• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹಾಸನ ಡಿಸಿ ವಿರುದ್ದ ಲೋಕಾಯುಕ್ತದಲ್ಲಿ ದೂರು

ಹಾಸನ ಡಿಸಿ ವಿರುದ್ದ ಲೋಕಾಯುಕ್ತದಲ್ಲಿ ದೂರು

ಹಣದ ಹಂಚಿಕೆ ಮತ್ತು ಹೊಂದಾಣಿಕೆಯಲ್ಲಿ DC PA ಸೇರಿದಂತೆ ಮಧ್ಯವರ್ತಿಗಳ ಮೂಲಕ ಹಣದ ವಹಿವಾಟು ನಡೆದಿರುವ ಕುರಿತು ಕೇಳಿಬಂದಿರುವ ಗಂಭೀರ ಆರೋಪದ ಕುರಿತ ಸಮಗ್ರ ತನಿಖೆಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಲೋಕಾಯುಕ್ತ ಎಡಿಜಿಪಿಗೆ ದೂರು ದಾಖಲಾಗಿದೆ.

Written ByChetana Devarmani
Published: Nov 10, 2026, 22:26 IST|Updated: Nov 10, 2026, 22:28 IST
joinshare
ಹಾಸನ ಡಿಸಿ ವಿರುದ್ದ ಲೋಕಾಯುಕ್ತದಲ್ಲಿ ದೂರು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹಾಸನ ಡಿಸಿಗೆ ಸಂಕಷ್ಟ ಶುರುವಾಗಿದೆ...ಹಾಸನ ಡಿಸಿ ಲತಾ ಕುಮಾರಿ ಹಾಗು ಡಿಸಿ ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ತನಿಖೆಗೆ ಒಳಗಾಗುವ ಆತಂಕ ಎದುರಾಗಿದೆ.ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ..ಈ ಕುರಿತು ಇಲ್ಲಿದೆ ಎಕ್ಸ್ ಕ್ಲೂಸಿವ್ ಸ್ಟೋರಿ...

ಸಾರ್ವಜನಿಕವಾಗಿ ಬಿಡುಗಡೆಯಾಗಿರುವ WhatsApp ಸಂಭಾಷಣೆಗಳಲ್ಲಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ (DC), ಉಪವಿಭಾಗಾಧಿಕಾರಿ (AC), ಅಪರ ಜಿಲ್ಲಾಧಿಕಾರಿ (ADC), ತಹಶೀಲ್ದಾರ್ ಹಾಗೂ ಇತರ ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳ ಹಣಕಾಸಿನ ವ್ಯವಹಾರ ಆರೋಪ ಇದೀಗ ಗಂಭೀರ ಸ್ವರೂಪ ಪಡೆದಿದೆ. ಹಣದ ಹಂಚಿಕೆ ಮತ್ತು ಹೊಂದಾಣಿಕೆಯಲ್ಲಿ DC PA ಸೇರಿದಂತೆ ಮಧ್ಯವರ್ತಿಗಳ ಮೂಲಕ ಹಣದ ವಹಿವಾಟು ನಡೆದಿರುವ ಕುರಿತು ಕೇಳಿಬಂದಿರುವ ಗಂಭೀರ ಆರೋಪದ ಕುರಿತ ಸಮಗ್ರ ತನಿಖೆಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಲೋಕಾಯುಕ್ತ ಎಡಿಜಿಪಿಗೆ ದೂರು ದಾಖಲಾಗಿದೆ.

ಸಕಲೇಶಪುರದ ಮೂರು ಕ್ರಷರ್ ಕಡತಗಳ ಅನುಮೋದನೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಹಣದ ವ್ಯವಹಾರಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದೆ ..ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988 ಯಡಿಯಲ್ಲಿ ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ದಿನೇಶ್ ಕಲ್ಲಹಳ್ಳಿ ಲೋಕಾಯುಕ್ತಕ್ಕೆ ದೂರು‌ ನೀಡಿದ್ದು ನಿಸ್ಪಕ್ಷಪಾತ ತನಿಖೆಗೆ ಅಗ್ರಹಿಸಿದ್ದಾರೆ..

ಸಾರ್ವಜನಿಕವಾಗಿ  WhatsApp ಸಂಭಾಷಣೆಗಳ ಸ್ಟೀನ್‌ಶಾಟ್‌ಗಳಲ್ಲಿ ಭಾರೀ ಭ್ರಷ್ಟಾಚಾರದ ಉಲ್ಲೇಖವಾಗಿದ್ದು, ಪ್ರಕರದಲ್ಲಿ ಉನ್ನತ ಅಧಿಕಾರಿಗಳ ಹುದ್ದೆಗಳನ್ನು ಉಲ್ಲೇಖಿಸಿ ಲಕ್ಷಾಂತರ ರೂಪಾಯಿಗಳ ಹಣಕಾಸಿನ ವ್ಯವಹಾರ, ಹಂಚಿಕೆ, ಹೊಂದಾಣಿಕೆ ಹಾಗೂ ಸರ್ಕಾರಿ ಕಡತಗಳ ವಿಲೇವಾರಿಗೆ ನಡೆದಿರುವ ಆರೋಪವಿದೆ..
ಗಂಭೀರ ಸ್ವರೂಪದ ಸಂಭಾಷಣೆಗಳಲ್ಲಿ  DC,AC, ADC,ತಹಶೀಲ್ದಾರ್ ಹಾಗೂ DC PA ಸೇರಿದಂತೆ ವಿವಿಧ ವ್ಯಕ್ತಿಗಳ ಉಲ್ಲೇಖಗಳಿದೆ.. ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಹಣದ ವ್ಯವಹಾರಗಳನ್ನು ನಡೆಸಿರುವ ಸಾಧ್ಯತೆಯ ಕುರಿತು ಸಾರ್ವಜನಿಕ ಹಿತಾಸಕ್ತಿಯಿಂದ ಸಮಗ್ರ ತನಿಖೆ ನಡೆಸುವುದು ಅತ್ಯಗತ್ಯವಾಗಿದೆ ಎಂದ ದೂರಿನಲ್ಲಿ ಉಲ್ಲೇಖಿಸಲಾಗಿದೆ ..

