• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸಂಧಾನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ 108 ಆಂಬ್ಯುಲೆನ್ಸ್ ನೌಕರರು

ಸಂಧಾನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ 108 ಆಂಬ್ಯುಲೆನ್ಸ್ ನೌಕರರು

ರಾಜ್ಯ ಸರ್ಕಾರ ಹಾಗೂ '108' ಆಂಬುಲೆನ್ಸ್ ಸಿಬ್ಬಂದಿಯ ನಡುವೆ ಭುಗಿಲೆದ್ದಿದ್ದ ಜಟಾಪಟಿ ಇದೀಗ ಸುಖಾಂತ್ಯ ಕಂಡಿದ್ದು, '108' ಆಂಬುಲೆನ್ಸ್ ಸಿಬ್ಬಂದಿಗಳ ಸಂಘ ಕರೆ ನೀಡಿದ್ದ ಮುಷ್ಕರವನ್ನು ಕೈಬಿಡಲಾಗಿದೆ.

Written ByYashaswini V
Published: Oct 14, 2026, 04:55 PM IST|Updated: Oct 14, 2026, 04:57 PM IST
joinshare
ಸಂಧಾನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ 108 ಆಂಬ್ಯುಲೆನ್ಸ್ ನೌಕರರು

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ನಿಂಬೆ ಚಹಾ ಆರೋಗ್ಯಕ್ಕೆ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿರುವವರು ಇದನ್ನು ತಪ್ಪಿಸಬೇಕು!

ನಿಂಬೆ ಚಹಾ ಆರೋಗ್ಯಕ್ಕೆ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿರುವವರು ಇದನ್ನು ತಪ್ಪಿಸಬೇಕು!

2

ಸಾಂಪ್ರದಾಯಿಕ ರುಚಿಯನ್ನೇ ಬ್ರ್ಯಾಂಡ್‌ ಆಗಿಸಿದ ಉದ್ಯಮ.. ಮಣ್ಣಿನ ಮಡಕೆಯ ಮೊಸರಿನಿಂದ ಯಶಸ್ಸಿನ ಹಾದಿ!

3

ಮೀರತ್ "ಬ್ಲೂ ಡ್ರಮ್" ಮರ್ಡರ್ ಕೇಸ್: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ!

4

ಸಂಧಾನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ 108 ಆಂಬ್ಯುಲೆನ್ಸ್ ನೌಕರರು

5

ರೈಲ್ವೆ ಉದ್ಯೋಗಿಗಳಿಗೆ ದೀಪಾವಳಿ ಬಂಪರ್‌ ಗಿಫ್ಟ್‌! 78 ದಿನಗಳ ಬೋನಸ್‌ಗೆ ಕೇಂದ್ರ ಸಚಿವ ಸಂಪುಟ ಅಸ್ತು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು 
ರಾಜ್ಯಾದ್ಯಂತ ತುರ್ತು ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಸೃಷ್ಟಿಸಿದ್ದ '108' ಆಂಬುಲೆನ್ಸ್ ಸಿಬ್ಬಂದಿಯ ಮುಷ್ಕರ ಅಂತ್ಯಗೊಂಡಿದೆ.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ನೌಕರರ ಮುಖಂಡರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ '108' ಆಂಬುಲೆನ್ಸ್ ಸಿಬ್ಬಂದಿಯ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಚರ್ಚಿಸಿ, ನೌಕರರ ಪ್ರಮುಖ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ, ಪ್ರತಿಭಟನೆಯನ್ನು ಹಿಂಪಡೆಯಲು ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ ಅಧಿಕೃತವಾಗಿ ನಿರ್ಧರಿಸಿದೆ.

ಸರ್ಕಾರದ ಈ ಸಕಾರಾತ್ಮಕ ಸ್ಪಂದನೆಗೆ ಮಣಿದ '108' ಆಂಬುಲೆನ್ಸ್ ನೌಕರರ ಸಂಘ, ಮುಷ್ಕರದ ಕರೆಯನ್ನು ಹಿಂಪಡೆದು ಸೇವೆ ಮುಂದುವರಿಸಲು ಸಮ್ಮತಿಸಿದೆ ಎಂದು ತಿಳಿದುಬಂದಿದೆ.

