಮಾನ ಸಿಗದ ಶಾಸಕರು ಮುಂದಿನ ದಿನಗಳಲ್ಲಿ ಯಾವ ರೀತಿಯ ನಿಲುವು ತಳೆಯುತ್ತಾರೆ ಮತ್ತು ಯಾವ ಹೊಸ ಬೆಳವಣಿಗೆಗಳಿಗೆ ಕಾರಣವಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Add Zee News as a Preferred Source
TAGS:
Kannada News