ಸಾರ್ವಜನಿಕವಾಗಿ ಬಿಡುಗಡೆಯಾಗಿರುವ WhatsApp ಸಂಭಾಷಣೆಗಳಲ್ಲಿ ಜಿಲ್ಲಾಧಿಕಾರಿ ಅವರಿಗೆ ಸಂಬಂಧಿಸಿದಂತೆ ₹50 ಲಕ್ಷ, ₹60 ಲಕ್ಷ ಹಾಗೂ ₹75 ಲಕ್ಷದವರೆಗಿನ ಮೊತ್ತಗಳ ಉಲ್ಲೇಖಗಳು ಕಂಡುಬಂದಿದೆ.. ವಿವಿಧ ಹಂತಗಳಲ್ಲಿ ಹಣದ ಹೊಂದಾಣಿಕೆ, ಪಾವತಿ ಮತ್ತು ಹಂಚಿಕೆ ಕುರಿತು ಚರ್ಚಿಸಿರುವುದು ಮೇಲ್ನೋಟಕ್ಕೆ ಗೋಚರಿಸುತ್ತದೆ. ಈ ಮೊತ್ತಗಳು ಯಾವ ಉದ್ದೇಶಕ್ಕಾಗಿ ಪ್ರಸ್ತಾಪವಾಗಿವೆ, ಹಣವನ್ನು ಯಾರು ಪಾವತಿಸಿದ್ದಾರೆ. ಯಾರಿಗೆ ತಲುಪಿಸಲಾಗಿದೆ?

ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳ ಅಧಿಕೃತ ಕರ್ತವ್ಯಗಳೊಂದಿಗೆ ಈ ವ್ಯವಹಾರಗಳಿಗೆ ಸಂಬಂಧವಿದೆಯೇ ಎಂಬುದನ್ನು ತನಿಖೆಯ ಮೂಲಕ ದೃಢಪಡಿಸಬೇಕಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಆಗ್ರಹಿಸಿದ್ದಾರೆ. 

ಇದೇ ವೇಳೆ ಸಂಭಾಷಣೆಗಳಲ್ಲಿ ಉಪವಿಭಾಗಾಧಿಕಾರಿ  ಅವರಿಗೆ ಸಂಬಂಧಿಸಿದಂತೆ ಸುಮಾರು ₹13 ಲಕ್ಷ ಮತ್ತು ₹20 ಲಕ್ಷಗಳ ಮೊತ್ತಗಳ ಉಲ್ಲೇಖವಿದೆ .. ಅಪರ ಜಿಲ್ಲಾಧಿಕಾರಿ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳ ಹೆಸರಿನಲ್ಲಿಯೂ ಹಣದ ಹಂಚಿಕೆ ಮತ್ತು ಪಾವತಿಗಳ ಕುರಿತು ಚರ್ಚಿಸಿರುವುದು ಕಂಡುಬರುತ್ತದೆ. ಈ ಹಿನ್ನಲೆ ಸಂಬಂಧಪಟ್ಟ ಮೂಲ ಮೊಬೈಲ್ ಸಾಧನಗಳು, ಮೂಲ WhatsApp ಚಾಟ್‌ಗಳು, ಲಭ್ಯವಿರುವ ಬ್ಯಾಕಪ್‌ಗಳು, ಮೆಟಾಡೇಟಾ ಮತ್ತು ಇತರ ಡಿಜಿಟಲ್ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯದ ಕಳಿಸಬೇಕು.

ಸಂದೇಶಗಳನ್ನು ಕಳುಹಿಸಿದವರು, ಸ್ವೀಕರಿಸಿದವರು, ದಿನಾಂಕ, ಸಮಯ, ಸಂದೇಶಗಳ ನಿರಂತರತೆ ಪತ್ತೆಹಚ್ಚಬೇಕು. ಈ ದೂರಿನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲೋಕಾಯುಕ್ತ ಎಡಿಜಿಪಿಗೆ ದೂರಿನಲ್ಲಿ ಆಗ್ರಹಿಸಿದ್ದಾರೆ..

ಒಟ್ಟಾರೆ ಡಿಸಿ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಕೇಂದ್ರ ಸಚಿವ ಹೆಚ್ ಡಿಕೆ ಸಾಕ್ಷಿ ಸಮೇತ ಪ್ರಕರಣ ಬಯಲು ಮಾಡಿದ ನಂತರ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದಿದೆ..ಲೋಕಾಯುಕ್ತ ದೂರಿನ ಅನ್ವಯ ತನಿಖೆ ನಡೆದ್ರೆ ಹಾಸನ ಡಿಸಿ ಸೇರಿದಂತೆ ಅಧಿಕಾರಿಗಳು ತನಿಖೆ ಒಳಪಡಬೇಕಾಗಿದೆ ..ಇಡೀ ಪ್ರಕರಣ ಡಿಸಿ ಲತಾಕುಮಾರಿ ಅವರ ವರ್ಚಸ್ಸಿಗೆ ಪೆಟ್ಟು ಬಿದ್ದಿದ್ದು ಸರ್ಕಾರಕ್ಕೆ ತೀವ್ರ ಮುಜುಗರಕ್ಕೀಡು ಮಾಡಿದೆ..
 

Add Zee News as a Preferred Source
TAGS:
Crime