ವೇತನ ವಾರ್ಷಿಕ ಇನ್‌ಕ್ರಿಮೆಂಟ್ ಹೆಚ್ಚಳ:
ಎಲ್ಲ ಸಿಬ್ಬಂದಿಗೂ ಏಕರೂಪ ವೇತನ ಜಾರಿ, ಜ್ಯೇಷ್ಠತೆ ಆಧಾರಿತ ವೇತನ ನಿಗದಿ ಹಾಗೂ ಪ್ರತಿ ತಿಂಗಳು ವಿಳಂಬವಿಲ್ಲದೆ ಸಕಾಲಕ್ಕೆ ವೇತನ ಪಾವತಿ ಮಾಡುವುದು ಸೇರಿದಂತೆ ಹಲವು ಮೂಲಭೂತ ಬೇಡಿಕೆಗಳ ಈಡೇರಿಕೆಗೆ ನೌಕರರು ಪಟ್ಟು ಹಿಡಿದಿದ್ದರು. ಸಮಸ್ಯೆ ಬಗೆಹರಿಯದಿದ್ದರೆ ಇಂದು ರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿತ್ತು.

ರಾಜ್ಯದಲ್ಲಿ ಈಗಾಗಲೇ ಆಂಬ್ಯುಲೆನ್ಸ್‌ ವಾಹನಗಳ ಕೊರತೆಯಿದ್ದು, ಅಗತ್ಯವಿರುವ ಸುಮಾರು 750 ಆಂಬುಲೆನ್ಸ್‌ಗಳಲ್ಲಿ ಕೇವಲ 350ರಿಂದ 400 ವಾಹನಗಳು ಮಾತ್ರ ಕಾರ್ಯಾಚರಣೆ ನಡೆಸುತ್ತಿವೆ ಎಂಬ ಮಾಹಿತಿ ಇತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೌಕರರು ಮುಷ್ಕರಕ್ಕಿಳಿದರೆ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳು, ಗರ್ಭಿಣಿಯರು ಹಾಗೂ ಅಪಘಾತಕ್ಕೀಡಾದವರು ತೀವ್ರ ಸಂಕಷ್ಟಕ್ಕೆ ಸಿಲುಕುವ ಆತಂಕವಿತ್ತು. ಇದೀಗ '108' ಆಂಬುಲೆನ್ಸ್ ನೌಕರರು ಮುಷ್ಕರ ವಾಪಸ್‌ ಪಡೆದಿರುವುದರಿಂದ ರಾಜ್ಯದ ಜನತೆ ಹಾಗೂ ರೋಗಿಗಳ ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಆಂಬುಲೆನ್ಸ್ ನೌಕರರು ಸರ್ಕಾರ ಮುಂದೆ ಇಟ್ಟಿದ್ದ ಪ್ರಮುಖ ಬೇಡಿಕೆಗಳೇನು?
* ವೇತನ ಹೆಚ್ಚಳ 
* ಎಲ್ಲಾ ಸಿಬ್ಬಂದಿಗೂ ಏಕರೂಪ ವೇತನ ಜಾರಿ
* ಜ್ಯೇಷ್ಠತೆ ಆಧಾರಿತ ವೇತನ ನಿಗದಿ
* ಪ್ರತಿ ತಿಂಗಳು ವಿಳಂಬವಿಲ್ಲದೆ ವೇತನ ನೀಡುವಂತೆ ಆಗ್ರಹ
* ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ಪಾಳಿ ಬದಲು ಎರಡು ಪಾಳಿ ವ್ಯವಸ್ಥೆ ಜಾರಿಗೆ ಆಗ್ರಹ 
* ಮೊದಲಿನಂತೆ ಎರಡು ಪಾಳಿಯಲ್ಲಿ ಸಮಯ ನಿಗದಿಗೆ ಅವಕಾಶಕ್ಕೆ ಆಗ್ರಹವೂ ಸೇರಿ ಇನ್ನಿತರ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಆಂಬುಲೆನ್ಸ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರು. 
 

Add Zee News as a Preferred Source
TAGS:
Kannada News